ಬೀದರ್‌ | ಸದೃಢ ಮನೋಬಲದಿಂದ ಜೀವನದಲ್ಲಿ ಯಶಸ್ಸು : ದೀಲಿಪಕುಮಾರ ತಾಳಂಪಳ್ಳಿ

Date:

ಸದೃಢ ಮನೋಬಲದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಅದಕ್ಕಾಗಿ ನಿರಂತರ ಪ್ರಯತ್ನ ಇರಬೇಕು ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ ದೀಲಿಪಕುಮಾರ ತಾಳಂಪಳ್ಳಿ ಹೇಳಿದರು.

ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನಲ್ಲಿ 2025-26ನೇ ಸಾಲಿನಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ ಇಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼವಿದ್ಯಾರ್ಥಿಗಳು ಯಶಸ್ಸಿನ ಹಿಂದೆ ಓಡಬೇಕು. ಪಠ್ಯ ಶಿಕ್ಷಣ ಜೊತೆಗೆ ಉತ್ತಮ ಸಂಸ್ಕಾರ ಕಲಿಯುವುದು ಮುಖ್ಯ. ಕಾಲೇಜಿನಲ್ಲಿರುವ ಉತ್ತಮ ಸೌಲಭ್ಯಗಳನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು. ಸತತ ಅಧ್ಯಯನದಿಂದ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಮಲ್ಲಮ್ಮಾ ಎಂ.ತಾಳಂಪಳ್ಳಿ ಮಾತನಾಡಿ, ʼಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಡೀ ದೇಶದಲ್ಲಿ 15 ಲಕ್ಷಕ್ಕಿಂತ ಹೆಚ್ಚು ಹಾಗೂ ರಾಜ್ಯದ್ಲಲಿ 1.5ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇಂಜಿನೀಯರಿಂಗ್‌ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ. ಅವರೊಂದಿಗೆ ನಿಮ್ಮ ಸ್ಪರ್ಧೆ ಇರುತ್ತದೆ ಎಂದು ತಿಳಿದು ನಿರಂತರ ಅಧ್ಯಯನದಿಂದ ಬದುಕಿನಲ್ಲಿ ಸಾಧನೆ ಮಾಡಬಹುದುʼ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಬಿಇಟಿ ಸಂಸ್ಥೆಯ ನಿರ್ದೇಶಕ, ಬಸವಕಲ್ಯಾಣ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ ಮಾತನಾಡಿ, ʼಇಂದಿನ ತಂತ್ರಜ್ಞಾನ ಯುಗದಲ್ಲಿ ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಮುನ್ನುಗ್ಗಬೇಕಾಗಿದೆ. ಉಜ್ವಲ ಭವಿಷ್ಯಕ್ಕಾಗಿ ಗಂಭೀರವಾಗಿ ಆಲೋಚಿಸಿ, ಕನಸು ನನಸು ಮಾಡಿಕೊಳ್ಳುವ ತುಡಿತವಿರಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಆರೋಪ : ಇಬ್ಬರು ಪಿಡಿಒ ಅಮಾನತು

ಇಂಜಿನಿಯರಿಂಗ್ ಕಾಲೇಜಿನ ರಜಿಸ್ಟಾರ್ ಪ್ರೇಮಸಾಗರ ಪಾಟೀಲ ಸೇರಿದಂತೆ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಉಪಪ್ರಾಚಾರ್ಯ ಡಾ.ಅರುಣಕುಮಾರ ಯಲಾಲ ನಿರೂಪಿಸಿದರು, ವಿದ್ಯಾಸಾಗರ ಹಾಗೂ ಆರ್.ಬಿ.ಡಿಗ್ಗಿಕರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...