ಚಿಟಗುಪ್ಪ ತಾಲ್ಲೂಕಿನ ಮೀನಕೇರಾದ ರಾಜಕುಮಾರ ತರಿ ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಒಟ್ಟು ಒಂಬತ್ತು ಜನರನ್ನು ನಿರ್ದೇಶಕರನ್ನಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ 1 ಆರ್. ಲತಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶ ಹೊರಡಿಸಿದ್ದಾರೆ.
ರಾಜಕುಮಾರ ತರಿ ಒಂದೂವರೆ ದಶಕದಿಂದ ಕಾಂಗ್ರೆಸ್ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿದ್ದಾರೆ.
ಇದನ್ನೂ ಓದಿ : ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ : ಪಿಡಿಒ ಅಮಾನತು
ತಮ್ಮನ್ನು ನಿಗಮದ ನಿರ್ದೇಶಕರಾಗಿ ನೇಮಕ ಮಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆ, ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಾಜಿ ಶಾಸಕ ಅಶೋಕ ಖೇಣಿ ಹಾಗೂ ಪಕ್ಷದ ಮುಖಂಡರಿಗೆ ಅವರು ಕೃತಜ್ಞತೆ ತಿಳಿಸಿದ್ದಾರೆ.





