ಬೀದರ್‌ | ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ : ಇಬ್ಬರ ಸಾವು, ಮೂವರಿಗೆ ಗಾಯ

Date:

ಬೀದರ್ ತಾಲೂಕಿನ ಬೆನಕನಳ್ಳಿ ಹತ್ತಿರ ಬೀದರ-ವಡಗಾಂವ(ದೇ) ರಸ್ತೆಯಲ್ಲಿ ಶನಿವಾರ ಸಂಜೆ ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ಭಾಲ್ಕಿ ತಾಲೂಕಿನ ಜೋಳದಾಪಕಾ ಗ್ರಾಮದ ಮಲ್ಲಿಕಾರ್ಜುನ ಚಂದ್ರಕಾಂತ (40), ಹಾಗೂ ಔರಾದ್‌ ತಾಲೂಕಿನ ಬೆಲ್ದಾಳ ಗ್ರಾಮದ ಪವನ ಚಂದ್ರಪ್ಪ ವಗ್ಗೆ (30) ಮೃತರು ಎಂದು ಗುರುತಿಸಲಾಗಿದೆ. ಮೃತ ಮಲ್ಲಿಕಾರ್ಜುನ ಅವರ ಪತ್ನಿ, ಅತ್ತೆ ಹಾಗೂ ಮಗು ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬ್ರಿಮ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಪವನ ವಗ್ಗೆ ಅವರು ಸ್ನೇಹಿತನೊಂದಿಗೆ ಬೈಕ್‌ ಮೇಲೆ ಗ್ರಾಮದಿಂದ ಬೀದರ್‌ ಕಡೆ ತೆರಳುತ್ತಿದ್ದರು. ಮೃತ ಮಲ್ಲಿಕಾರ್ಜುನ ಅವರು ಬೈಕ್‌ ಕುಟುಂಬದೊಂದಿಗೆ ಬೀದರ್‌ದಿಂದ ಔರಾದ್‌ ತಾಲೂಕಿನ ಖಾನಾಪುರ ಗ್ರಾಮದ ಕಡೆ ಹೋಗುತ್ತಿದ್ದರು. ಈ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆ ಮಾಡಿ : ಶಾಸಕ ಶೈಲೇಂದ್ರ ಬೆಲ್ದಾಳೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...