ಬೀದರ್‌ | ಆತ್ಮಬಲದಿಂದ ಯಶಸ್ಸು ಸುಲಭ : ಮಲ್ಲಮ್ಮಾ ತಾಳಂಪಳ್ಳಿ

Date:

ವಿದ್ಯಾರ್ಥಿ ಜೀವನದಲ್ಲಿ ಮನೋಬಲ, ಆತ್ಮಬಲವಿದ್ದರೆ ಮಾತ್ರ ಯಶಸ್ಸು ಸುಲಭವಾಗಿ ಸಾಧಿಸಲು ಸಾಧ್ಯ ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಮಲ್ಲಮ್ಮ ಎಂ.ತಾಳಂಪಳ್ಳಿ ಹೇಳಿದರು.

ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಡಿಪ್ಲೋಮಾಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸ್ವಾಗತ
ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ʼಜೀವನುದ್ದಕ್ಕೂ ಪ್ರತಿ ಹಂತದಲ್ಲಿಯೂ ಯಶಸ್ಸಿಗೆ ಪ್ರಯತ್ನಿಸಬೇಕುʼ ಎಂದರು.

ʼಕಾಲೇಜಿನಲ್ಲಿರುವ ಒಳ್ಳೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಉತ್ತಮ ಜ್ಞಾನ ಪಡೆದು ಉನ್ನತ ಹುದ್ದೆ ಪಡೆಯಬೇಕು. ಕುಟುಂಬಸ್ಥರು, ಶಿಕ್ಷಕರು ಇಟ್ಟಿರುವ ವಿಶ್ವಾಸಕ್ಕೆ ಪಾತ್ರರಾಗಲು ಮುನ್ನಡೆಯಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಎನ್.ಆರ್.ಕೋಡ್ಲೆ ಮಾತನಾಡಿ, ʼಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಜೀವನದಲ್ಲಿ ಮುನ್ನುಗ್ಗಬೇಕಾಗಿದೆ. ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಿ, ಉಚ್ಛ ಶ್ರೇಣಿಯಲ್ಲಿ ಪಾಸಾಗಿ, ಮುಂದಿನ ಭವಿಷ್ಯಕ್ಕಾಗಿ ಗಂಭೀರವಾಗಿ ಚಿಂತಿಸಬೇಕು ಸದಾ ಯಶಸ್ಸಿನ ಹಂಬಲವಿರಬೇಕುʼ ಎಂದು ಕಿವಿಮಾತು ಹೇಳಿದರು.

WhatsApp Image 2025 07 03 at 4.18.28 PM

ಬಿಇಟಿ ಸಂಸ್ಥೆಯ ನಿರ್ದೇಶಕ ಹಾಗೂ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ ಅವರು ಮಾತನಾಡಿ, ʼಜೀವನದಲ್ಲಿ ಉತ್ತಮ ಶಿಕ್ಷಣ ಜತೆಗೆ ಒಳ್ಳೆಯ ಸಂಸ್ಕಾರ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ. ದೇಶದ ಸೇವೆಯಲ್ಲಿ ತೊಡಗಿಕೊಂಡು ಸಮಾಜದ ಒಳಿತಿಗಾಗಿ ಶ್ರಮಿಸಬೇಕುʼ ಎಂದು ಹೇಳಿದರು.

ಬಸವಕಲ್ಯಾಣ ಐಟಿಐ ಕಾಲೇಜಿನ ಪ್ರಾಚಾರ್ಯ ಶಿವಕುಮಾರ ಸ್ವಾಮಿ ಹಾಗೂ ಬಸವಕಲ್ಯಾಣ ಇಂಜಿನೀಯರಿಂಗ್ ಕಾಲೇಜಿನ ಕಚೇರಿ ಅಧೀಕ್ಷಕರು ವೃಷೀಕೇತ ಭೂಸಾರೆ ಅವರು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಿಎಂಗೆ ಮನವಿ

ಬಸವಕಲ್ಯಾಣ ಬಿಇಟಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಚಾರ್ಯ ಡಾ.ಅರುಣಕುಮಾರ ಎಲಾಲ, ಕುಲಸಚಿವ ಪ್ರೇಮಸಾಗರ ಪಾಟೀಲ, ಪಿಆರ್‌ಒ ಶಂಕರ ಆಗರಗಿ ಸೇರಿದಂತೆ ಕಾಲೇಜಿನ ಎಲ್ಲ ವಿಭಾಗ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು. ಯೋಗೆಂದ್ರಸಿಂಗ್ ಸ್ವಾಗತಿಸಿದರು, ವಿದ್ಯಾಸಾಗರ ನಿರೂಪಿಸಿದರು ಹಾಗೂ ನೀಕತ್ ಫಾತಿಮಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...