ಬೀದರ್‌ | ಮಳೆ ಅವಾಂತರ : ಮನೆಗೆ ನುಗ್ಗಿದ ನೀರು

Date:

ಔರಾದ್‌ ತಾಲ್ಲೂಕಿನ ಹಲವೆಡೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆ ಸುರಿಯಿತು.

ಮಳೆ ಅವಾಂತರದಿಂದ ಔರಾದ್ ತಾಲ್ಲೂಕಿನ ಜೋಜನಾ ಗ್ರಾಮದಲ್ಲಿ ರಸ್ತೆಗೆ ಹೊಂದಿಕೊಂಡಿರುವ 10ಕ್ಕೂ ಅಧಿಕ ಮನೆಯೊಳಗೆ ನೀರು ನುಗ್ಗಿದ್ದು, ಮನೆಯಲ್ಲಿರುವ ದವಸ, ಧಾನ್ಯಗಳಿಗೆ ಹಾನಿಯಾಗಿದೆ.

ಬೆಳಿಗ್ಗೆಯಿಂದ ಬಿಸಿಲಿನ ಧಗೆ ಇತ್ತು. ಮಧ್ಯಾಹ್ನ 1 ಗಂಟೆ ನಂತರ ದಟ್ಟ ಕಾರ್ಮೋಡ ಕವಿದು 2 ಗಂಟೆ ಸುಮಾರಿಗೆ ಜೋರು ಮಳೆಯಾಗಿದೆ. ಇದರಿಂದ ಕೆಲ ಓಣಿಯ ರಸ್ತೆಗಳು ಜಲಾವೃತಗೊಂಡವು. ನೀರು ಸರಾಗವಾಗಿ ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವ ಕಾರಣ ನೀರು ಮನೆಗಳಿಗೆ ನುಗ್ಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮಳೆಗೆ ಓಣಿಯ ಹಲವು ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿರುವ ಬೀಜ, ಗೊಬ್ಬರ ಸೇರಿದಂತೆ ದವಸ, ಧಾನ್ಯಗಳಿಗೆ ಹಾನಿಯಾಗಿದೆ. ಮಳೆ ನೀರು ಹೊರಹಾಕಲು ಹರಸಾಹಸ ಪಡಬೇಕಾಯಿತು. ವಿಷಜಂತುಗಳು ಮನೆಗೆ ನುಗ್ಗುವ ಪರಿಸ್ಥಿತಿ ಇದೆ. ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸಲಿಲ್ಲʼ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ಆರಂಭವಾದರೂ ಚರಂಡಿ ಸ್ವಚ್ಛಗೊಳಿಸುವ ಕಾರ್ಯ ನಡೆದಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಅನಾಹುತ ಆಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳಾದ ಸಂಗಪ್ಪ ರಾಜೋಳೆ, ದಿಗಂಬರ ಮಡಿವಾಳ, ವಿಜಯಕುಮಾರ್‌ ಕೌಟಗೆ, ಅಹ್ಮಮದ್‌ ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಶಾಹೀನ್ ಶೈಕ್ಷಣಿಕ ತೀವ್ರ ನಿಗಾ ಘಟಕಕ್ಕೆ ಶಿಕ್ಷಣ ತಜ್ಞರ ಸಮಿತಿ ಭೇಟಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...