ಬೀದರ್ | ಬೇಡಿಕೆಯಂತೆ ಸೋಯಾಬೀನ್ ಪೂರೈಕೆ ; ರೈತರಿಗೆ ಸಚಿವ ಈಶ್ವರ ಖಂಡ್ರೆ ಭರವಸೆ

Date:

ಬೀದರ್ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಸೋಯಾಬೀನ್ ಬಿತ್ತನೆ ಬೀಜ ಪೂರೈಕೆ ಮಾಡಲು ಕ್ರಮ ವಹಿಸಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

‘ಈ ಬಾರಿ ವಾಡಿಕೆಗಿಂತಲೂ ಉತ್ತಮ ಮಳೆಯಾಗಿರುವ ಕಾರಣ ಸೋಯಾಬಿನ್ ಬಿತ್ತನೆ ಬೀಜಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಸಕ್ತ ಸಾಲಿನಲ್ಲಿ 1,02500 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜ ಮಂಜೂರಾಗಿದ್ದು, ಈಗಾಗಲೇ 8,7500 ಕ್ವಿಂಟಾಲ್ ವಿತರಣೆ ಮಾಡಲಾಗಿದೆ.15,000 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜ ಬೀದರ್‌ಗೆ ರವಾನೆ ಆಗಿದ್ದು 2-3 ದಿನಗಳಲ್ಲಿ ರೈತರಿಗೆ ಲಭ್ಯವಾಗಲಿದೆ’ ಎಂದು ತಿಳಿಸಿದ್ದಾರೆ.

‘ಕಳೆದ ವರ್ಷ ಜಿಲ್ಲೆಯಲ್ಲಿ 1,12,000 ಕ್ವಿಂಟಾಲ್ ಸೋಯಾಬಿನ್ ಬಿತ್ತನೆ ಬೀಜಗಳ ವಿತರಣೆ ಮಾಡಲಾಗಿತ್ತು. ಈ ಬಾರಿ ಉತ್ತಮ ಪೂರ್ವ ಮುಂಗಾರು ಮಳೆಯಿಂದ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಯಾದಗಿರಿಯಲ್ಲಿಂದು ನಡೆದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಈ ಸಂಬಂಧ ಮನವಿ ಸಲ್ಲಿಸಿದ್ದು,15,000 ಕ್ವಿಂಟಾಲ್ ಸೋಯಾಬೀನ್ ಬಿತ್ತನೆ ಬೀಜ ಹೆಚ್ಚುವರಿಯಾಗಿ ಮಾರುಕಟ್ಟೆಯಲ್ಲಿ ಖರೀದಿಸಿ ವಿತರಿಸಲು ಸಮ್ಮತಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಕಳೆದ ಮೂರು ವರ್ಷದಲ್ಲಿ 39 ಬಾಲ ಕಾರ್ಮಿಕರ ರಕ್ಷಣೆ : ಬೇಕಿದೆ ಇನ್ನಷ್ಟು ಬಿಗಿ ಕ್ರಮ

‘ಶೀಘ್ರವೇ ಹೆಚ್ಚುವರಿ ಬಿತ್ತನೆ ಬೀಜವೂ ಬೀದರ್‌ಗೆ ಆಗಮಿಸಲಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ವಿತರಿಸಲಾಗುವುದು. ಯಾರೂ ಆತಂಕ ಪಡುವುದು ಬೇಡ’ ಎಂದು ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...