ಬೀದರ್‌ | ಆ್ಯಪ್‌ನಲ್ಲಿ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆ; ಸಮೀಕ್ಷೆಗೆ ತೆರಳಿದ ಸಿಬ್ಬಂದಿ ಹೈರಾಣು!

Date:

ರಾಜ್ಯ ಸರ್ಕಾರ ಸೆ.22 ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೀದರ್ ಜಿಲ್ಲೆಯಲ್ಲಿ ಮೂರು ದಿನಗಳಿಂದ ಹಲವು ತೊಡಕುಗಳು ಎದುರಾದವು. ಸಮೀಕ್ಷೆಯ ಆ್ಯಪ್ ಡೌನ್‌ಲೋಡ್ ವಿಳಂಬ, ಕೈ ಕೊಟ್ಟ ಸರ್ವರ್‌, ಬಾರದ ಒಟಿಪಿ, ಬ್ಲಾಕ್ ಬಗ್ಗೆ ಗೊಂದಲದಿಂದ ಗಣತಿದಾರರು ಮನೆ-ಮನೆಗೆ ತೆರಳಿ ಹೈರಾಣುಗುತ್ತಿದ್ದಾರೆ.

ಬೆಳಿಗ್ಗೆಯಿಂದಲೇ ಸಮೀಕ್ಷೆಗೆ ಸಿದ್ಧರಾಗಿದ್ದ ಗಣತಿದಾರರಿಗೆ ಸಮೀಕ್ಷೆಯ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಲು ಲಿಂಕ್ ಒತ್ತಿದಾಗ ಹಲವರ ಸ್ಮಾರ್ಟ್‌ಫೋನ್‌ನಲ್ಲಿ ಆ್ಯಪ್ ಸರಿಯಾಗಿ ಡೌನ್‌ಲೋಡ್ ಆಗಲೇ ಇಲ್ಲ. ಕೆಲ ಗಣತಿದಾರರ ಬಳಿ 5ಜಿ ಬದಲು 4ಜಿ ಫೋನ್ ಇರುವುದು ಹಾಗೂ ಸಮೀಕ್ಷೆಗೆ ತೆರಳಿದ್ದ ಸ್ಥಳದಲ್ಲಿ ನೆಟ್‌ವರ್ಕ್ ಸಿಗದಿರುವುದು ಸಹ ಆ್ಯಪ್ ಡೌನ್‌ಲೋಡ್ ವಿಳಂಬಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಗಣತಿದಾರರು ಮನೆಗಳಿಗೆ ತೆರಳಿ ಸಮೀಕ್ಷೆ ನಡೆಸುವಾಗ ಒಟಿಪಿ ಜನರೇಟ್ ಆಗುತ್ತಿಲ್ಲ. ಕೆಲಹೊತ್ತು ನಿಂತು ಸುಸ್ತಾದ ಸಿಬ್ಬಂದಿ ವಾಪಸ್‌ ಆಗುತ್ತಿದ್ದಾರೆ. ಈ ಬಗ್ಗೆ ಮೇಲ್ವಿಚಾರಕರಿಗೆ ದೂರು ನೀಡಲು ಕರೆ ಮಾಡಿದರೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಜಿಲ್ಲಾದ್ಯಂತ ಹಲವೆಡೆ ಇದೇ ಸಮಸ್ಯೆ ಎದುರಾಗಿದೆ ಎಂದು ಗಣತಿದಾರರು ʼಈದಿನ.ಕಾಮ್‌ʼ ಜೊತೆಗೆ ಮಾತನಾಡಿ ಗೋಳು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

3,382 ಸಿಬ್ಬಂದಿ ನಿಯೋಜನೆ :

ಬೀದರ್ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಒಟ್ಟು 3,69,557 ಕುಟುಂಬಗಳನ್ನು ಸಮೀಕ್ಷೆಗೆ ಗುರುತಿಸಿದ್ದು, ಒಟ್ಟು 3,382 ಗಣತಿದಾರರನ್ನು ನಿಯೋಜಿಸಲಾಗಿದೆ. ಸೆ.22 ರಿಂದ ಅ.7ರವರೆಗೆ ಸಮೀಕ್ಷೆ ನಡೆಯಲಿದ್ದು, ಒಟ್ಟು 60 ಪ್ರಶ್ನೆಗಳ ಮೂಲಕ ಕುಟುಂಬದ ಸಮಗ್ರ ಮಾಹಿತಿ ಪಡೆಯಲಾಗುತ್ತಿದೆ.

WhatsApp Image 2025 09 24 at 7.13.24 PM
ಆ್ಯಪ್ ಓಪನ್‌ ಆಗದಿರುವುದು, ಲಾಗಿನ್‌ ಎರರ್‌ ಸಮಸ್ಯೆ

ಮೂರು ದಿನಗಳ ಸಮೀಕ್ಷೆ ವಿವರ :

ಜಿಲ್ಲೆಯ ಎಂಟು ತಾಲ್ಲೂಕು ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಮೊದಲ ಎರಡು ದಿನ ಗಣತಿದಾರರು ತಮ್ಮ ಬ್ಲಾಕ್‌ ಗುರುತಿಸಿಕೊಂಡು ಹೋಗಲು ತಡವಾಯಿತು. ಸೆ.23 ಮತ್ತು ಸೆ.24ರಂದು ಸಮೀಕ್ಷೆಗೆ ತೆರಳಿದ ಸಿಬ್ಬಂದಿ ಆ್ಯಪ್ ಓಪನ್‌ ಆಗದಿರುವುದು, ಲಾಗಿನ್‌ ಎರರ್‌, ಒಟಿಪಿ ಬಾರದಿರುವುದು, ಸರ್ವರ್‌ ಸಮಸ್ಯೆ ಎದುರಿಸಿದರು. ಹೀಗಾಗಿ ನಿರೀಕ್ಷೆಯಂತೆ ಸಮೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂಬುದು ಗಣತಿದಾರರ ಅಭಿಪ್ರಾಯ.

ಸಮೀಕ್ಷೆ ಆರಂಭವಾಗಿ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ ಒಟ್ಟು ಸೆ.24ರ ಸಂಜೆಯವರೆಗೆ ಒಟ್ಟು 2,681 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಸೆ.22 ರಂದು 36, ಸೆ.23ರಂದು 207 ಹಾಗೂ (ಸೆ.24) ಮೂರನೇ ದಿನ ಒಟ್ಟು 1,739 ಗಣತಿದಾರರು ಕಾರ್ಯನಿರ್ವಹಿಸಿ 2,438 ಮನೆಗಳ ಸಮೀಕ್ಷೆ ನಡೆಸಿದ್ದಾರೆʼ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನೂ ಗೊತ್ತಾಗದ ʼಬ್ಲಾಕ್ʼ :

ಆ್ಯಪ್‌ನಲ್ಲಿ ತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕೆಲ ಸಮೀಕ್ಷೆಗೆ ತೆರಳಿದ ಗಣತಿದಾರರಿಗೆ ತಮ್ಮ ಬ್ಲಾಕ್ ಯಾವುದು ಯಾವ ಮನೆಗೆ ಹೋಗಿ ಸಮೀಕ್ಷೆ ಮಾಡಬೇಕೆಂದು ತೋಚದೆ ಪರದಾಡಿ ಮೇಲ್ವಿಚಾರಕರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ನೆಟ್‌ವರ್ಕ್ ಸಮಸ್ಯೆ ಇರುವ ಸ್ಥಳಗಳಲ್ಲಿ ಬಿಸಿಎಂ ಇಲಾಖೆಯಿಂದ ನೆಟ್‌ವರ್ಕ್ ಸಮಸ್ಯೆ ಸರಿಪಡಿಸಲು ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಸಿದ್ದರಾಮಯ್ಯ ʼನಗರ ನಕ್ಸಲ್ʼ ಎಂಬ ಖೂಬಾ ಹೇಳಿಕೆ : ʼಖಾಲಿ ಡಬ್ಬ ಹೆಚ್ಚು ಶಬ್ದ ಮಾಡುತ್ತೆʼ ಎಂದ ಈಶ್ವರ ಖಂಡ್ರೆ

ʼಜಿಲ್ಲಾದ್ಯಂತ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಮೊದಲ ದಿನ ಹೆಚ್ಚಿನ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಇದು ರಾಜ್ಯಾದ್ಯಂತ ಇರುವ ತಾಂತ್ರಿಕ ದೋಷ. ಟೆಕ್ನಿಕಲ್‌ ಟೀಮ್‌ ಎಲ್ಲವೂ ಸರಿಪಡಿಸುವ ಪ್ರಯತ್ನ ಮಾಡುತ್ತಿದ್ದು, ದಿನಕಳೆದಂತೆ ಸೂಸೂತ್ರವಾಗಿ ನಡೆಯುತ್ತದೆʼ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುನೀತಾ ಶಿವಾನಂದ ʼಈದಿನʼಕ್ಕೆ ತಿಳಿಸಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...