ಬೀದರ್‌ | ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಲಿ : ರಾಜಕುಮಾರ್‌ ಅಲ್ಲೂರೆ

Date:

ಈಗ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಬೇಕು ಎಂದು ಪ್ರಭಾರ ಪ್ರಾಚಾರ್ಯ ಡಾ. ರಾಜಕುಮಾರ ಅಲ್ಲೂರೆ ಹೇಳಿದರು.

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗ ಹಾಗೂ ಸಂಶೋಧನಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದ ಎಂ.ಎ.ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಗುಲಬರ್ಗಾ ವಿಶ್ವವಿದ್ಯಾಲಯದ ರ‍್ಯಾಂಕ್ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ʼಕಠಿಣ ಪರಿಶ್ರಮ ವಹಿಸಿದರೆ ಮಾತ್ರ ಉನ್ನತ ಹುದ್ದೆ ಪಡೆಯಲು ಸಾಧ್ಯವಿದೆʼ ಎಂದು ತಿಳಿಸಿದರು.

ಉದ್ಘಾಟನೆ ನೆರವೇರಿಸಿದ ಪ್ರಾಧ್ಯಾಪಕಿ ಡಾ. ಶೀಲಾ ಎನ್.ಎಸ್. ಮಾತನಾಡಿ, ʼವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಅದಕ್ಕೆ ಪೂರಕವಾಗಿ ತಯಾರಿ ನಡೆಸಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಪೂರೈಸಿದವರಿಗೆ ವಿಪುಲ ಉದ್ಯೋಗ ಅವಕಾಶಗಳು ಇವೆ ಎಂದು ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸುಚಿತಾನಂದ ಕೆ.ಮಲ್ಕಾಪುರೆ ತಿಳಿಸಿದರು.

2023-24ನೇ ಸಾಲಿನ ಎಂ.ಎ. ಅರ್ಥಶಾಸ್ತ್ರ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ರ‍್ಯಾಂಕ್ ಗಳಿಸಿದ ರೇಬಿಕಾ, ಭಾಗ್ಯಶ್ರೀ ಹಾಗೂ ಪೂಜಾ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

ಕಾಲೇಜಿನ ವಿದ್ಯುನ್ಮಾನ ವಿಭಾಗದ ಮುಖ್ಯಸ್ಥ ಡಾ.ನಾಗರಾಜ ಕುಲಕರ್ಣಿ, ಸಹ ಪ್ರಾಧ್ಯಾಪಕ ಡಾ. ಜೈ ಭರತ ಎಂ. ಮಂಗೇಶ್ಕರ್, ಉಪನ್ಯಾಸಕರಾದ ಪ್ರೊ.ಬಸವರಾಜ ಕುರಕೋಟಿ ಉಡಮನಳ್ಳಿ, ಡಾ.ಸುನೀಲಕುಮಾರ ಮೂಲಗೆ, ಡಾ.ಬೊಕ್ಕರ್ಲ ನಾಗೇಂದ್ರಪ್ಪ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ನಾಗಾರ್ಜುನ, ಕಾವ್ಯಶ್ರೀ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...