ಬೀದರ್‌ | ಕಾರ್ಮಿಕ ವಿರೋಧಿ ಕಾಯ್ದೆ ರದ್ದುಪಡಿಸಿ : ಸಿಪಿಐ

Date:

ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಮಂಡಳಿ ವತಿಯಿಂದ 136ನೇ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಬೀದರ್‌ ನಗರದಲ್ಲಿ ಆಚರಿಸಿಲಾಯಿತು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಶಫಾಯತ ಅಲಿ ಮಾತನಾಡಿ, ʼಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದಿದ್ದು ಖಂಡನೀಯ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಯೋತ್ಪಾದಕ ಶಕ್ತಿಗಳನ್ನು ನಿಯಂತ್ರಿಸಲು ವಿಫಲವಾಗಿದೆʼ ಎಂದು ಆರೋಪಿಸಿದರು.

ಬೀದರ್ ತಾಲೂಕಾ ಅಖಿಲ ಭಾರತ ದಲಿತ ಹಕ್ಕುಗಳ ಚಳುವಳಿ ಅಧ್ಯಕ್ಷ ಜೈಶೀಲ ಮಾತನಾಡಿ, ʼಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ದಲಿತರ ಮೇಲೆ ಆಗುತ್ತಿರುವ ಅತ್ಯಾಚಾರಗಳು ತಡೆಯುವಲ್ಲಿ ವಿಫಲವಾಗಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐ ಜಿಲ್ಲಾ ಮುಖಂಡ ಬಾಬುರಾವ ಹೊನ್ನಾ ಮಾತನಾಡಿ, ʼಖಾಸಗಿಕರಣ, ಜಾಗತೀಕರಣ ಮತ್ತು ಉದಾರೀಕರಣದಿಂದಾಗಿ ಜಗತ್ತಿನಲ್ಲಿ ಬಲಪಂಥಿಯ ಶಕ್ತಿಗಳು ಮೇಲುಗೈ ಸಾಧಿಸುತ್ತಿವೆ. ಭಾರತದಲ್ಲಿ ಕೂಡ ಬಲಪಂಥಿಯ ಕೇಂದ್ರ ಸರ್ಕಾರವು ಕೋಮುವಾದಿ ಫ್ಯಾಸಿಸ್ಟ್ ಸ್ವರೂಪ ಹೊಂದಿದೆ. ಈ ಕೋಮುವಾದಿ ಫ್ಯಾಸಿಸ್ಟ್ ಸರ್ಕಾರವು ಕಾರ್ಮಿಕ ಕಾಯ್ದೆಗಳನ್ನು ತೆಗೆದು ಹಾಕುತ್ತಾ, ಕಾರ್ಪೋರೇಟ್ ಮನೆತನಗಳಿಗೆ ಅನುವುಮಾಡಿಕೊಡುತ್ತಿದೆʼ ಎಂದರು.

ಕಾರ್ಮಿಕ ವಿರೋಧಿ 4-ಕಾಯ್ದೆಗಳನ್ನು ರದ್ದುಪಡಿಸಬೇಕು. ಎಪಿಎಂಸಿ ಖಾಸಗೀಕರಣ ಗೊಳಿಸುವುದನ್ನು ಹಿಂಪಡೆಯಬೇಕು. ಬೆಂಗಳೂರಿನ ಬಿಬಿಎಂಪಿಯಲ್ಲಿ ಕಾರ್ಮಿಕರನ್ನು ಖಾಯಂಗೊಳಿಸಿದಂತೆ ಬೀದರ ನಗರಸಭೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ನಿರ್ಣಯಗಳು ಕೈಗೊಳ್ಳಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದಲಿತರಿಗೆ ಸೂಕ್ತ ರಕ್ಷಣೆ; ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹೊಣೆ : ಸಚಿವ ಈಶ್ವರ ಖಂಡ್ರೆ

    ಪಾಂಡುರಂಗ ಪ್ಯಾಗೆ ಭಾಲ್ಕಿ ಅವರು ಅಧ್ಯಕ್ಷತೆ ವಹಿಸಿದ್ದರು. ಸಿಪಿಐ ಪ್ರಮುಖರಾ ನಜೀರ ಹುಸೇನ್ ಇರಾಣಿ, ಪ್ರಭು ತಗಣಿಕರ್‌, ನಜೀರ್ ಅಹ್ಮದ್ ಚೊಂಡಿ, ಸುನೀಲ ವರ್ಮಾ ಸೇರಿದಂತೆ ಮತ್ತತಿರರಿದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

    ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

    ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

    ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

    ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

    ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

    ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

    ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...