ಬೀದರ್‌ | ʼಶಾಹೀನ್ʼ ಸಂಸ್ಥೆಯಿಂದ ಮಹಮೂದ್ ಗಾವಾನ್ ಮದರಸಾ ನವೀಕರಣ ಆರಂಭ

Date:

ಬೀದರ್ ನಗರದಲ್ಲಿರುವ ಐತಿಹಾಸಿಕ ಮಹಮೂದ್ ಗಾವಾನ್ ಮದರಸಾವನ್ನು ದತ್ತು ಪಡೆದಿರುವ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು, ಸ್ಮಾರಕದ ಸ್ಥಳದಲ್ಲಿ ನವೀಕರಣ ಕಾರ್ಯ ಶುರು ಮಾಡಿದ್ದು, ಮಹಮೂದ್ ಗಾವಾನ್ ಮದರಸಾ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ನವೀಕರಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಮಾತನಾಡಿ, ʼಐತಿಹಾಸಿಕ ಸ್ಮಾರಕವನ್ನು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿಸುವ ದಿಸೆಯಲ್ಲಿ ಸಮೂಹವು ಅಗತ್ಯ ನವೀಕರಣ ಕಾರ್ಯ ಕೈಗೊಳ್ಳಲಿದೆ. ಸ್ಮಾರಕದ ಸ್ಥಳದಲ್ಲಿ ಲ್ಯಾಂಡ್ ಸ್ಕೇಪ್, ಪಾದಚಾರಿ ಮಾರ್ಗ, ಕಾರಂಜಿ, ಶೌಚಾಲಯ, ಶುದ್ಧ ಕುಡಿಯುವ ನೀರು, ದೀಪಾಲಂಕಾರ, ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ, ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಸಾಹಿತ್ಯದ ಕೇಂದ್ರ ಸ್ಥಾಪನೆ ಮೊದಲಾದ ಕಾರ್ಯಗಳನ್ನು ಕೈಗೊಳ್ಳಲಾಗುವುದುʼ ಎಂದು ಹೇಳಿದರು.

ʼಸ್ಮಾರಕದ ಮಹತ್ವದ ಕುರಿತು ಸುತ್ತಮುತ್ತಲಿನ ನಿವಾಸಿಗಳಲ್ಲಿ ಜಾಗೃತಿ ಮೂಡಿಸಲಾಗುವುದು. ಹೈದರಾಬಾದ್‍ಗೆ ಬರುವ ಪ್ರವಾಸಿಗರು ಇಲ್ಲಿಗೂ ಭೇಟಿ ನೀಡುವ ಹಾಗೆ ಸ್ಮಾರಕವನ್ನು ಆಕರ್ಷಣೀಯವಾಗಿಸಲಾಗುವುದು. ಗೈಡ್‍ಗಳಿಗೆ ತರಬೇತಿ ನೀಡಲಾಗುವುದು. ಐದು ವರ್ಷಗಳ ಅವಧಿಗೆ ಸ್ಮಾರಕದ ಸಂರಕ್ಷಣೆ ಹಾಗೂ ನಿರ್ವಹಣೆಯನ್ನು ನೋಡಿಕೊಳ್ಳಲಾಗುವುದುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶಾಹೀನ್ ಕೇಂದ್ರ ಸ್ಥಾನದಲ್ಲಿರುವ ಮಹಮೂದ್ ಗಾವಾನ್ ಮದರಸಾ ಹಿಂದೆ ಪ್ರಸಿದ್ಧ ವಿಶ್ವವಿದ್ಯಾಲಯವಾಗಿತ್ತು. 25 ದೇಶಗಳ ವಿದ್ಯಾರ್ಥಿಗಳು ಇಲ್ಲಿಗೆ ಅಧ್ಯಯನಕ್ಕೆ ಬರುತ್ತಿದ್ದರು. ವಿವಿಧ ವಿಷಯಗಳನ್ನು ಕಲಿಯುತ್ತಿದ್ದರು. ಹೀಗಾಗಿ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಸಮೂಹವು ಮದರಸಾವನ್ನು ದತ್ತು ಸ್ವೀಕರಿಸಿದೆʼ ಎಂದರು.

ʼಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಬಹಳಷ್ಟು ಐತಿಹಾಸಿಕ ಮಹತ್ವದ ಸ್ಮಾರಕಗಳು ಇವೆ. ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಅನುಕೂಲವಾಗಲಿದೆ. ಪ್ರವಾಸಿಗರ ಅನುಕೂಲಕ್ಕಾಗಿ ನಗರದ ಕೋಟೆಯಲ್ಲಿ ಶಾಹೀನ್ ಫುಡ್ ಕೋರ್ಟ್ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಬಾಟರಿ ಚಾಲಿತ ವಾಹನದ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆʼಈ ಎಂದು ಹೇಳಿದರು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕದಲ್ಲಿ ಬೆಳೆಹಾನಿ, ತಗ್ಗಿದ ಪ್ರವಾಹ: ಅತಿವೃಷ್ಟಿಗೆ ಸಿಲುಕಿದ ರೈತರಿಗೆ ಇನ್ನೂ ಸಿಗದ ಪರಿಹಾರ!

ವಿಶ್ರಾಂತ ಕುಲಪತಿ ಮುಹಮ್ಮದ್ ಸಲ್ಮಾನ್ ಸಿದ್ದಿಕಿ, ಮೌಲಾನಾ ಅಝರ್ ಮದನಿ, ಆರ್ಕಾಲಜಿ ಸರ್ವೇ ಆಫ್ ಇಂಡಿಯಾದ ಹಿರಿಯ ಸಂರಕ್ಷಣಾ ಸಹಾಯಕ ಅಜಯ್ ಜನಾರ್ಧನ್, ಹಿರಿಯ ಪತ್ರಕರ್ತರಾದ ದೇವು ಪತ್ತಾರ್, ರಿಷಿಕೇಶ್ ಬಹಾದ್ದೂರ್
ದೇಸಾಯಿ, ಇತಿಹಾಸಕಾರ ಸಮದ್ ಭಾರತಿ, ಡಾ. ಅಬ್ದುಲ್ ಮಾಜೀದ್, ಪ್ರೊ. ದಾನೀಶ್ ಮೊಯಿನ್, ಪ್ರೊ. ಸೈಯದ್ ಅಯುಬ್ ಅಲಿ, ಮೀರ್ ಮೊಹತೆಶಾಮ್ ಅಲಿ ಖಾನ್, ಸೈಯದ್ ಝಹಿದ್ ಅಲಿ ಅಖ್ತರ್, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ಹಸೀಬ್, ಸಿಇಒ ತೌಸಿಫ್ ಮಡಿಕೇರಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...