ಬೀದರ್‌ | ಸಂತ ಸೇವಾಲಾಲ್ ಮಹಾರಾಜರು ಪವಾಡ ಪುರುಷರಾಗಿದ್ದರು : ಸಂಸದ ಸಾಗರ್‌ ಖಂಡ್ರೆ

Date:

ಸಂತ ಸೇವಾಲಾಲ್ ಮಹಾರಾಜರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾವೆಲ್ಲರೂ ಮುನ್ನಡೆಯಬೇಕೆಂದು ಬೀದರ್ ಲೋಕಸಭಾ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.

‌ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ನಡೆದ 286ನೇ ಸಂತ ಸೇವಾಲಾಲ್ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ʼಸಂತ ಸೇವಾಲಾಲ್ ಮಹಾರಾಜರು ಪವಾಡ ಪುರುಷರಾಗಿದ್ದರು, ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಮೂಢನಂಬಿಕೆ, ಕೆಟ್ಟ ಆಚರಣೆಗಳ ವಿರುದ್ಧ ಧ್ವನಿ ಎತ್ತಿ ಜನರಿಗೆ ತಿಳಿವಳಿಕೆ ಮೂಡಿಸಿದರು. ಸಮಾಜದ ಐಕ್ಯತೆ ಮತ್ತು ಸಹಬಾಳ್ವೆಗೆ ಪ್ರೇರೆಪಿಸಿದರು. ಬ್ರಿಟಿಷರು ತೆರಿಗೆ ಹೆಚ್ಚಳ ಮಾಡಿದಾಗ ವೀರ ಸೇನಾನಿಯಾಗಿ ಹೋರಾಡಿದರು. ಯಾವುದೇ ಮಹಾನ್ ಪುರುಷರು ಒಂದೇ ಜಾತಿಗೆ ಸೀಮಿತವಲ್ಲ. ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಧ್ಯಾಪಕ ಡಾ.ರಾಜಕುಮಾರ ಥಾವರಾ ಖೋಲಾ ಅವರು ಅತಿಥಿ ಉಪನ್ಯಾಸದಲ್ಲಿ ಮಾತನಾಡಿ, ʼಸಂತ ಸೇವಾಲಾಲ ಅವರು ದಾವಣಗೆರೆ ಜಿಲ್ಲೆಯ ಸುರಗೊಂಡನ ಕೊಪ್ಪದಲ್ಲಿ 1739ರ ಫೆಬ್ರವರಿ 15 ರಂದು ಶಿರಿಸಿಯ ಮಾರಿಕಾಂಬಾ ದೇವಿಯ ಕೃಪಾದಿಂದ ಜನಿಸಿದರು. ಹೆಂಗಸರು, ಗಂಡಸರು ಭಾಯಿ (ಅಣ್ಣ) ಎನ್ನುವುದರಿಂದಾಗಿ ಆ ಜನ್ಮ ಬ್ರಹ್ಮಚಾರಿ ಜೀವನ ಕಳೆದರುʼ ಎಂದು ಹೇಳಿದರು.

ʼಸಂತ ಪರಂಪರೆಯ ಕಡೆಗೆ ಒಲವು ಹೊಂದಿದ್ದ ಸೇವಾಲಾಲ್ ತನ್ನ ಪವಾಡಗಳಿಂದ ಸೇವಾ ಭಾಯಿ ಎಂದೇ ಪ್ರಸಿದ್ಧರಾದರು. ಭವ್ಯ ಸಂಸ್ಕೃತಿ ಹೊಂದಿರುವ ಬಂಜಾರ ಸಮುದಾಯವನ್ನು ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಢಾಡಿ, ಢಾಲ್ಯ, ಸೋನಾರ್, ಲೋಹಾರ್ ಮುಂತಾದ ಉಪನಾಮಗಳಿಂದ ಕರೆಯಲಾಗುತ್ತದೆʼ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಶ್ರೀ ಸಂತ ಸೇವಾಲಾಲ್ ಮಹಾರಾಜ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಸೇವಲಾಲ್ ಮಾಹಾರಾಜರ ಭಾವಚಿತ್ರ ಮೆರವಣಿಗೆಯು ಶಿವಾಜಿ ವೃತ್ತ, ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮಾರ್ಗವಾಗಿ ಜಿಲ್ಲಾ ರಂಗಮಂದಿರವರೆಗೆ ನಡೆಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ ಎಟಿಎಂ ದರೋಡೆ ಪ್ರಕರಣ: ಆರೋಪಿಗಳ ಫೋಟೊ ಬಿಡುಗಡೆ; ಮಾಹಿತಿ ಕೊಟ್ಟವರಿಗೆ ₹5 ಲಕ್ಷ ಬಹುಮಾನ!

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತ ಮಹಮ್ಮದ ಶಕೀಲ, ಬಂಜಾರ ಶಕ್ತಿ ಪೀಠ ಸೇವಾ ನಗರದ ಗುರುಗಳಾದ ರಾಮ ಚೈತನ್ಯ ಮಹಾರಾಜ, ಬೀದರ ವಿಶ್ವವಿದ್ಯಾಲಯದ ಕುಲಸಚಿವ ಪರಮೇಶ್ವರ್ ನಾಯಕ್, ಸಮಾಜದ ಮುಖಂಡರಾದ ಗೋವರ್ಧನ ರಾಥೋಡ್, ಬಸವರಾಜ ಪವಾರ್, ರಮೇಶಕುಮಾರ್ ಜಾಧವ, ಮಾಣಿಕರಾವ ಪವಾರ್ ಹಾಗೂ ಸಮಾಜದ ಬಾಂಧವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...