ಬೀದರ್‌ | ಅಂತರ್ಜಾತಿ ವಿವಾಹ ದಂಪತಿಗಳಿಗೆ ಸನ್ಮಾನ

Date:


ಮಹಾಡ್ ಚೌಡರ್ ಕೆರೆ ಪ್ರವೇಶ ವಿಜಯೋತ್ಸವ ಅಂಗವಾಗಿ ಸಮಸಮಾಜ ನಿರ್ಮಾಣದ ಕುರಿತು ವಿಚಾರ ಸಂಕಿರಣ ಹಾಗೂ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿಯಿಂದ ಆಯೋಜಿಸಲಾಯಿತು.

ಬೀದರ್‌ ನಗರದ ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಂತೆ ಧಮ್ಮಾನಂದ ಮಹಾಥೇರೊ ಸಾನಿಧ್ಯ ವಹಿಸಿದ್ದರು.

ವಿಶೇಷ ಉಪನ್ಯಾಸ ನೀಡಲು ಆಗಮಿಸಿದ ಮಹಾರಾಷ್ಟ್ರದ ಮಹಾಡ ಪಟ್ಟಣದ ವ ಪ್ರೊ.ವಿಶಾಲ ಖಾಂಭೆ ದಂಪತಿ ಚೌಡಾರ್ ಕೆರೆಯಿಂದ ತಂದ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಂಸ್ಥಾಪಕ ಪರಶುರಾಮ ನೀಲನಾಯಕ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಪ್ರತಿವರ್ಷ ನಾವೆಲ್ಲರೂ ಸಮಸಮಾಜ ನಿರ್ಮಾಣಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತೋರಿದ ಮಾರ್ಗದಲ್ಲಿ ಸಾಗೋಣʼ ಎಂದು ತಿಳಿಸಿದರು.

ಪ್ರೊ.ವಿಶಾಲ ಖಾಂಭೆ ಮಾತನಾಡಿ, ʼಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚೌಡರ್ ಕೆರೆಯ ಕುರಿತು ನಡೆಸಿದ ಸತ್ಯಾಗ್ರಹ ಮತ್ತು ಕುಡಿಯುವ ನೀರಿಗಾಗಿ ಅಂಬೇಡ್ಕರ್‌ ಅವರು ನಡೆಸಿದ ಹೋರಾಟದ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

ಕದಸಂಸ (ಭೀಮವಾದ) ಜಿಲ್ಲಾ ಸಂಚಾಲಕ ಸುನೀಲ ಸಂಗಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್‌ ಚಿಮಕೋಡೆ, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ ಮಾಳಗೆ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ, ಹುಮನಾಬಾದ್ ತಾಲೂಕಾ ಪಂಚಾಯತ ಸಹಾಯಕ ನಿರ್ದೇಶಕ ತಮ್ಮಣ್ಣಾ, ನಗರಸಭೆ ನಾಮನಿರ್ದೇಶಿತ ಸದಸ್ಯ ಸೂರ್ಯಕಾಂತ ಸಾಧುರೆ ಸೇರಿದಂತೆ ಪ್ರಮುಖರಾದ ಎಂ.ಎ. ಜಬ್ಬಾರ್, ಶಶಿಕಾಂತ ಪೊಲೀಸ್ ಪಾಟೀಲ ಚೌಳಿ, ಗೌತಮ ಚಿಂತಲಗೇರಾ, ಸಂಜೀವಕುಮಾರ ಮೇಟಿ, ಸೂರ್ಯಕಾಂತ ಸಾಧುರೆ, ಗೋವಿಂದ ಪೂಜಾರಿ, ಸಚಿನ ಕೌಠಾ, ಕೃಷ್ಣಾ ಹೊಸಮನಿ, ಚಂದ್ರಕಾಂತ ಶಾಹಬಾದಕರ್, ಪಾಂಡುರಂಗ ಬೆಲ್ದಾರ್, ಸುರೇಶ ಕಾಳೆ, ಸಿದ್ಧಾರ್ಥ ಭಾವಿಕಟ್ಟಿ, ಸಿದ್ರಾಮ ಶಿಂಧೆ, ರಾಜು ಸಾಗರ, ಸುಧಾಕರ ಶೇರಿಕಾರ, ಬಬ್ರುವಾಹನ, ಧನರಾಜ, ಸಂಜೀವಕುಮಾರ ಡಾಕುಳಗಿ ಇದ್ದರು.

ಈ ಸುದ್ದಿ ಓದಿದ್ದೀರಾ? ಐಪಿಎಲ್ ಕ್ರಿಕೆಟ್ | ಆಟಗಾರರು, ಅಭಿಮಾನಿಗಳು ಮತ್ತು ಸೋಷಿಯಲ್ ಮೀಡಿಯಾ ಎಂಬ ಕಿಂದರಿಜೋಗಿ

ಕಾರ್ಯಕ್ರಮದ ಆಯೋಜಕರಾದ ಕಿಶ ನ್ವಾಘಮಾರೆ ಭಾಲ್ಕಿ, ಶಿವಕುಮಾರ ಶಿಂಧೆ ಚಂದನಹಳ್ಳಿ, ತುಕಾರಾಮ ಮೇತ್ರೆ, ಪುಟ್ಟರಾಜ್ ದೀನೆ, ಅಂಕುಶ ಡಾಂಗೆ, ಸುಧಾಕರ ಸಂಗಮ, ಅಡ್ವಾನಿ ನಾಯಕ, ಶಿವರಾಜ ಮಹೇಶಗೊಂಡ ಉಪಸ್ಥಿತರಿದ್ದರು. ಸುನೀಲ ಸಂಗಮ ಸ್ವಾಗತಿಸಿದರು, ಅಂಬಾದಾಸ ಗಾಯಕವಾಡ್ ವಂದಿಸಿದರು, ಅಂಬಾದಾಸ ಸೋನಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...