ಬೀದರ್‌ | ಫೆ.21ರಿಂದ ಮೂರು ದಿನ ಸಮಾನತಾ ಸಮಾವೇಶ, ಅನುಭವ ಮಂಟಪ ಸಂಸತ್ತು

Date:

ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ್‌ನಿಂದ ಫೆಬ್ರವರಿ 21, 22 ಮತ್ತು 23ರಂದು 7ನೇ ಅನುಭವ ಮಂಟಪ ಸಂಸತ್ತು ಕಾರ್ಯಕ್ರಮ ನಡೆಯಲಿದೆ. ಕೊನೆಯ ದಿನ ಸಮಾನತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬೆಲ್ದಾಳ ಸಿದ್ಧರಾಮ ಶರಣರು ತಿಳಿಸಿದರು.

ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ʼಸಮಾಜದಲ್ಲಿ ಇರುವ ಭೇದ-ಭಾವ ಗೊಂದಲ ಹೋಗಲಾಡಿಸಿ ಮಾನವರೆಲ್ಲರೂ ಒಂದೇ, ಜಾತಿ-ಲಿಂಗ-ವರ್ಣ-ವರ್ಗ ರಹಿತ ಸಮಾಜ ಕಟ್ಟುಬೇಕೆಂಬ ಉದ್ದೇಶದಿಂದ ಸಮಾನತಾ ಸಮಾವೇಶ ಹಾಗೂ ಅನುಭವ ಮಂಟಪ ಸಂಸತ್ತಿನ ಅಧಿವೇಶನ ಆಯೋಜಿಸಲಾಗಿದೆ ಎಂದರು.

ʼಫೆಬ್ರುವರಿ23ರಂದು ಬೆಳಿಗ್ಗೆ ಸಮಾನತಾ ಸಮಾವೇಶ ನಡೆಯುವುದು. ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಮಲಗಿ ಜಗದೀಶ್ವರಿ ಮಾತಾ, ಮನಗೂಳಿ ವಿರತೀಶಾನಂದ ಸ್ವಾಮೀಜಿ, ಭಂತೆ ಧಮ್ಮಾನಂದ ಅಣದೂರ, ಮೌಲಾನಾ ತಾಸಾದ್ದುಕ್ ನಾದ್ವಿ, ಧರ್ಮಾಧ್ಯಕ್ಷ ರಾಬರ್ಟ್ ಮೈಕೆಲ್ ಮಿರಾಂಡಾ, ಗ್ಯಾನಿ ಬಲಬೀರಸಿಂಗ್ ಸಾನಿಧ್ಯ ವಹಿಸುವರು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯಸಿಂಗ್, ಮಾಜಿ ಸಂಸದ ಭಗವಂತ ಖೂಬಾ ಸೇರಿದಂತೆ ವಿವಿಧ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳುವರು. ಸಮಾವೇಶದ ಗೌರವ ಅಧ್ಯಕ್ಷರನ್ನಾಗಿ ಉಸ್ತುವಾರಿ ಈಶ್ವರ ಖಂಡ್ರೆ ಹಾಗೂ ಶಾಸಕ ಶರಣು ಸಲಗರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ’ ಎಂದರು.

ಸಮಾವೇಶದಲ್ಲಿ ಪ್ರಸಕ್ತ ಸಾಲಿನ ʼಸೌಹಾರ್ದ ರತ್ನʼ ಪ್ರಶಸ್ತಿಯನ್ನು ಬೀದರ್‌ನ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಸಂಸ್ಥಾಪಕ ಅಧ್ಯಕ್ಷ ಅಬ್ದುಲ್ ಖದೀರ್ ಅವರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ : ಓರ್ವ ವ್ಯಕ್ತಿ ಸಾವು

ಕಾರ್ಯಕ್ರಮ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಸ್ವಾಮಿ, ಹೋರಾಟಗಾರ ಲಕ್ಷ್ಮಣ ದಸ್ತಿ, ಮನೋಹರ ಮೈಸೆ, ಪಿಂಟು ಕಾಂಬಳೆ ಮಾತನಾಡಿದರು. ಶಾಮರಾವ್ ಪ್ಯಾಟಿ, ಸಂಜೀವ ಗಾಯಕವಾಡ, ಎಂ.ಬಿ.ನಿಂಗಪ್ಪ, ದಿಗಂಬರ ಜಲ್ದೆ, ಸಿಕಂದರ ಶಿಂಧೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...