ಬೀದರ್‌ | ಸೆ.3 ರಿಂದ 14 ರವರೆಗೆ ಸೀರತ್ ಅಭಿಯಾನ

Date:

ಬೀದರ್ ನಗರದಲ್ಲಿ ಸೆ. 3ರಿಂದ 14 ರವರೆಗೆ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಸಲಹಾ ಮಂಡಳಿ ಸದಸ್ಯ ಮುಹಮ್ಮದ್ ಆಸಿಫುದ್ದೀನ್ ಹಾಗೂ ಬೀದರ್ ಘಟಕದ ಹಿರಿಯ ಸದಸ್ಯ ಮುಹಮ್ಮದ್ ನಿಝಾಮುದ್ದೀನ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಪ್ರವಾದಿ ಮುಹಮ್ಮದ್(ಸ) ಚಂದ್ರಮಾನ ಕ್ಯಾಲೆಂಡರ್ ಪ್ರಕಾರ, ರಬೀವುಲ್ ಅವ್ವಲ್ ತಿಂಗಳಲ್ಲಿ ಜನಿಸಿದರು. ಅವರ ಸಾರ್ವತ್ರಿಕ ಬೋಧನೆಗಳನ್ನು ಜನರಿಗೆ ತಿಳಿಸುವುದು, ಪ್ರವಾದಿ ಅವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮೀಯರ ನಡುವಿನ ಸಂಬಂಧ ಗಟ್ಟಿಗೊಳಿಸುವುದು ಅಭಿಯಾನದ ಉದ್ದೇಶವಾಗಿದೆʼ ಎಂದು ತಿಳಿಸಿದರು.

ರಾಜ್ಯದಾದ್ಯಂತ ನಡೆಯಲಿರುವ ಅಭಿಯಾನದ ನಿಮಿತ್ತ ಬೀದರ್ ನಗರದಲ್ಲೂ ಮುಸ್ಲಿಂ ಗಣ್ಯರ ಸಮಾಲೋಚನಾ ಸಭೆ, ಗಣ್ಯರು-ಧಾರ್ಮಿಕ ಮುಖಂಡರ ಭೇಟಿ, ವೈಯಕ್ತಿಕ ಭೇಟಿ, ಕ್ಯಾಂಪಸ್ ಉಪನ್ಯಾಸ, ಜುಮಾ ಪ್ರವಚನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆ. 13 ಮತ್ತು 14ರಂದು ಜಾಮಾ ಮಸೀದಿಯಲ್ಲಿ ಜರುಗುವ ಸೀರತ್ ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮಿ ಹಿಂದ್‍ನ ತೆಲಂಗಾಣ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಮೌಲಾನಾ ಹಾಮೇದ್ ಮುಹಮ್ಮದ್ ಖಾನ್ ಪಾಲ್ಗೊಳ್ಳುವರು. 14 ರಂದು ಸಂಜೆ 7ಕ್ಕೆ ಹೋಟೆಲ್ ಬೀದರ್ ಗೇಟ್ ವೇನಲ್ಲಿ ಗಣ್ಯರ ಸಂವಾದ ಕಾರ್ಯಕ್ರಮ ನಡೆಯಲಿದೆ. ಜಮಾ ಅತೆ ಇಸ್ಲಾಮಿ ಹಿಂದ್‍ನ ಕೇಂದ್ರ ಸಲಹಾ ಮಂಡಳಿಯ ಸದಸ್ಯ ಮೌಲಾನಾ ಮುಹಮ್ಮದ್ ಇಕ್ಬಾಲ್ ಮುಲ್ಲಾ ಭಾಗವಹಿಸುವರುʼ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ನಾಳೆ ಬೀದರ್‌ನಲ್ಲಿ ʼಬಸವ ಸಂಸ್ಕೃತಿ ಅಭಿಯಾನʼ : ಬಸವರಾಜ ಧನ್ನೂರ್

ಜಮಾ ಅತೆ ಇಸ್ಲಾಮಿ ಹಿಂದ್‍ನ ಬೀದರ್ ಘಟಕದ ಉಪಾಧ್ಯಕ್ಷ ಮುಹಮ್ಮದ್ ಆರಿಫುದ್ದೀನ್ ಮಾತನಾಡಿ, ʼಸಮಾಜ ಸೇವೆಯ ಭಾಗವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿ, ಹಣ್ಣು ಹಂಪಲು ವಿತರಿಸಲಾಗುವುದು. ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಗುವುದುʼ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...