ಬೀದರ್ | ಕೃಷಿ ಡಿಪ್ಲೊಮಾ ಕೋರ್ಸ್ ರದ್ದತಿ ಖಂಡಿಸಿ ಎಸ್ಎಫ್ಐ ಪ್ರತಿಭಟನೆ

Date:

ಬೀದರ್ ಜಿಲ್ಲೆಯ ಜನವಾಡ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಜ್ಯ ಸರ್ಕಾರ ಕೃಷಿ ಡಿಪ್ಲೊಮಾ ಕೋರ್ಸ್ ರದ್ದುಪಡಿಸುವುದನ್ನು ಖಂಡಿಸಿ ಎಸ್ಎಫ್ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ .

ಬೀದರ್‌ನ ಡಾ. ಬಿ.ಆರ್‌ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದ ಸಂಘಟನೆಯ ಕಾರ್ಯಕರ್ತರು, ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ಜನವಾಡ ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ 2012ರಲ್ಲಿ ಎರಡು ವರ್ಷದ ಕೃಷಿ ಡಿಪ್ಲೊಮಾ ಕೋರ್ಸ್ ಆರಂಭವಾಗಿತ್ತು. ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಸದರಿ ಕೋರ್ಸ್ ಸ್ಥಗಿತಗೊಳಿಸಿದೆ. ಜಿಲ್ಲೆಯಲ್ಲಿ 10 ವರ್ಷಗಳಿಂದ ಡಿಪ್ಲೋಮಾ ಕೃಷಿ ಸಂಶೋಧನಾ ಕೇಂದ್ರವು ಪ್ರಾರಂಭವಾಗಿದ್ದು, ಡಿಪ್ಲೋಮಾ ಕೃಷಿ ಕೋರ್ಸ್ ಪಡೆದ ವಿದ್ಯಾರ್ಥಿಗಳು ಅನೇಕ ಕೈಗಾರಿಕಾ ಕಂಪನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಧಿಡೀರನೆ ಡಿಪ್ಲೊಮಾ ಕೋರ್ಸ್‌ ರದ್ದು ಮಾಡಿರುವುದು ವಿದ್ಯಾರ್ಥಿ ವಿರೋಧಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಎಫ್‌ಐ ಜಿಲ್ಲಾ ಸಮಿತಿ ಅಧ್ಯಕ್ಷ ಅರುಣ ಕೋಡಗೆ ಮಾತನಾಡಿ, “ರಾಜ್ಯ ಸರ್ಕಾರ ದಿಢೀರನೆ ಕೃಷಿ ಡಿಪ್ಲೊಮಾ ಕೋರ್ಸ್ ರದ್ದು ಮಾಡಿದ್ದು, ಕೃಷಿಯಲ್ಲಿ ಡಿಪ್ಲೊಮಾ ಕೋರ್ಸ್‌ನಲ್ಲಿ ವಿದ್ಯಾಭ್ಯಾಸ ಮಾಡಲು ಬಯಸಿದ್ದ ಹಲವು ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿದ್ದಾರೆ. ಕೂಡಲೇ ಸರ್ಕಾರ ಕೃಷಿ ಡಿಪ್ಲೊಮಾ ಕೋರ್ಸ್ ಯಥಾವತ್ತಾಗಿ ಮುಂದುವರಿಸಲು ಅನುಮತಿ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಕಾರ್ಯಕರ್ತರು ಹಾಗೂ ಕೃಷಿ ಡಿಪ್ಲೊಮಾ ಕೋರ್ಸ್ ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...