ಬೀದರ್ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ: ವಕೀಲ ರಾಕೇಶ್‌ಗೆ ಜೀವಾವಧಿ ಶಿಕ್ಷೆ ವಿಧಿಸಲು ಆಗ್ರಹ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಮೇಲೆ ಶೂ ಎಸೆದಿರುವ ಘಟನೆ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಹುಲಸೂರನಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಪಟ್ಟಣದ ಭೀಮನಗರದ ಡಾ.ಅಂಬೇಡ್ಕರ್ ವೃತ್ತದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು, ದಾರಿಯುದ್ದಕ್ಕೂ ವಕೀಲ್ ರಾಕೇಶ್ ಕಿಶೋರ್‌, ಅನೀಲ ಮಿಶ್ರಾ ವಿರುದ್ಧ ಘೋಷಣೆ ಕೂಗಿದರು.

ಬಳಿಕ ಹುಲಸೂರ-ಬಸವಕಲ್ಯಾಣ ಮುಖ್ಯ ರಸ್ತೆಯಲ್ಲಿ ವಕೀಲ ರಾಕೇಶ್ ಕಿಶೋರ್ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರಪತಿ, ಪ್ರಧಾನ ಮಂತ್ರಿಗಳ ಹೆಸರಿಗೆ ಬರೆದ ಮನವಿ ಪತ್ರವನ್ನು ಉಪ ತಹಶೀಲ್ದಾರ್ ಸುನೀಲ ಸಜ್ಜನಶೆಟ್ಟಿ ಅವರಿಗೆ ಸಲ್ಲಿಸಿದರು.

1004518144

‘ಸಾಂವಿಧಾನಿಕ ಹುದ್ದೆಯಲ್ಲಿರುವ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯುವುದು ಅತ್ಯಂತ ಹೇಯ ಮತ್ತು ರಾಷ್ಟ್ರವಿರೋಧಿ ಕೃತ್ಯ. .
ಸಿಜೆಐ ಬಿ.ಆರ್ ಗವಾಯಿ ಅವರತ್ತ ಶೂ ಎಸೆದ ವಕೀಲ ರಾಕೇಶ ಕಿಶೋರ್‌ ಹಾಗೂ ಗ್ವಾಲಿಯರ್‌ನಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನಿಸಿದ ಅನೀಲ್ ಮಿಶ್ರಾ ಎಂಬುವವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಇಬ್ಬರನ್ನು ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ʼಭಗವಾನ್ ಬುದ್ಧ ಹಾಗೂ ಡಾ.ಅಂಬೇಡ್ಕರ್ ಅವರ ಅನುಯಾಯಿ ಹಾಗೂ ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಸಂವಿಧಾನ ಜಾರಿಯಾಗಿ 75 ವರ್ಷಗಳು ಕಳೆದರೂ ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಸಿಜೆಐ ಅವರ ಮೇಲೆ ಶೂ ಎಸೆದ ಘಟನೆ ವ್ಯಕ್ತಿ ಮೇಲೆ ನಡೆಸಿದ ದಾಳಿಯಲ್ಲ. ಇದು ಸಂವಿಧಾನದ ಮೇಲಿನ ದಾಳಿ. ಮನುವಾದದ ಮತಾಂಧರು ನಡೆಸಿದ ಸಂವಿಧಾನದ ಮೌಲ್ಯಗಳ ಮೇಲಿನ ಭಯೋತ್ಪಾದಕ ದಾಳಿಯಾಗಿದೆʼ ಎಂದು ಕಿಡಿಕಾರಿದರು.

1004518142

ಸಂವಿಧಾನದ ಮೇಲೆ ಮನುವಾದಿಗಳಿಗೆ ಇರುವ ಅಸಹನೆ ಹಾಗೂ ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಶೋಷಿತರಿಗೆ ಶೋಷಣೆ ತಪ್ಪಿದ್ದಲ್ಲ ಎನ್ನುವುದಕ್ಕೆ ಈ ಘಟನೆ ಮತ್ತೊಂದು ಉದಾಹರಣೆ. ಸಂವಿಧಾನ ಅಪಾಯದಲ್ಲಿದೆ ಎಂಬ ನಮ್ಮ ಆತಂಕಕ್ಕೆ ನೇರ ಪುರಾವೆ ಸಿಕ್ಕಿದೆ. ಸಿಜೆಐ ಮೇಲಿನ ಹಲ್ಲೆ ದೇಶದ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಗ್ರಾಮ ಕ್ರಾಂತಿ ಸೇನೆಯ ರಾಜ್ಯಾಧ್ಯಕ್ಷ ಸಂದೀಪ ಮುಕಿಂದೆ, ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಲೋಕೇಶ್ ಕಾಂಬಳೆ, ದಸಂಸ ತಾಲೂಕು ಸಂಚಾಲಕ ದೇವಾನಂದ ತೋಳೆ, ಬಿಎಸ್ಸಿ ಬಸವಕಲ್ಯಾಣ ತಾಲೂಕು ಅಧ್ಯಕ್ಷ ಶಂಕರ ಫುಲೆ, ಭೀಮ ಆರ್ಮಿ ಬಸವಕಲ್ಯಾಣ ತಾಲ್ಲೂಕಾಧ್ಯಕ್ಷ ಚೇತನ್ ಕಾಡೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರಾದ ಮುಕೇಶ್ ಸದಲಾಪುರೆ, ಪ್ರಲ್ಹಾದ್ ಮೋರೆ, ವಿದ್ಯಾಸಾಗರ ಬನಸೋಡೆ, ಸುರೇಶ್ ಮೋರೆ, ವಿನೋದ ಸಿಂಧೆ, ಜ್ಞಾನೋಬಾ ನಿಟ್ಟೂರೆ, ಬಬನ ಮೋರೆ, ಶಾಲುಬಾಯಿ ಬನಸೋಡೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...