ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

Date:

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಯ ವಿಕೋಪದಿಂದ ಮನೆ ಹಾನಿ, ಪ್ರಾಣಿ ಹಾನಿ, ಬೆಳೆ ಹಾನಿ, ಸೇತುವೆ ಮತ್ತು ಕೆರೆಕಟ್ಟೆಗಳು ಹಾನಿಗೀಡಾಗಿದ್ದು, ತ್ವರಿತವಾಗಿ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

WhatsApp Image 2025 08 26 at 8.15.49 PM

ಸಚಿವದ್ವಯರ ನೇತ್ರತ್ವದಲ್ಲಿ ಮಂಗಳವಾರ ಬೆಳಿಗ್ಗೆ ಮೊದಲು ಕಮಲನಗರ ತಾಲೂಕಿನ ಅಕನಾಪೂರನ ಎಂಐ ಟ್ಯಾಂಕ್ ಕೆರೆ ವೀಕ್ಷಿಸಿ, ರೈತರ ಸಮಸ್ಯೆ ಆಲಿಸಿದರು. ಮುತಖೇಡನಲ್ಲಿ ಬೆಳೆ ಹಾನಿ, ನಂದಿ ಬೀಜಲಗಾಂವ ಸಮೀಪದ ಸೇತುವೆ ಮತ್ತು ಮನೆ ಹಾನಿ ವೀಕ್ಷಿಸಿದರು. ಬಳಿಕ ಔರಾದ ತಾಲೂಕಿನ ಬಾವಲಗಾಂವ, ಹಂಗರಗಾ, ಸಾವರಗಾಂವ, ಬೋಂತಿ ಗಾಮಾ ನಾಯಕ ತಾಂಡಾಗಳಲ್ಲಿ ಹಾನಿಯಾದ ಬೆಳೆ, ರಸ್ತೆ, ಮನೆ, ಸೇತುವೆ ಮುಂತಾದ ಕಡೆ ಭೇಟಿ ನೀಡಿ ಪರಿಶೀಲಿಸಿ ಗ್ರಾಮಸ್ಥರಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಮಲನಗರ ಮತ್ತು ಔರಾದ ತಾಲೂಕಿನಲ್ಲಿ ಒಂದೇ ದಿನ 300 ಎಂಎಂ ಮಳೆಯಾಗಿದ್ದು, ಇದು ಅತ್ಯಂತ ದಾಖಲೆ ಪ್ರಮಾಣ ಮಳೆಯಾಗಿದೆ. ಇದರಿಂದಾಗಿ ಅನೇಕ ರೀತಿಯ ಜಾನುವಾರು, ಮನೆ ಸೇರಿದಂತೆ ರಸ್ತೆ, ಕೆರೆ, ಕಟ್ಟೆಗಳಿಗೆ ಹಾನಿಯಾಗಿದೆ. ಇವುಗಳನ್ನು ತಕ್ಷಣ ಪರಿಹರಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ʼಅತಿಯಾದ ಮಳೆಯಿಂದಾಗಿ ರೈತರ ಬೆಳೆಗಳಾದ ಹೆಸರು ಉದ್ದು, ಸೋಯಾ, ತೊಗರಿ ಹೆಚ್ಚು ಹಾನಿಯಾಗಿವೆ. ಆದರೆ ರೈತರು ಯಾವುದೇ ಆತಂಕ ಪಡಬೇಕಾಗಿಲ್ಲ, ತ್ವರಿತವಾಗಿ ಪರಿಹಾರ ನೀಡಲಾಗುವುದು. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಡಿಯಲ್ಲಿ ಪ್ರತಿ ಹೆಕ್ಟೇರ್ ನಿರಾವರಿ ಭೂಮಿಗೆ 18 ಸಾವಿರ ಹಾಗೂ ಮಳೆಯಾಶ್ರಿತ ಬೆಳೆ 8,500 ಪರಿಹಾರ ನೀಡಲಾಗುವುದು. ಸಮೀಕ್ಷೆಗೆ ಈಗಾಗಲೇ ಆದೇಶ ನೀಡಲಾಗಿದ್ದು, ಗ್ರಾಮ ಸಭೆ ಮೂಲಕ ಜನರ ಸಮಸ್ಯೆಗಳನ್ನು ಕ್ರೋಢೀಕರಿಸಿ ಪರಿಹರಿಸಲು ತಿಳಿಸಲಾಗಿದೆ. ಮುಖ್ಯಮಂತ್ರಿ ಅವರಿಗೂ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಯ ಬಗ್ಗೆ ತಿಳಿಸಲಾಗಿದೆʼ ಎಂದರು.

WhatsApp Image 2025 08 26 at 8.07.12 PM

ಔರಾದ್‌ ತಾಲೂಕಿನ ಬಾವಲಗಾಂವ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಚಿವರು ಮಕ್ಕಳೊಂದಿಗೆ ಸಂವಾದ ನಡೆಸಿ, ಶಾಲೆಯಲ್ಲಿ ಕನ್ನಡ ಕಲಿಕೆ ಹೆಚ್ಚಾಗಬೇಕು ಎಂದು ಮುಖ್ಯ ಶಿಕ್ಷಕರಿಗೆ ತಿಳಿಸಿದರು.

ಇದನ್ನೂ ಓದಿ : ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ, ಬೀದರ ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಕಮಲನಗರ ತಹಸೀಲ್ದಾರ್‌ ಅಮಿತ ಕುಲಕರ್ಣಿ, ಔರಾದ ‌ ತಹಸೀಲ್ದಾರ್‌ ಮಹೇಶ ಪಾಟೀಲ್, ಮುಖಂಡ ಭೀಮಸೇನರಾವ್‌ ಸಿಂಧೆ ಸೇರಿದಂತೆ ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...