ಬೀದರ್‌ | ಶಾಹೀನ್‌ ಸಂಸ್ಥೆಯ ಅಬ್ದುಲ್ ಖದೀರ್‌ಗೆ ಎ.ಎಂ.ಯು. ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Date:

ಬೀದರ್ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್‌ ಅವರಿಗೆ ಅಲಿಗಢ್ ಮುಸ್ಲಿಮ್ ವಿಶ್ವವಿದ್ಯಾಲಯದ 2025ನೇ ಸಾಲಿನ ಸರ್ ಸೈಯದ್ ನ್ಯಾಷನಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಶ್ವವಿದ್ಯಾಲಯದಲ್ಲಿ ನಡೆದ ಸರ್ ಸೈಯದ್ ಅಹಮ್ಮದ್ ಖಾನ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ಶಹೀದ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಬಿ.ಇ.ಸಿವಿಲ್ ಎಂಜಿನಿಯರ್ ಆಗಿರುವ ಡಾ. ಅಬ್ದುಲ್ ಖದೀರ್ ಅವರು 17 ವಿದ್ಯಾರ್ಥಿಗಳೊಂದಿಗೆ ಬೀದರ್‍ನಲ್ಲಿ ಆರಂಭಿಸಿದ ಶಾಹೀನ್ ಶಿಕ್ಷಣ ಸಂಸ್ಥೆ ಈಗ ಹೆಮ್ಮರವಾಗಿ ಬೆಳೆದಿದೆ. ದೇಶದ 16 ರಾಜ್ಯಗಳಲ್ಲಿ 110 ಶಾಖೆಗಳನ್ನು ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಶಾಖೆಗಳಲ್ಲಿ 45 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಐದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆದಿರುವ ಹಿರಿಮೆ ಸಂಸ್ಥೆಯದ್ದಾಗಿದೆ. ಒಂದು ಮನೆಯಲ್ಲಿ ಮೂವರು ಮಕ್ಕಳು ವೈದ್ಯರಾದ 300 ನಿದರ್ಶನಗಳು ಸಂಸ್ಥೆಯಲ್ಲಿವೆ. ಮದರಸಾ ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿಯೂ ಸಂಸ್ಥೆ ಪ್ರಮುಖ ಪಾತ್ರ ವಹಿಸಿದೆ.
ಶಿಕ್ಷಣ ಹಾಗೂ ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅಬ್ದುಲ್ ಖದೀರ್ ಅವರಿಗೆ ಅಲಿಗಢ್ ಮುಸ್ಲಿಮ್ ವಿಶ್ವವಿದ್ಯಾಲಯದ ಪ್ರಶಸ್ತಿ ಹುಡುಕಿಕೊಂಡು ಬಂದಿದೆ.

ಅಬ್ದುಲ್ ಖದೀರ್ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಉರ್ದು ಅಕಾಡೆಮಿ ಪ್ರಶಸ್ತಿ, ಶಾಹೀನ್ ಶಿಕ್ಷಣ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಸೇರಿ ಅನೇಕ ಪ್ರಶಸ್ತಿ-ಸಮ್ಮಾನಗಳು ಸಂದಿವೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ನೈಮಾ ಖಾತೂನ್, ಹಿರಿಯ ಅಧಿಕಾರಿಗಳು, ಗಣ್ಯರು ಹಾಜರಿದ್ದರು.

ಇದನ್ನೂ ಓದಿ : ಬೀದರ್‌ | ಬೇಡಿಕೆ ಕಳೆದುಕೊಂಡ ಮಣ್ಣಿನ ಹಣತೆ : ಕುಂಬಾರರ ಬದುಕು ದೀಪದ ಕೆಳಗಿನ ಕತ್ತಲು!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...