ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆಯಾಗಿ ರಾಜಶ್ರೀ ಶ್ರೀಕಾಂತ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಸೌಮ್ಯರೆಡ್ಡಿ ಅವರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅಲ್ಕಾ ಲಾಂಬ ಅವರ ಅನುಮೋದನೆ ಮೇರೆಗೆ ರಾಜಶ್ರೀ ಶ್ರೀಕಾಂತ ಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆಯಾಗಿ ನೇಮಕ ಮಾಡಿದ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ, ರಣದೀಪಸಿಂಗ ಸುರ್ಜೆವಾಲ್ ಹಾಗೂ ಸಿಎಂ ಸಿದ್ದರಾಮಯ, ಡಿಸಿಎಂ ಡಿ.ಕೆ.ಶಿವಕುಮಾರ್, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ರಹೀಂ ಖಾನ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಜಿಲ್ಲೆಯ ಎಲ್ಲ ಮುಖಂಡರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಮನೆ ಮಹಡಿ ಮೇಲೆ ‘ಡ್ರ್ಯಾಗನ್ ಫ್ರೂಟ್’ ಬೆಳೆದ ಉಪನ್ಯಾಸಕ!





