ಸರ್ಕಾರದಿಂದ ವಿಕಲಚೇತನರಿಗೆ ಸಿಗುವಂತಹ ಸೌಲಭ್ಯಗಳು ಸಕಾಲದಲ್ಲಿ ಸಿಗುವಂತಾಲಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ʼಮಕ್ಕಳ ಸಂರಕ್ಷಣೆʼ ವಿಷಯದ ಕುರಿತು ವಿಕಲಚೇತನರ ತಾಲೂಕಾ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಒಂದು ದಿನದ ಅರಿವಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೀದರನಿಂದ ಚಾಮರಾಜ ನಗರದವರೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಿಕಲಚೇತನರಿಗೆ ಗುರುತಿಸುವಂತಹ ಕೆಲಸ ಆಗಬೇಕಾಗಿದ್ದು, ಬೀದರ ಜಿಲ್ಲೆಯಿಂದ ಪರಿಣಾಮಕಾರಿಯಾಗಿ ಪ್ರಾರಂಭವಾಗಿ ರಾಜ್ಯದ ಉದ್ಧಗಲಕ್ಕೂ ಮಾಡಿ ಪ್ರತಿಯೊಂದು ಸಮಾಜದಲ್ಲಿರುವಂತಹ ಕಟ್ಟ ಕಡೆಯ ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡುವ ಉದ್ದೇಶವಾಗಿದ್ದು ಮತ್ತು ವಿಕಲಚೇತನರಿಗೆ ಮೀಸಲಿಟ್ಟ ಅನುದಾನ ದುರ್ಬಳಕೆ ಆಗದಂತೆ ಅವರ ಸೌಲಭ್ಯಗಳಿಗೆ ಬಳಕೆ ಆಗಬೇಕಾಗಿದೆʼ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮ ವ್ಯವಸ್ಥಾಪಕರು, ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ, ಜಿಲ್ಲಾಧಿಕಾರಿಗಳ ಕಛೇರಿ ಕೊಪ್ಪಳದ ಹರೀಶ್ ಜೋಗಿ ಅವರು ವಿಕಲಚೇತನರ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಇದನ್ನೂ ಓದಿ : ಬೀದರ್ | ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಮ್.ಎಸ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರೂಪಾ ಎಸ್., ಮಕ್ಕಳ ಕಲ್ಯಾಣ ಸಮಿತಿ ಬೀದರನ ಅಧ್ಯಕ್ಷ ಸೀಮಪ್ಪಾ, ಬಾಲ ನ್ಯಾಯ ಮಂಡಳಿ ಸದಸ್ಯ ಸಂಜೀವಕುಮಾರ, ಮಕ್ಕಳ ರಕ್ಷಣಾ ಅಧಿಕಾರಿ ಗೌರಿಶಂಕರ ಸೇರಿದಂತೆ ತಾಲ್ಲೂಕಾ, ನಗರದ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಯ ಅದಿಕಾರಿಗಳು ಉಪಸ್ಥಿತರಿದ್ದರು.





