ಬೀದರ್‌ | ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಹುದ್ದೆ ಖಾಲಿ : ಸಚಿವರಿಗೆ ಮನವಿ ಸಲ್ಲಿಸಿದ ನಿಯೋಗ

Date:

ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕರೇತರ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕೆಂದು ಆಗ್ರಹಿಸಿದ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿಯೋಗ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಬೀದರ್‌ ಜಿಲ್ಲೆಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ನಿಯೋಗ ಬೆಂಗಳೂರಿನಲ್ಲಿ ಸಚಿವ ಮಧು ಬಂಗಾರಪ್ಪ ಅವರ ನಿವಾಸದಲ್ಲಿ ಭೇಟಿಯಾಗಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ತೆರವಾದ ಶಿಕ್ಷಕರ ಹುದ್ದೆಗಳ ಭರ್ತಿ ಮಾಡಬೇಕೆಂದು ಆಗ್ರಹಿಸಿದರು.

ಅನೇಕ ವರ್ಷಗಳಿಂದ ರಾಜ್ಯದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಶೈಕ್ಷಣಿಗ ಪ್ರಗತಿಯಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳು ಪ್ರಮುಖ ಪಾತ್ರವಹಿಸಿವೆ. ಆದರೆ, ನಿವೃತ್ತಿ, ನಿಧನದಿಂದ ತೆರವಾದ ಹಿನ್ನೆಲೆ ಕಳೆದ ಹಲವು ವರ್ಷಗಳಿಂದ ಸಂಸ್ಥೆಗಳು ಶಿಕ್ಷಕರ ಕೊರತೆ ಎದುರಿಸುವಂತಾಗಿವೆ. ಇದರಿಂದ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ. ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಶಿಕ್ಷಕರ ಖಾಲಿ ಹುದ್ದೆ ಭರ್ತಿ ಮಾಡಬೇಕುʼ ಎಂದು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಕುಸಿತವಾಗುತ್ತಿದೆ. ಇದರಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಕೊರತೆಯೂ ಕಾರಣವಾಗಿದೆ. ಇದರಿಂದ ಫಲಿತಾಂಶದಲ್ಲಿ ವ್ಯತ್ಯಾಸ ಬರುತ್ತಿರುವುದು ಕಾಣಬಹುದು. ಮಕ್ಕಳ ಹಿತದೃಷ್ಟಿಯಿಂದ ಶೀಘ್ರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅನುದಾನಿತ ಶಿಕ್ಷಣ ಸಂಸ್ಥೆಗಳ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ನೀಗಿಸಬೇಕುʼ ಎಂದು ಒತ್ತಾಯಿಸಿದರು.

WhatsApp Image 2025 08 09 at 11.28.20 AM
ಸಮಾಜ ಕಲ್ಯಣಾ ಇಲಾಖೆ ಸಚಿವ ಎಸ್.ಸಿ.ಮಹಾದೇವಪ್ಪನವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸ್ವೀಕರಿಸಿ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ, ʼರಾಜ್ಯದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಹಲವು ವರ್ಷಗಳಿಂದ ಶಿಕ್ಷಕರ ಹುದ್ದೆ ಖಾಲಿ ಇರುವ ಬಗ್ಗೆ ಗಮನಕ್ಕಿದೆ. ಆ.11ರಿಂದ ನಡೆಯಲಿರುವ ಅಧಿವೇಶನದಲ್ಲಿ ಈ ವಿಷಯವನ್ನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸಿಕೊಡಲಾಗುವುದುʼ ಎಂದು ಭರವಸೆ ನೀಡಿದರು.

ಇದಕ್ಕೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್.ಸಿ.ಮಹಾದೇವಪ್ಪ ಅವರನ್ನು ಭೇಟಿಯಾದ ನಿಯೋಗ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಂದ ಶೈಕ್ಷಣಿಗ ಪ್ರಗತಿಗೆ ತೊಡಕಾಗುತ್ತಿದ್ದು, ಹುದ್ದೆಗಳ ಭರ್ತಿಗೆ ಮನವಿ ಮಾಡಿದರು. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅನುದಾನಿತ ಶಿಕ್ಷಣ ಸಂಸ್ಥೆಗಳು ಮೂಲಸೌಕರ್ಯ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಸ್ಪಂದಿಸಬೇಕೆಂದು ಬೇಡಿಕೆ ಮಂಡಿಸಿದರು.

ಇದನ್ನೂ ಓದಿ : ಬೀದರ್‌ | ಆದಿಜಾಂಬವ ಅಭಿವೃದ್ದಿ ನಿಗಮಕ್ಕೆ ₹100 ಕೋಟಿ ಅನುದಾನ ಕೊಡಿ

ನಿಯೋಗದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಮುಖ್ಯಸ್ಥರಾದ ನಂದಾದೀಪ ಬೊರಾಳೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಪದಾಧಿಕಾರಿಗಳಾದ ಕೆ.ಪುಂಡಲಿಕರಾವ್‌, ದಶರಥ ದೊಡ್ಡಿ, ಎಲ್.ಜಿ.ಗುಪ್ತಾ, ಕಾಶಿನಾಥ ಚಲವಾ, ತಿಪ್ಪಣ್ಣಾ ಶಿವಪುರೆ, ಡಿ.ವಿ.ಗುರು, ಬಾಬು ಟೈಗರ್, ಕಿರಣಕುಮಾರ ಭಾಟಸಾಂಗವಿ,ಕ್ರಾಂತಿ ಕಲವಾಡಿಕರ, ಸುಭಾಷ ಹುಲಸೂರೆ, ಮಲ್ಲಿಕಾರ್ಜುನ ಹಲಮಂಡೆ‌ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...