ಬೀದರ್‌ | ಮನೆಗೆ ನುಗ್ಗಿ ₹15.55 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಡಕಾಯಿತರು

Date:

ಬೀದರ್ ನಗರದ ಓಲ್ಡ್‌ ಆದರ್ಶ ಕಾಲೊನಿಯ ಮನೆಯೊಂದಕ್ಕೆ ಶನಿವಾರ ನಸುಕಿನ ಜಾವ ನುಗ್ಗಿದ ನಾಲ್ವರು ಮುಸುಕುಧಾರಿ ಡಕಾಯಿತರು, ಮಾರಕಾಸ್ತ್ರಗಳಿಂದ ಮನೆಯಲ್ಲಿದ್ದವರನ್ನು ಹೆದರಿಸಿ ₹15.55 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ.

ʼನಾಲ್ವರು ಡಕಾಯಿತರು ಮನೆ ಬಾಗಿಲು ಮುರಿದು ಒಳಗೆ ನುಗ್ಗಿ, ಚಾಕು ಹಾಗೂ ಇತರೆ ಮಾರಕಾಸ್ತ್ರಗಳನ್ನು ಕುತ್ತಿಗೆಗೆ ಹಿಡಿದು ಹೆದರಿಸಿದರು. ನಮ್ಮ ಮೈಮೇಲೆ ಹಾಗೂ ಅಲ್ಮೇರಾದಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು, ಬಳಿಕ ಬಾತ್‌ರೂಮ್‌ನಲ್ಲಿ ನಮ್ಮನ್ನು ಕೂಡಿ ಹಾಕಿ ಪರಾರಿಯಾಗಿದ್ದಾರೆʼ ಎಂದು ತಿಳಿದು ಬಂದಿದೆ.

ʼಡಕಾಯಿತರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರು. ಘಟನೆ ನಡೆದಾಗ ನಾನು, ನನ್ನ ತಾಯಿ ಹಾಗೂ ಮಗ ಮನೆಯಲ್ಲಿದ್ದೆವುʼ ಎಂದು ಜ್ಯೋತಿ ಲತಾ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜ್ಯೋತಿ ಲತಾ ಅವರು ಮೂಲತಃ ಕಲಬುರಗಿ ಜಿಲ್ಲೆಯ ಅಂಕಲಗಾ ಗ್ರಾಮದವರು. 2016ರಲ್ಲಿ ಪತಿಯ ನಿಧನದ ನಂತರ ಅನುಕಂಪದ ಆಧಾರದ ಮೇಲೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಡಿಎಲ್‌ಆರ್‌ನಲ್ಲಿ ಸೂಪರಿಟೆಂಡೆಂಟ್‌ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಂದಿನಿಂದ ಓಲ್ಡ್‌ ಆದರ್ಶ ಕಾಲೊನಿಯಲ್ಲಿರುವ ತಾಯಿ ಮನೆಯಲ್ಲಿ 14 ವರ್ಷದ ಮಗನೊಂದಿಗೆ ವಾಸವಾಗಿದ್ದಾರೆ.

ಈ ಕುರಿತು ನಗರದ ಗಾಂಧಿ ಗಂಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವ ಜಯಂತಿಯೊಂದಿಗೆ ಪಂಚಾಚಾರ್ಯರ ಯುಗಮಾನೋತ್ಸವಕ್ಕೆ ಖಂಡನೆ; ಹೋರಾಟದ ಎಚ್ಚರಿಕೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...