ಬೀದರ್‌ | ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸರಳೀಕರಣ : ಭರವಸೆ

Date:

ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸರಳೀಕರಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ.ಮಹೇಶ್ ಹೇಳಿದರು.

ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸಂಘದ ನಿಯೋಗದ ಬೇಡಿಕೆಗೆ ಸ್ಪಂದಿಸಿ ಭರವಸೆ ನೀಡಿದ ಅವರು, ಷರತ್ತುಗಳ ಕಾರಣ ಶಾಲಾ ಮಾನ್ಯತೆ ನವೀಕರಣಕ್ಕೆ ಆಗುತ್ತಿರುವ ತೊಂದರೆ ಗಮನಕ್ಕೆ ಬಂದಿದೆ. ನ.20ಕ್ಕೆ ಕೊನೆಗೊಳ್ಳಲಿರುವ ನವೀಕರಣ ಅವಧಿಯನ್ನು ವಿಸ್ತರಿಸಲಾಗುವುದುʼ ಎಂದು ತಿಳಿಸಿದರು.

ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಮಾತನಾಡಿ,ʼಅನಾವಶ್ಯಕ ಷರತ್ತುಗಳಿಂದ ಕನ್ನಡ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಬಹಳ ತೊಂದರೆಯಾಗುತ್ತಿದೆ. ಮಾನ್ಯತೆ ಅವಧಿ ಇಷ್ಟರಲ್ಲೇ ಮುಕ್ತಾಯಗೊಳ್ಳಲಿರುವ ಕಾರಣ ಶಾಲಾ ಆಡಳಿತ ಮಂಡಳಿಯವರು ಸಮಸ್ಯೆಯಲ್ಲಿದ್ದಾರೆʼ ಎಂದು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶಾಲಾ ಆಡಳಿತ ಮಂಡಳಿಗಳು ಸಂಕಷ್ಟದ ಮಧ್ಯೆ ಕನ್ನಡ ಮಾಧ್ಯಮ ಶಾಲೆಗಳನ್ನು ನಡೆಸಿಕೊಂಡು ಬರುತ್ತಿವೆ. ಅದಾಗಿಯೂ ನೂರೆಂಟು ಷರತ್ತುಗಳನ್ನು ವಿಧಿಸಿದರೆ ಶಾಲೆ ನಡೆಸುವುದು ಕಷ್ಟ. ಇದರಿಂದಾಗಿಯೇ ಕನ್ನಡ ಶಾಲೆಗಳು ಸೊರಗುತ್ತಿವೆʼ ತಿಳಿಸಿದರು.

1ʼ995 ರ ನಂತರದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಆಯಾ ಜಿಲ್ಲೆಗಳಿಂದ ಅನುದಾನ ಸಂಬಂಧ ಸಲ್ಲಿಸಲಾದ ಖಾಸಗಿ ಶಾಲೆಗಳ ಪಟ್ಟಿ ಖೊಟ್ಟಿಯಾಗಿದೆ. ಈ ಅವಧಿಯಲ್ಲಿ ಆರಂಭವಾದ ಶಾಲೆಗಳ ಪೈಕಿ ಬಹಳಷ್ಟು ಕನ್ನಡ ಮಾಧ್ಯಮ ಶಾಲೆಗಳು ಆಂಗ್ಲ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ ಹೊಂದಿವೆ. ಹೀಗಾಗಿ ಅನುದಾನಕ್ಕೆ ಅರ್ಹತೆ ಹೊಂದಿದ ಕನ್ನಡ ಶಾಲೆಗಳ ಸಂಖ್ಯೆ ಕಡಿಮೆ ಇದೆʼ ಎಂದು ತಿಳಿಸಿದರು.

ʼಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಂಡರೆ, ಶಾಲೆಗಳ ಪಟ್ಟಿ ಹಾಗೂ ಅಗತ್ಯ ಅನುದಾನದ ಕುರಿತು ವರದಿ ಸಲ್ಲಿಸಲಾಗುವುದುʼ ಎಂದು ರಶ್ಮಿ ವಿ. ಮಹೇಶ್ ಹೇಳಿದರು.

ಇದನ್ನೂ ಓದಿ : ಬೀದರ್‌ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

ಸಂಘದ ರಾಜ್ಯ ಉಪಾಧ್ಯಕ್ಷರಾದ ಎಂ. ಮೌಲಾಲಿ, ಡಿ. ನದಾಫ್, ಕಾರ್ಯದರ್ಶಿ ಗುರುನಾಥ ರೆಡ್ಡಿ, ಪ್ರಮುಖರಾದ ಶಾಂತರೆಡ್ಡಿ ಯಾದಗೀರ, ಗುಂಡಯ್ಯ ತೀರ್ಥ, ಕೆ.ಎಂ. ಮಹಾಲಿಂಗನಗೌಡರ, ಪಂಪಾವತಿ ತಿಪ್ಪಣ್ಣ ಕ್ಯಾತನಾಳ್ ನಿಯೋಗದಲ್ಲಿದ್ದರು.
ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಂಘದಿಂದ ಪ್ರತಿ ಪಕ್ಷದ ನಾಯಕರಾದ ಆರ್. ಅಶೋಕ್, ಬಿ.ವೈ. ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹಾಗೂ ಶರಣಗೌಡ ಕಂದಕೂರ ಅವರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...