ಬೀದರ್‌ | ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಅಗತ್ಯ : ಜೀವನ ವಾಘಮಾರೆ

Date:

ಆಧುನಿಕ ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಗೆ ವಿಪುಲ ಅವಕಾಶಗಳಿದ್ದು, ಸರ್ಕಾರ, ಸಂಘ-ಸಂಸ್ಥೆಗಳಿಂದ ನೀಡುವ ಉಚಿತ ಕೌಶಲ್ಯ ತರಬೇತಿಯಿಂದ ಅಪಾರ ಜ್ಞಾನ ಪಡೆದುಕೊಳ್ಳಬಹುದು ಎಂದು ಹೆಡ್ ಹೆಲ್ಡ್ ಹೈ‌ ಸಂಸ್ಥೆಯ ತರಬೇತಿದಾರ ಜೀವನ ವಾಘಮಾರೆ ಹೇಳಿದರು.

ಭಾಲ್ಕಿ ಪಟ್ಟಣದ ಆರ್ಯಾನ್‌ ಇನ್ಸ್‌ಟೂಟ್‌ನಲ್ಲಿ‌ ಹೆಡ್ ಹೆಲ್ಡ್ ಹೈ‌ ಸಹಯೋಗದಲ್ಲಿ 45 ದಿನಗಳ ಉಚಿತ ಕೌಶಲ್ಯ ತರಬೇತಿ ಪಡೆದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ʼವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಕಂಪ್ಯೂಟರ್‌ ತರಬೇತಿ, ವ್ಯಕ್ತಿತ್ವ ವಿಕಸನ, ಉದ್ಯೋಗ ಮಾಹಿತಿ ಪಡೆಯುವುದು ಅಗತ್ಯವಿದೆ. ಇದರಿಂದ ವಿವಿಧ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗುತ್ತದೆʼ ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಕರ್ತ ಬಾಲಾಜಿ ಕುಂಬಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼವಿದ್ಯಾರ್ಥಿಗಳು ಪಠ್ಯದ ಜೊತೆಗೆ ಬದುಕು ಕಟ್ಟಿಕೊಳ್ಳಲು ಪೂರಕ ಜ್ಞಾನಾರ್ಜನೆ ಪಡೆಯುವುದು ಅಗತ್ಯವಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಕಂಪ್ಯೂಟರ್‌, ಕೌಶಲಾಭಿವೃದ್ಧಿ ಕಲಿಕೆಯಿಂದ ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆಯಬಹುದು. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಹೆಚ್ಚಿನ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕುʼ ಎಂದರು.

ಆರ್ಯಾನ್‌ ಇನ್ಸಟೂಟ್‌ ಸಂಯೋಜಕ ಏಕನಾಥ ಮೇತ್ರೆ ಮಾತನಾಡಿ, ʼನಮ್ಮ ಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಸರ್ಕಾರದ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್‌ ತರಬೇತಿ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಚೆಂಡು ಹೂವು ಕೃಷಿಯಲ್ಲಿ ಖುಷಿ ಕಂಡ ಬಿಎಸ್ಸಿ ಪದವೀಧರ

ಕಾರ್ಯಕ್ರಮದಲ್ಲಿ ಆರ್ಯಾನ್‌ ಇನ್ಸ್‌ಟೂಟ್ ಸಿಬ್ಬಂದಿಗಳಾದ ವಿಶಾಲ ಸಿಂಧೆ, ಮಹೇಶ್ವರಿ ಹಾಗೂ ತರಬೇತಿ ಪಡೆದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಗಾಯತ್ರಿ ಪಾಂಚಾಳ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...