ಬೀದರ್‌ | ಪತ್ರಿಕೋದ್ಯಮ ಅಧ್ಯಯನದಿಂದ ಸಾಮಾಜಿಕ ಹೊಣೆಗಾರಿಕೆ

Date:

ಸಾಹಿತ್ಯ ಕೃತಿಗಳ ಅನುಸಂಧಾನ, ಪತ್ರಿಕೆಗಳ ಓದು, ಪತ್ರಿಕೋದ್ಯಮ ಅಧ್ಯಯನದಿಂದ ಪ್ರತಿಯೊಬ್ಬರಲ್ಲಿ ಸಾಮಾಜಿಕ ಹೊಣೆಗಾರಿಕೆ ಬರುತ್ತದೆ. ಹೊಸ ಅರಿವಿಗೆ ಮಾಧ್ಯಮಗಳು ಹಾದಿಯಾಗಿವೆ ಎಂದು ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು.

ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ‘ಮಾಧ್ಯಮಗಳು ಮತ್ತು ಸಮಕಾಲೀನ ಸ್ಪಂದನೆ ‘ ಕುರಿತು ಶನಿವಾರ ಹಮ್ಮಿಕೊಂಡಿದ್ದ ಉಪನ್ಯಾಸ ಹಾಗೂ ಸಂವಾದ ಸಮಾರಂಭದಲ್ಲಿ ಅವರು ಮಾತನಾಡಿ, ʼನಮ್ಮ ಸುತ್ತಲಿನ ಆಗು ಹೋಗುಗಳ ಬಗೆಗೆ ಪ್ರಜ್ಞೆ ಮೂಡಿಸುವ ಕೆಲಸ ಮಾಧ್ಯಮಗಳಿಂದ ಸಾಧ್ಯವಾಗುತ್ತದೆʼ ಎಂದರು.

ʼಹಳ್ಳಿ , ನಗರ ಸೇರಿದಂತೆ ಎಲ್ಲಡೆ ಸಮಸ್ಯೆ ಇದ್ದೇ ಇರುತ್ತವೆ. ಆ ಸಮಸ್ಯೆಗಳನ್ನು ಮಾಧ್ಯಮಗಳು ಪ್ರಭುತ್ವಕ್ಕೆ , ಆಳುವವರಿಗೆ, ಅಧಿಕಾರದಲ್ಲಿರುವವರಿಗೆ ತಲುಪಿಸುವ ಕೆಲಸ ಮಾಡುತ್ತವೆ. ಆಡಳಿತಾತ್ಮಕ ಸುಧಾರಣೆಗೆ, ಜನತೆಯ‌ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಾಧ್ಯಮಗಳ ಶ್ರಮಿಸುತ್ತವೆ. ಸತ್ಯಾಸತ್ಯತೆ ಕುರಿತು ಹಿಂದೆಂದಿಗಿಂತಲೂ ಇಂದು ಹೆಚ್ಚು ಒರೆಗೆ ಹಚ್ಚಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಎಲ್ಲ ಮಾಹಿತಿಗಳ ನಿಖರತೆ, ಅಧಿಕೃತತೆಯನ್ನು ಸೂಕ್ಮ್ಮವಾಗಿ ಯೋಚಿಸುವ ಅಗತ್ಯವಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, ʼಮಾಧ್ಯಮಗಳು ತಮ್ಮ ಸಾಂಸ್ಕೃತಿಕ ಹೊಣೆಗಾರಿಕೆಯಿಂದ ಪ್ರಜಾಪ್ರಭುತ್ವ, ಮಾನವೀಯತೆಯ ಜೀವಂತಿಕೆಯನ್ನು ಕಾಪಾಡಿವೆ. ಲೋಕ ಬದಲಾವಣೆ ಮಾಧ್ಯಮಗಳ ದೊಡ್ಡ ಜವಾಬ್ದಾರಿಯಾಗಿದೆʼ ಎಂದರು.

ʼಸಮಕಾಲೀನ ಸ್ಪಂದನೆಯ ಗುಣವಿರುವ ಮಾಧ್ಯಮಗಳು ಎಂದಿಗೂ ಜನರ ಹೃದಯದಲ್ಲಿ ನೆಲೆಸುತ್ತವೆ. ಸಾಮಾಜಿಕ ಸಂಕೀರ್ಣತೆ, ಸಮಸ್ಯೆಗಳು ತೊಡೆದು ಹಾಕುವ ಪ್ರಾಮಾಣಿಕ ಕೆಲಸ ಮಾಧ್ಯಮಗಳು ನಿರಂತರ ಮಾಡುತ್ತಿವೆ. ಮಾಧ್ಯಮಗಳು ಇಲ್ಲದ ಲೋಕ ಊಹಿಸಲು ಸಾಧ್ಯವಿಲ್ಲ. ಪತ್ರಿಕೆಗಳು ಇಲ್ಲದಿದ್ದರೆ ಜಡ ಜಗತ್ತು ರೂಪುಗೊಳ್ಳುವ ಸಾಧ್ಯತೆ ಇತ್ತು. ಪ್ರಭುತ್ವ, ರಾಜಕಾರಣ, ಸಮಾಜ, ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ ಹೀಗೆ ಅಗಾಧ ಸಂಗತಿಗಳು ಜನರಿಗೆ ತಲುಪಿಸುವ ಮೂಲಕ ಮಾಧ್ಯಮಗಳು ಸಮಾಜವನ್ನು ಬೆಳೆಸುತ್ತಿವೆʼ ಎಂದರು.

ಶ್ರೀ ಬಸವೇಶ್ವರ ಸ್ನಾತಕೋತ್ತರ ಕಾಲೇಜು ಪ್ರಾಚಾರ್ಯೆ ಡಾ. ಶಾಂತಲಾ ಪಾಟೀಲ, ಸಂದೀಪ, ಪ್ರಭಾಕರ ನವಗಿರೆ, ಪವನ ಪಾಟೀಲ , ವೀರೇಶ ಸ್ವಾಮಿ, ಶ್ರೀನಿವಾಸ ಉಮಾಪುರೆ, ನಾಗರಾಜ ನಾಸೆ, ಕೃಷ್ಣ ಗೌಳಿ ಸಸ್ತಾಪುರ, ನಾಗವೇಣಿ ವಟಗೆ, ಗುರುದೇವಿ ಕಿಚಡೆ, ಶೃತಿ ಮಠಪತಿ, ಡಾ. ಬಸವರಾಜ ಖಂಡಾಳೆ, ಚೆನ್ನಬಸಪ್ಪ ಗೌರ, ಎಂಡಿ ಜಬಿ , ಸಂಗೀತಾ ಮಹಾಗಾವೆ, ಜಗದೇವಿ ಜವಳಗೆ, ಮೊದಲಾದವರು ಇದ್ದರು.

ಈ ಸುದ್ದಿ ಓದಿದ್ದೀರಾ? ಎಸ್‍ಎಸ್‍ಎಲ್‍ಸಿ ಪತ್ರಿಕೆ ಮರು ಮೌಲ್ಯಮಾಪನ : ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ

ಈ ಸಂದರ್ಭದಲ್ಲಿ ಈ ದಿನ ಡಾಟ್ ಕಾಮ್ ಪ್ರಕಟಿಸಿದ ‘ಅರಿವೆ ಅಂಬೇಡ್ಕರ್ ‘ ಕೃತಿ ಕಾಲೇಜಿಗೆ ಕಾಣಿಕೆ ರೂಪದಲ್ಲಿ ಕೊಡಲಾಯಿತು. ಸಚಿನ ಬಿಡವೆ ಸ್ವಾಗತಿಸಿದರು. ಗಂಗಾಧರ ಸಾಲಿಮಠ ನಿರೂಪಿಸಿದರು. ರೋಶನ್ ಬೀ ಯದಲಾಪುರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...