ಬೀದರ್‌ | ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಆರ್.ವಿ.ಗಂಗಶೆಟ್ಟಿ

Date:

ಬೀದರ್‌ನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿದ ಬ್ಯಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ವಿಜಯಪುರದ ಬಿ.ಎಲ್.ಡಿ. ಸಂಸ್ಥೆಯ ಸಂಚಾಲಿತ ಎಸ್.ಬಿ.ಎಸ್ ಮಹಿಳಾ ಕಾಲೇಜು ತಂಡ ಪ್ರಥಮ ಸ್ಥಾನ ಗಳಿಸಿತು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ತಂಡ ದ್ವಿತೀಯ ಸ್ಥಾನ ಪಡೆದರೆ, ಧಾರವಾಡದ ಶ್ರೀ ಸತ್ಯಸಾಯಿ ಮಹಿಳಾ ಕಾಲೇಜು ತಂಡ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.

ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಆರ್.ವಿ.ಗಂಗಶೆಟ್ಟಿ ಮಾತನಾಡಿ, ʼವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ವಿವಿಧ ಸ್ಪರ್ಧೆಗಳಲ್ಲಿ ಪ್ರತಿಭೆ ಪ್ರದರ್ಶಿಸಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಪ್ರೊ.ಮನೋಜಕುಮಾರ ಮಾತನಾಡಿ, ʼಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿರಲಿದೆ. ವಿದ್ಯಾರ್ಥಿನಿಯರು ಮೊಬೈಲ್‌ನಿಂದ ದೂರ ಉಳಿದು, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕುʼ ಎಂದು ಸಲಹೆ ಮಾಡಿದರು.

ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರವಿ ನಾಯಕ್ ಅವರು, ʼಕ್ರೀಡೆಗಳು ಮನಸ್ಸಿಗೆ ಹೊಸ ಚೈತನ್ಯ ನೀಡುತ್ತವೆʼ
ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ : ಸಚಿವ ಈಶ್ವರ ಖಂಡ್ರೆ

ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಮನೋಹರ ಘಾಳೆಪ್ಪ ಸ್ವಾಗತಿಸಿದರು. ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಡಾ.ವಿದ್ಯಾ ಪಾಟೀಲ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...