ಬೀದರ್‌ | ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೊದಲ ದಿನ 1,039 ವಿದ್ಯಾರ್ಥಿಗಳು ಗೈರು

Date:

ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಕ್ರವಾರ (ಮಾ.21) ಆರಂಭಗೊಂಡಿದ್ದು, ಮೊದಲ ದಿನ ನಡೆದ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ 1,039 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಬೀದರ್ ಜಿಲ್ಲೆಯ 91 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1,264 ಕೊಠಡಿಗಳಲ್ಲಿ ಪರೀಕ್ಷೆ ನಡೆಯಿತು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ನೇರ ವೀಕ್ಷಣೆಗೆ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಸಹ ಮಾಡಲಾಗಿತ್ತು.

ʼಪರೀಕ್ಷೆಗೆ ಒಟ್ಟು 26,507 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು, ಈ ಪೈಕಿ 25,468 ವಿದ್ಯಾರ್ಥಿಗಳು ಹಾಜರಾಗಿದ್ದರು. 1,039 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆʼ ಎಂದು ಡಿಡಿಪಿಐ ಕಚೇರಿ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕಾ ಕೇಂದ್ರಗಳಿಗೆ ಡಿಸಿ, ಎಸ್ಪಿ ಭೇಟಿ :

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ್‌ ಓಲ್ಡ್ ಸಿಟಿಯಲ್ಲಿರುವ ಆಲ್ ಅಮೀನ್ ಶಾಲೆಯ‌ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಬೀದರ್ ನಗರದ ಲಕ್ಷ್ಮೀಬಾಯಿ ಕಮಠಾಣೆ ಶಾಲೆ ಮತ್ತು ಜೀಜಾಮಾತಾ ಶಾಲೆಯ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿರುವ ಬಗ್ಗೆ ವೀಕ್ಷಿಸಿದರು.

WhatsApp Image 2025 03 21 at 7.11.27 PM
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಬೀದರ್‌ನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಾಜರಾತಿ ವಿವರ :

ಔರಾದ್ ತಾಲ್ಲೂಕಿನಲ್ಲಿ ಒಟ್ಟು 3,330 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು, ಈ ಪೈಕಿ 3,222 ವಿದ್ಯಾರ್ಥಿಗಳು ಹಾಜರಾದರೆ, 108 ವಿದ್ಯಾರ್ಥಿಗಳು ಗೈರಾದರು. ಬಸವಕಲ್ಯಾಣದಲ್ಲಿ 5,348 ವಿದ್ಯಾರ್ಥಿಗಳ ಪೈಕಿ 5,153 ವಿದ್ಯಾರ್ಥಿಗಳು ಹಾಜರಾದರೆ, 195 ವಿದ್ಯಾರ್ಥಿಗಳು ಗೈರಾದರು. ಭಾಲ್ಕಿಯಲ್ಲಿ 4,323 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 4,095 ವಿದ್ಯಾರ್ಥಿಗಳ ಹಾಜರಾದರೆ, 228 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಮನೆಯಲ್ಲಿ ತಾಯಿ ನಿಧನ, ಮಡುಗಟ್ಟಿದ ದುಃಖದ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

ಬೀದರ್‌ ತಾಲ್ಲೂಕಿನಲ್ಲಿ 7,594 ವಿದ್ಯಾರ್ಥಿಗಳ ಪೈಕಿ 7,278 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರೆ, 316 ವಿದ್ಯಾರ್ಥಿಗಳು ಗೈರಾದರು. ಹುಮನಾಬಾದ ತಾಲ್ಲೂಕಿನಲ್ಲಿ 5,912 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,720 ವಿದ್ಯಾರ್ಥಿಗಳು ಹಾಜರಾದರೆ, 192 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...