ಬೀದರ್‌ | ಮಳೆ ಅವಾಂತರ : ಮನೆಗೆ ನುಗ್ಗಿದ ಚರಂಡಿ ನೀರು

Date:

ಮಂಗಳವಾರ ಸಂಜೆ ಸುರಿದ ಮಳೆಯ ಪರಿಣಾಮ ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ್‌ ಗ್ರಾಮದ ಗಡಿ ಎದುರಿನ ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ಚರಂಡಿಗಳು ಮುಚ್ಚಿರುವುದೇ ಈ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

ಹಲವು ತಿಂಗಳಿನಿಂದ ಒಳಚರಂಡಿಯನ್ನು ಸ್ವಚ್ಛಗೊಳಿಸಿಲ್ಲ. ಹಲವು ವರ್ಷಗಳ ಹಿಂದೆ ನಿರ್ಮಿಸಿದ ಚರಂಡಿಗಳಿಂದ ಸರಾಗವಾಗಿ ನೀರು ಹೋಗಲು ಜಾಗವಿಲ್ಲ. ಸಣ್ಣ ಪ್ರಮಾಣದಲ್ಲಿ ಮಳೆ ಬಿದ್ದರೂ ಸಹ ನೀರು ಚರಂಡಿಯಲ್ಲಿ ಹೋಗದೇ ಅದರೊಳಗಿನ ಮಲ, ಮೂತ್ರದ ಗಲಿಜಿನೊಂದಿಗೆ ಮನೆಗಳಿಗೆ ನುಗ್ಗತ್ತಿದೆ ಎಂದು ಸ್ಥಳೀಯ ನಿವಾಸಿ ಚಂದ್ರಪ್ಪಾ ಬಿರಾದರ್‌ ಹೇಳಿದ್ದಾರೆ.

ಎರಡು ವಾರಗಳ ಹಿಂದೆ ಸಿಸಿ ರಸ್ತೆ ನಿರ್ಮಿಸಿದ್ದಾರೆ. ಆದರೆ ಚರಂಡಿ ನಿರ್ಮಿಸಿಲ್ಲ. ಚರಂಡಿ ವ್ಯವಸ್ಥೆ ಸರಿಪಡಿಸಲು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಿಗೆ, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತೆ ಮಳೆಯಾದರೆ ಇಲ್ಲಿನ ನಿವಾಸಿಗಳ ಸ್ಥಿತಿ ಚಿಂತಾಜನಕವಾಗಲಿದೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 04 09 at 10.20.08 AM
ಚರಂಡಿ ನೀರು ಹರಿದು ಬಂದು ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ನ್ನೇ ಆವರಿಸಿಕೊಂಡಿದೆ. ಮಹಿಳೆಯರು, ಸ್ಥಳಿಯರಿಗೆ ನೀರು ತೆಗೆದುಕೊಳ್ಳಲು ಸಾಧ್ಯವಾಗಿದ ಸ್ಥಿತಿ ನಿರ್ಮಾಣವಾಗಿದೆ.

ʼಸುಮಾರು 20 ವರ್ಷಗಳ ಹಿಂದೆ ಚರಂಡಿ ನಿರ್ಮಿಸಲಾಗಿದೆ. ಇದರಿಂದ ಬೇರೆ ವಾರ್ಡ್‌ಗಳ ಚರಂಡಿ ನೀರು ನಮ್ಮ ಓಣಿಯ ಚರಂಡಿಗೆ ನುಗ್ಗುತ್ತವೆ. ಚರಂಡಿ ನೀರು ಸರಾಗವಾಗಿ ಮುಂದೆ ಹೋಗಲು ವ್ಯವಸ್ಥೆ ಇರದಕ್ಕೆ ನೀರು ಮನೆಗಳಿಗೆ ನುಗ್ಗುತ್ತಿವೆ. ಇದರಿಂದ ಮಕ್ಕಳು, ವೃದ್ಧರು ಓಡಾಡಲು ಭಯ ಪಡಬೇಕಾದ ಸ್ಥಿತಿ ನಿರ್ಮಾಣವಾಗುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸಿ, ಹೊಸ ಚರಂಡಿ ನಿರ್ಮಾಣಕ್ಕೆ ಮುಂದಾಗಬೇಕುʼ ಎಂದು ನಿವಾಸಿಗಳಾದ ದಯಾನಂದ ಭರಮಶೆಟ್ಟೆ, ಅಮರ ಭರಮಶೆಟ್ಟೆ, ಧೂಳಪ್ಪ ಭರಮಶೆಟ್ಟೆ, ಬಸವರಾಜ ಭರಮಶೆಟ್ಟೆ, ಬಿಪಿನ್ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? Second PUC Result | ಪಿಯುಸಿ ಫಲಿತಾಂಶ : 19 ರಿಂದ 22ನೇ ಸ್ಥಾನಕ್ಕೆ ಕುಸಿದ ಬೀದರ್

ಗಡಿಗೌಡಗಾಂವ್‌ ಗ್ರಾಮದ ವಾರ್ಡ್‌ಗಳಲ್ಲಿ ಚರಂಡಿ ಅವ್ಯವಸ್ಥೆ ಬಗ್ಗೆ ನನ್ನ ಗಮನಕ್ಕೆ ಇಲ್ಲ. ಇವತ್ತು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಗಡಿಗೌಡಗಾಂವ್‌ ಗ್ರಾಮ ಪಂಚಾಯಿತಿ ಪಿಡಿಒ ಸುಲೋಚನಾ ಅವರು ʼಈದಿನ.ಕಾಮ್‌ʼ ಜೊತೆ ಮಾತನಾಡಿ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...