ಬೀದರ್‌ | ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

Date:

ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.

ಮುಚಳಂಬ ಗ್ರಾಮದ ಅವಿನಾಶ್ ಶರಣಪ್ಪ ಮಚಕೂರೆ (16) ಹಾಗೂ ಭಾಲ್ಕಿ ತಾಲ್ಲೂಕಿನ ಕೋಟಗೇರಾ ಗ್ರಾಮದ ಭಾಗೇಶ ಕಮಾಲಾಕರ ಮಾನೆ (16) ಮೃತ ಬಾಲಕರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮೃತ ಇಬ್ಬರು ಬಾಲಕರು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿದ್ದರು. ರಜಾ ಇರುವುದರಿಂದ ಭಾಗೇಶ ಕಮಾಲಾಕರ ಮಾನೆ ಎಂಬ ಬಾಲಕ ರವಿವಾರ ಮುಚಳಂಬ ಗ್ರಾಮಕ್ಕೆ ಹೋಗಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರವಿವಾರ ಮಧ್ಯಾಹ್ನ ಐದು ಜನ ಸ್ನೇಹಿತರು ಗ್ರಾಮ ಸಮೀಪದ ಬಾವಿಯೊಂದರಲ್ಲಿ ಈಜಲು ಹೋಗಿದ್ದರು. ಈಜಲು ಬಾರದ ಓರ್ವ ಬಾಲಕ ನೀರಿಗೆ ಇಳಿದಿದ್ದಾನೆ, ಈಜು ಬಾರದಕ್ಕೆ ಬಾಲಕ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ಇನ್ನೊಬ್ಬ ಬಾಲಕ ಬಾವಿಗೆ ಜಿಗಿದಿದ್ದಾನೆ. ಈ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪಿಎಸ್‌ಐ ನಾಗೇಂದ್ರ, ಮಂಠಾಳ ಸಿಪಿಐ ಕೃಷ್ಣಕುಮಾರ್‌ ಪಾಟೀಲ್ ನೇತ್ರತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರ ನೆರವಿನಿಂದ ಮೃತದೇಹ ಹೊರತೆಗೆದು ಶವಾಗಾರಕ್ಕೆ ರವಾನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಜನಿವಾರ ಪ್ರಕರಣ: ಸುಚಿವೃತ್‌ಗೆ ನನ್ನ ಕಾಲೇಜಿನಲ್ಲಿ ಉಚಿತ ಸೀಟ್ ಕೊಡುವೆ; ಈಶ್ವರ ಖಂಡ್ರೆ

ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಪ್ರಕರಣ ಇನ್ನೂ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...