ಬೀದರ್‌ | ಬೋಧಗಯಾ ಟೆಂಪಲ್‌ ಕಾಯ್ದೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

Date:

ಬಿಹಾರದ ಬೋಧಗಯಾದಲ್ಲಿರುವ ಮಹಾಬೋಧಿ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ಹಸ್ತಾಂತರ, ಬೋಧಗಯಾ ಟೆಂಪಲ್ (ಬಿಟಿ) ಕಾಯ್ದೆ–1949 ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಯಿತು.

ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಹಾಗೂ ಎಲ್ಲ ತಾಲ್ಲೂಕು ಸಮಿತಿಗಳ ಸಹಯೋಗದಲ್ಲಿ ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ಡಾ.ಅಂಬೇಡ್ಕರ್ ಭವನದಿಂದ ಆರಂಭಗೊಂಡು ಡಾ.‌ಬಿ.ಆರ್.ಅಂಬೇಡ್ಕರ್ ವೃತ್ತದ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

‌ಈ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ್‌ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಂವಿಧಾನದ ಕಲಂ 25, 26ರ ಅನ್ವಯ ಎಲ್ಲ ಜಾತಿ, ಜನಾಂಗದವರು ಸ್ವತಂತ್ರವಾಗಿ ದೇವಸ್ಥಾನ, ಮಂದಿರ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಆಯಾ ಜಾತಿಗಳ ದೇವಸ್ಥಾನ, ಟ್ರಸ್ಟ್‌ಗಳಿಗೆ ಆಯಾ ಜಾತಿಗಳ ಪ್ರಮುಖರ ಆಡಳಿತ ಮಂಡಳಿಗಳಿವೆ. ಆದರೆ, ಬೋಧಗಯಾದಲ್ಲಿ ಇದಕ್ಕೆ ವಿರುದ್ಧವಾದ ಆಡಳಿತ ಮಂಡಳಿ ಇದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

WhatsApp Image 2025 03 12 at 5.36.13 PM
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಭಂತೆ ಧರ್ಮಾಪಾಲ್ ರೇಕುಳಗಿ ಮೌಂಟ್ ಮನ್ನಾಎಖೆಳ್ಳಿ, ಭಂತೆ ಬೋದಿ ರತ್ನ ಆನಂದ ಬುದ್ದ ವಿಹಾರ ಹಿಪ್ಪಳಗಾಂವ, ಭಂತೆ ಬೋಧಿ ಧಮ್ಮ ಸನ್ನತ್ತಿ ಬುದ್ಧ ವಿಹಾರ ಹುಪ್ಪಳಾ, ಭಂತೆ ಸಂಘ ರಖಿತ ವೈಶಾಲಿ ನಗರ ಆಣದೂರ ಹಾಗೂ ಭಂತೆ ಧಮ್ಮದೀಪ ದೇವನಾಂಪ್ರಿಯ ಬುದ್ಧ ವಿಹಾರ್ ಹಾಲಹಾಳ್ಳಿ(ಕೆ) ನೇತ್ರತ್ವ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವೃದ್ದಾಪ್ಯ ವೇತನ ಬಾರದೆ ವೃದ್ಧ ದಂಪತಿ ಪರದಾಟ; ಕಣ್ಣು ಹಾಯಿಸುವರೇ ಅಧಿಕಾರಿಗಳು?

ಭಾರತೀಯ ಬೌದ್ಧ ಮಹಾಸಭೆಯ ರಾಜ್ಯ ಅಧ್ಯಕ್ಷ ಮನೋಹರ್ ಮೋರೆ , ರಾಜ್ಯ ಕಾರ್ಯದರ್ಶಿ ವೈಶಾಲಿ ಮೋರೆ ಜಿಲ್ಲಾಧ್ಯಕ್ಷ ರಾಜಪ್ಪ ಗುನಳ್ಳಿಕರ್, ಬೀದರ ತಾಲೂಕಾ ಅಧ್ಯಕ್ಷ ಶಿವಕುಮಾರ ಸದಾಫುಲೆ , ಭಾಲ್ಕಿ ತಾಲೂಕ ಅಧ್ಯಕ್ಷ ವಿಜಯಕುಮಾರ ಗಾಯಕವಾಡ, ಬಸವಕಲ್ಯಾಣ ತಾಲೂಕ ಅಧ್ಯಕ್ಷ ಮೈಸೆ ಮನೋಹರ್, ಔರಾದ ತಾಲೂಕ ಅಧ್ಯಕ್ಷ ಸೋಪಾನರಾವ ಡೋಂಗ್ರೆ, ಹಿರಿಯರಾದ ವಿಠಲ್ ದಾಸ್ ಪ್ಯಾಗೆ , ಶಿವಶರಣಪ್ಪ ಹುಗ್ಗೆ ಪಾಟೀಲ್, ಮಾರುತಿ ಬೌದ್ದೆ, ಕಾಶಿನಾಥ ಚೆಲವಾ, ಮಹೇಶ್ ಗೋರನಾಳಕರ, ಅರುಣ್ ಪಟೇಲ್, ಸೂರ್ಯಕಾಂತ್ ಭಾವಿದೊಡ್ಡಿ, ಡಾ. ಕಾಶಿನಾಥ್ ಚೆಲುವಾ, ಸೂರ್ಯಕಾಂತ ಸಿಂಗೆ, ನರಸಪ್ಪ ಮೇಟಿ, ತಳವೀರ ಸಿಂಗ್ ಸಾಮ್ರಾಟ್, ಕಂಟೆಪ್ಪ ರೂದನೂರ್‌, ಜಗನ್ನಾಥ್ ಬಡಿಗೇರ, ಜಗನ್ನಾಥ್ ಕಾಂಬಳೆ ಸಂತೋಷ್ ಫೂಲೆ, ಮಂಜುಳಾ ಭಾವಿದೊಡ್ಡಿ, ಚಂದ್ರಕಲಾ ಬಡಿಗೇರ್, ಧನರಾಜ್ಯೋತಿ ,ಗೌತಮ್ ಮೀಸೆ, ಹಾಗೂ ಭಾರತೀಯ ಬೌದ್ಧ ಮಹಾ ಸಭೆಯ ಜಿಲ್ಲಾ ಹಾಗೂ ತಾಲೂಕಿನ ಎಲ್ಲಾ ಪದಾಧಿಕಾರಿಗಳು ಹಾಗೂ ಸಮತಾ ಸೈನಿಕ ದಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...