ಬೀದರ್‌ | ವಿವಾಹೇತರ ಸಂಬಂಧ ಶಂಕೆ : ಎರಡು ವರ್ಷದ ಮಗು ಕಣ್ಣೆದುರಲ್ಲೇ ದಂಪತಿ ಕೊಲೆ

Date:

ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಎರಡು ವರ್ಷದ ಮಗು ಕಣ್ಣೆದುರಲ್ಲೆ ದಂಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರು ಪಹಾಡ ಬಳಿ ಮಂಗಳವಾರ ನಡೆದಿದೆ.

ಬಸವಕಲ್ಯಾಣ ತಾಲ್ಲೂಕಿನ ಜಾಫರವಾಡಿ ನಿವಾಸಿ ರಾಜಕುಮಾರ್ ಕೊಳಸೂರೆ (28), ಸಾರಿಕಾ (23) ಕೊಲೆಯಾದ ದಂಪತಿ. ಅದೇ ತಾಲ್ಲೂಕಿನ ಯರಂಡಗಿ ಗ್ರಾಮದ ದತ್ತಾತ್ರೇಯ ಬಾಲೆ ಹಾಗೂ ತುಕಾರಾಮ ಚಿಟ್ಟಂಪಲ್ಲೆ ಕೊಲೆಗೈದದವರು.

ಕೊಲೆಯಾದ ರಾಜಕುಮಾರ್ ಆರೋಪಿ ದತ್ತಾತ್ರೇಯ ಅವರ ಸಹೋದರಿ ಜೊತೆ ವಿವಾಹೇತರ ಸಂಬಂಧ ಹೊಂದಿದ್ದು , ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಜೊತೆಗಿದ್ದ ಫೋಟೋಗಳನ್ನು ರಾಜಕುಮಾರ್ ಶೇರ್ ಮಾಡಿದ್ದ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕುಮಾರ್ ಕೊಲೆಗೆ ಸಂಚು ರೂಪಿಸಿದ ಆರೋಪಿಗಳು ಯುವತಿ ಕಡೆಯಿಂದ ಕರೆ ಮಾಡಿಸಿ ಮುಂಬೈಯಿಂದ ಊರಿಗೆ ಕರೆಸಿಕೊಂಡಿದ್ದಾರೆ. ನಿನ್ನೆ (ಏ.29) ಕೊಹಿನೂರು ಪಹಾಡ-ಲಾಡವಂತಿ ಸಮೀಪ ಮಾತನಾಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಚ್ಚಿನಿಂದ ಕತ್ತು ಸೀಳಿ ದಂಪತಿಯನ್ನು ಹತ್ಯೆಗೈದಿದ್ದಾರೆ.

ಜೊತೆಯಲ್ಲಿದ್ದ ಎರಡು ವರ್ಷದ ಮಗು ಕಣ್ಣೆದುರೇ ಪೋಷಕರನ್ನು ಕಳೆದುಕೊಂಡು ಅನಾಥ ಶವಗಳ ಎದುರು ಕುಳಿತಿದ್ದ ದೃಶ್ಯ ಮನಕಲಕುವಂತಿತ್ತು.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್​​ ಗುಂಟಿ, ಡಿವೈಎಸ್ಪಿ ಜೆ.ಎಸ್​​. ನ್ಯಾಮೆಗೌಡರ್​​, ಸಿಪಿಐ ಕೃಷ್ಣಕುಮಾರ ಪಾಟೀಲ್​, ಪಿಎಸ್​ಐ ಸುವರ್ಣ ಮಲ್ಲಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ವಾವಲಂಬಿ ಬದುಕಿಗೆ ಮನರೇಗಾ ಬಲ: ಬ್ಯಾಂಕ್ ಮ್ಯಾನೇಜರ್ ಹುದ್ದೆ ತೊರೆದು ಕುರಿ ಸಾಕಾಣಿಕೆಯತ್ತ ಪದವೀಧರ

ಕೊಲೆ ಆರೋಪಿಗಳಾದ ದತ್ತಾತ್ರಿ ಬಾಲೆ , ತುಕಾರಾಮ ಬಾಬುರಾವ್ ಹಾಗೂ ವಿವಾಹಿತ ಮಹಿಳೆಯೊಬ್ಬರ ವಿರುದ್ದ ಮಂಠಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...