ಬೀದರ್‌ | ಎಐ ತಂತ್ರಜ್ಞಾನದಿಂದ ಸುಸ್ಥಿರ ಅಭಿವೃದ್ಧಿ ಸಾಧ್ಯ: ಶಿವಾನಂದ ಗೊರನಾಳೆ

Date:

ʼಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ಶಿಕ್ಷಣ, ಪರಿಸರ ಸಂರಕ್ಷಣೆ, ಸೌರಶಕ್ತಿ ಯೋಜನೆಗಳು, ಜಲ ಸಂಪನ್ಮೂಲ ನಿರ್ವಹಣೆ ಮತ್ತು ನಗರ ಯೋಜನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆʼ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಶಿವಾನಂದ ಎಸ್. ಗೊರನಾಳೆ ಹೇಳಿದರು.

ಬೀದರ್‌ ನಗರದ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ʼಸುಸ್ಥಿರ ಅಭಿವೃದ್ಧಿ ಮತ್ತು ಆಂತರಿಕ ಭವಿಷ್ಯಕ್ಕಾಗಿ ಎಐ ತಂತ್ರಜ್ಞಾನʼ ವಿಷಯದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ʼಭವಿಷ್ಯದಲ್ಲಿ ಕಡಿಮೆ ಸಂಪನ್ಮೂಲ ಬಳಕೆಯೊಂದಿಗೆ ತ್ವರಿತ ಮತ್ತು ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಳ್ಳಲು ಎಐ ತಂತ್ರಜ್ಞಾನ ನೆರವಾಗಲಿದೆ. ವಿಶ್ವ ಸಂಸ್ಥೆಯು ಸುಸ್ಥಿರ ಅಭಿವೃದ್ಧಿಗೆ 17 ಗುರಿಗಳನ್ನು ನಿಗದಿಪಡಿಸಿದ್ದು, ಅದರಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಪ್ರಮುಖ ಗುರಿಯಾಗಿದೆ. ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಈ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿ, ʼಗುಣಮಟ್ಟದ ಶಿಕ್ಷಣ ನೀಡುವುದು ಸುಸ್ಥಿರ ಅಭಿವೃದ್ಧಿಯ ಪ್ರಮುಖ ಅಂಗವಾಗಿದೆ ಎಂದು ಹೇಳಿದರು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಂಸ್ಥೆಯು ಸಹಾಯ ನೀಡುತ್ತಿದೆʼ ಎಂದರು.

WhatsApp Image 2025 10 25 at 8.03.12 AM

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಮಲ್ಲಿಕಾರ್ಜುನ ಹಂಗರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಪರೀಕ್ಷಾ ನಿಯಂತ್ರಕ ಡಾ.ಶ್ರೀದೇವಿ ಸೋಮ, ಕೆಆರ್‌ಇ ಸೊಸೈಟಿಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ್, ಕಾರ್ಯದರ್ಶಿ ಸತೀಶ್ ಪಾಟೀಲ್, ಜಂಟಿ ಕಾರ್ಯದರ್ಶಿ ಶಿವಾನಂದ ಗದ್ಗೆ ಹಾಗೂ ವಿವಿಧ ಕಾಲೇಜುಗಳ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...