ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ : ಔರಾದ್‌ ತಾಲ್ಲೂಕಿಗೆ ಆದರ್ಶ‌ ಟಾಪರ್

Date:

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಔರಾದ್‌ ತಾಲ್ಲೂಕಿನ ಸಂತಪೂರ ಗ್ರಾಮದ ಜ್ಞಾನ ಭಾರತಿ ಗುರುಕುಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದರ್ಶ ವಿಠ್ಠಲರಾವ ತಾಲ್ಲೂಕಿಗೆ ಟಾಪರ್‌ ಆಗಿ ಹೊರಹೊಮ್ಮುವ ಮೂಲಕ ಗಮನ ಸೆಳೆದಿದ್ದಾರೆ.

ಆದರ್ಶ 625 ಅಂಕಗಳ ಪೈಕಿ 620 ಅಂಕ (ಶೇ 99.20) ಗಳಿಸಿದ್ದಾರೆ. ಕನ್ನಡದಲ್ಲಿ 125, ಸಮಾಜ ವಿಜ್ಞಾನ 100, ಇಂಗ್ಲಿಷ್‌ 98 ಹಾಗೂ ಹಿಂದಿ, ಗಣಿತ, ವಿಜ್ಞಾನದಲ್ಲಿ ತಲಾ 99 ಅಂಕ ಪಡೆದಿದ್ದಾರೆ.

ಆದರ್ಶ ಅವರ ಕುಟುಂಬ ಮೂಲತಃ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸದ್ಯ ಸಂತಪೂರನಲ್ಲಿ ನೆಲೆಸಿರುವ ಇವರ ತಂದೆ ಪುಟ್ಟದೊಂದು ಕಿರಾಣಿ ಅಂಗಡಿ ನಡೆಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪರೀಕ್ಷೆಗೆ ಮುಂಚೆಯೇ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಂಡಿದ್ದರಿಂದ ಸಾಧನೆ ಸುಲಭವಾಯಿತು. ಶಾಲೆಯಲ್ಲಿ ಶಿಕ್ಷಕರ, ಪಾಲಕರ ಪ್ರೋತ್ಸಾಹದಿಂದ ಸಾಧನೆ ಮಾಡಲು ಸಾಧ್ಯವಾಗಿದೆ. ಪಿಯುಸಿ ವಿಜ್ಞಾನ ವಿಭಾಗ ಆಯ್ಕೆ ಮಾಡಿಕೊಳ್ಳುವೆ. ಮುಂದೆ ಜೆಇಇ ಸಿದ್ಧತೆ ನಡೆಸಿ ವಿಜ್ಞಾನಿ ಆಗುವ ಕನಸಿದೆʼ ಎಂದು ಹೇಳಿದರು.

ʼನಮ್ಮ ಮಗ ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಸಂತಸವಾಗಿದೆ. ಸಾಧನೆಯ ಛಲ, ಸ್ಪಷ್ಟ ಗುರಿ ಹಾಗೂ ಕಲಿಕೆಯ ಬಗ್ಗೆ ಆಸಕ್ತಿ ಇದ್ದರೆ ಹೆಚ್ಚಿನ ಅಂಕಗಳನ್ನು ಗಳಿಸುವುದು ಕಷ್ಟವೇನಲ್ಲ. ಒತ್ತಾಯದ ಓದು ಹೆಚ್ಚು ಉತ್ತಮ ಫಲ ನೀಡದು. ಶೈಕ್ಷಣಿಕ ಸಾಧನೆಯಲ್ಲಿ ವಿದ್ಯಾರ್ಥಿಗಳ ಪರಿಶ್ರಮ ಮಹತ್ವ ಪಡೆದುಕೊಳ್ಳುತ್ತದೆʼ ಎಂದು ಪೋಷಕರು ಹೇಳಿದರು.

ವಿದ್ಯಾರ್ಥಿ, ಪೋಷಕರಿಗೆ ಸನ್ಮಾನ :

ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಂತಪೂರ ಗ್ರಾಮದ ಜ್ಞಾನ ಭಾರತಿ ಗುರುಕುಲ ಪ್ರೌಢ ಶಾಲೆಯು ಶೇ 98.12ರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ. ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿ ಸಾಧನೆಗೈದ ವಿದ್ಯಾರ್ಥಿ ಆದರ್ಶ ವಿಠ್ಠಲರಾವ್‌ ಅವರಿಗೆ ಶಾಲಾ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು.

ಪರೀಕ್ಷೆ ಬರೆದ 41 ವಿದ್ಯಾರ್ಥಿಗಳ ಪೈಕಿ 20 ಅಗ್ರಶ್ರೇಣಿ, 17 ಪ್ರಥಮ ದರ್ಜೆ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಕನ್ನಡ ವಿಷಯದಲ್ಲಿ 6 ವಿದ್ಯಾರ್ಥಿಗಳು 125ಕ್ಕೆ 125 ಅಂಕ ಗಳಿಸಿ ಗಮನ ಸೆಳೆದಿದ್ದಾರೆ.

ಆದರ್ಶ ಶೇ 99.20 ರಷ್ಟು ಅಂಕ ಗಳಿಸಿ ತಾಲ್ಲೂಕಿಗೆ ಟಾಪರ್ ಆಗಿದ್ದಾರೆ. ಆದಿತ್ಯ ಶೇ 98.72, ಅಮೂಲ್ಯ ಶೇ 96.48, ಸಾಯಿಕುಮಾರ ಶೇ 96, ಸೃಷ್ಟಿ ಶೇ 95.68, ಜ್ಯೋತಿ ಶೇ 95.52, ಗಣೇಶ ಶೇ 95.20 ಹಾಗೂ ಮಹಾದೇವ ಚಂದ್ರಕಾಂತ ಶೇ 95.04ರಷ್ಟು ಅಂಕ ಪಡೆದು ಸಾಧನೆ ತೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? SSLC Results : 31ನೇ ಸ್ಥಾನಕ್ಕೆ ಬೀದರ್ ; ಶ್ರೀಜಾ ಪಾಟೀಲ್ ಜಿಲ್ಲೆಗೆ ಟಾಪರ್

ವಿದ್ಯಾರ್ಥಿಗಳ ಸಾಧನೆಗೆ ಜ್ಞಾನ ದಾಸೋಹ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ವಿಜಯಕುಮಾರ್‌ ಬಾಬಣೆ, ಕಾರ್ಯದರ್ಶಿ ಗುರುನಾಥ ದೇಶಮುಖ, ಪ್ರೌಢ ವಿಭಾಗದ ಮುಖ್ಯಗುರು ಮಧುಕರ ಭಂಗಾರೆ, ಪ್ರಾಥಮಿಕ ವಿಭಾಗದ ಚಿರಂಜೀವಿ ಪಾಟೀಲ್‌ ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...