ಬೀದರ್‌ | ಕಲಾ ಗ್ರಾಮ ನಿರ್ಮಾಣಕ್ಕೆ ಶೀಘ್ರವೇ ಸ್ಥಳ ಅಂತಿಮ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

ಬೀದರ ಜಿಲ್ಲೆಯಲ್ಲಿ ಜಿಲ್ಲಾ ಕಲಾ ಗ್ರಾಮವನ್ನು ಸ್ಥಾಪಿಸಲು ಬೀದರ ವಿಶ್ವವಿದ್ಯಾಲಯ ಅಥವಾ ಹಳ್ಳದಕೇರಿ ಹತ್ತಿರ ಸ್ಥಳವನ್ನು ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕರಿ ಶಿಲ್ಪಾ ಶರ್ಮಾ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಲಾ ಗ್ರಾಮ ಸ್ಥಾಪಿಸಲು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ʼಜಿಲ್ಲೆಯಲ್ಲಿ ಸ್ಥಾಪಿಸಲು ಇಚ್ಛಿಸಿರುವ ಕಲಾ ಗ್ರಾಮದಲ್ಲಿ ಸಾಂಸ್ಕೃತಿಕ ಪ್ರವಾಸಿ ತಾಣ, ಜಾನಪದ ಕರಕುಶಲ, ಮಾರಾಟ ಮಳಿಗೆ, ಬಯಲು ರಂಗಮಂದಿರ, ಆರ್ಟ್ ಗ್ಯಾಲರಿ, ಅಡಿಟೋರಿಯಂ, ವಚನಕಾರರ ಮೂರ್ತಿಗಳು, ವಚನ ಸಿಂಚನ, ವಚನ ಸಾಹಿತ್ಯ ಕುರಿತು ನಾಮಫಲಕ, ಸಾರಾಂಶ ಕೋಶ, ಶಿಲ್ಪಾವನ, ಡಿಜಿಟಲ್ ಗ್ರಂಥಾಲಯ, ಬೀದರ ಜಿಲ್ಲೆಯ ವಿಶಿಷ್ಟ ಸಂಗೀತ ವಾದ್ಯ ಪರಿಕರಗಳು, ಮೂರ್ತಿ ಪ್ರದರ್ಶನಗಳು, ಜಾನಪದ ಶೈಲಿಯ ವಸ್ತು ಪ್ರದರ್ಶನ, ಸಂಗೀತ ಕಾರಂಜಿ, ಪ್ರಾಚೀನ ಕಾಲದ ನಾಣ್ಯಗಳು, ಕೃಷಿ ಉಪಕರಣಗಳು, ನಾಟಿವೈದ್ಯ ಮುಂತಾದ ವೈಶಿಷ್ಟತೆಗಳನ್ನು ಒಳಗೊಂಡಿರುತ್ತವೆʼ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಾ ಗ್ರಾಮ ಸ್ಥಾಪನೆಯ ಮುಖ್ಯ ಉದ್ದೇಶ ಜಿಲ್ಲೆಯಲ್ಲಿರುವ ಕಲೆ, ಸಾಹಿತ್ಯ, ನಾಟಕ, ರಂಗಭೂಮಿ ಮತ್ತು ಜಿಲ್ಲೆಯ ವೈಶಿಷ್ಟತೆಯನ್ನು ತಿಳಿಸುವುದಾಗಿದೆ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಇದು ಅನುಕೂಲವಾಗಲಿದೆʼ ಎಂದರು.

WhatsApp Image 2025 06 20 at 3.29.46 PM 1
ಸಭೆಯಲ್ಲಿ ಸಾಹಿತಿ, ಕಲಾವಿದರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಿದರು.

ಜಿಲ್ಲಾ ಕಲಾ ಗ್ರಾಮಗಳ ಸಮಿತಿಗೆ ಮೂರು ಜನ ಸಂಪನ್ಮೂಲ ವ್ಯಕ್ತಿಗಳ ನೇಮಕ ಮಾಡಿಕೊಳ್ಳಲಾಗುವುದು. ಆದ್ದರಿಂದ ಆಸಕ್ತರು ಸ್ವವಿವರವನ್ನು (Resume) 2025 ಜೂನ್‌ 23ರ ಸಂಜೆ 5:30 ಗಂಟೆ ಒಳಗಾಗಿ ಬೀದರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಕರ್ನಾಟಕ ಜಾನಪದ ಅಕಾಡೆಮಿಯ ಸಹ ಸದಸ್ಯ ವಿಜಯಕುಮಾರ ಸೋನಾರೆ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜುಕುಮಾರ ಅತಿವಾಳೆ, ಕರ್ನಾಟಕ ವನ್ಯ ಜೀವಿ ಮಂಡಳಿ ಸ್ಥಾಯಿ ಸಮಿತಿ ಸದಸ್ಯ ವಿನಯ ಮಾಳಗೆ ಹಾಗೂ ಪ್ರಮುಖರಾದ ಜಗನ್ನಾಥ ಹೆಬ್ಬಾಳೆ, ಮಾರುತಿ ಬೌದ್ದೆ, ಪಾರ್ವತಿ ಸೋನಾರೆ, ಮಹೇಶ ಪಾಟೀಲ, ಭಾರತಿ ವಸ್ತ್ರದ, ಮಹೇಶ ಗೋರನಾಳಕರ, ಅಂಬ್ರೀಶ ಮಲ್ಲೇಶಿ, ರೋಹನ್‌ಕುಮಾರ್‌ ಸೇರಿದಂತೆ ಕಲಾವಿದರು, ಸಾಹಿತಿಗಳು, ಸಂಘ-ಸಂಸ್ಥೆಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌| ʼಶಕ್ತಿ ಯೋಜನೆʼಗೆ 2 ವರ್ಷ: 8.29 ಕೋಟಿ ಮಹಿಳೆಯರು ಪ್ರಯಾಣ; ₹237.80 ಕೋಟಿ ಆದಾಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...