ಬೀದರ್‌ | ಸಿಂಧನಕೇರಾ ಗ್ರಾ.ಪಂ. ಪಿಡಿಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

Date:

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ಕಂಪ್ಯೂಟರ್‌ ಆಪರೇಟರ್ ಸುಭಾಷ್ ಅವರ ಸಾವಿಗೆ ಕಾರಣರಾದ ಪಿಡಿಒ ಸುಗಂಧ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಹುಮನಾಬಾದ್‌ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಪಿಡಿಒ ಅಮಾನತಿಗೆ ಆಗ್ರಹಿಸಿದರು.

ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಗಣಪತಿ ಅಷ್ಟೂರೆ ಮಾತನಾಡಿ,ʼಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ಅನೇಕ ವರ್ಷಗಳಿಂದ ಸುಭಾಷ್ ಅವರು ಕಂಪ್ಯೂಟರ್ ಆಪರೇಟರ್ ಕೆಲಸ ನಿರ್ವಹಿಸುತ್ತಿದ್ದರು. ಪಿಡಿಒ ಸುಗಂಧ ಅವರು ಸುಭಾಷ್ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಹೆಚ್ಚಿನ ಒತ್ತಡ ಹಾಕಿದ್ದರಿಂದಾಗಿ ಅವರು ಮೃತಪಟ್ಟಿದ್ದಾರೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈ ಕುರಿತು ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.‌ ಸುಭಾಷ್ ಮೃತಪಟ್ಟು 20 ದಿನಗಳು ಕಳೆದಿವೆ. ಆದರೆ ಈವರೆಗೆ ಅವರನ್ನು ಬಂಧಿಸಿಲ್ಲ ಮತ್ತು ಸೇವೆಯಿಂದ ವಜಾಗೊಳಿಸಿಲ್ಲ. ಹೀಗಾಗಿ ತಕ್ಷಣ ಅವರನ್ನು ವಜಾಗೊಳಿಸಬೇಕುʼ ಎಂದು ‌ಆಗ್ರಹಿಸಿದರು.

ತಾಲ್ಲೂಕು ಪಂಚಾಯಿತಿ ಎದುರುಗಡೆ ನಡೆಯುತ್ತಿದ್ದ ಪ್ರತಿಭಟನೆ ವಿಷಯ ತಿಳಿದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ, ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮಾರಾವ್ ಪಾಟೀಲ ಭೇಟಿ ನೀಡಿದರು.

WhatsApp Image 2025 04 22 at 7.55.14 AM
ಪ್ರತಿಭಟನಾ ಸ್ಥಳಕ್ಕೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್‌ ಭೇಟಿ ನೀಡಿದರು.

ʼಈಗಾಗಲೇ ಈ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಮೃತರ ಕುಟುಂಬಕ್ಕೆ ಪಂಚಾಯಿತಿಯಲ್ಲಿ ಒಂದು ನೌಕರಿ ಮತ್ತು ಪರಿಹಾರ ಒದಗಿಸುವಂತೆ ಒತ್ತಾಯಿಸಲಾಗುವುದುʼ ಎಂದು ಭರವಸೆ ನೀಡಿದರು.

ಸಿದ್ದಾರ್ಥ್ ಡಾಂಗೆ, ವೈಜಿನಾಥ ಸಿಂಧೆ, ಸುಶೀಲ್ ಕುಮಾರ್ ಭೋಲಾ, ಅಶೋಕ್ ಸಿಂಧೆ, ಮಾರುತಿ ಭಾವಿಕಟ್ಟಿ, ಸುಭಾಷ್ ಮಹಗಾಂವಕರ್, ಅನಂತ ಮಾಳಗೆ, ಸಿದ್ದಾರ್ಥ್ ಜಾನವೀರ, ತುಕಾರಾಮ ಲಡಕರ್‌, ಭೀಮರೆಡ್ಡಿ ಸಿಂಧನಕೇರಾ, ಯುವರಾಜ ಐಹೋಳಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...