ಬೀದರ್‌ | ಅನೈರ್ಮಲ್ಯ; ಸಾವಳಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ

Date:

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಾವಳಿ ಗ್ರಾಮದಲ್ಲಿ ಅನೈರ್ಮಲ್ಯದ ಪರಿಣಾಮ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ.

“ಕಾಲಿಟ್ಟ ಕಡೆ ಗಲೀಜು, ಅಸ್ವಚ್ಛತೆ, ಎಲ್ಲೆಡೆ ಹರಿಯುತ್ತಿರುವ ದುರ್ವಾಸನೆಯುಕ್ತ ಮಲಿನ ನೀರಿನಿಂದಾಗಿ ಮಿತಿಮೀರಿದ ಸೊಳ್ಳೆಗಳ ಕಾಟ ಆರಂಭವಾಗಿದೆ. ನಿತ್ಯ ಅಪಾಯಕಾರಿ ಸ್ಥಿತಿಯಲ್ಲಿ ಇಲ್ಲಿನ ನಿವಾಸಿಗಳು ಓಡಾಟ ನಡೆಸುವಂತಾಗಿದೆ. ಇದೆಲ್ಲಾ ಗೊತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ” ಎಂದು ಸಾವಳಿ ಗ್ರಾಮಸ್ಥರು ಆರೋಪಿಸಿದರು.

ಈ ದಿನ.ಕಾಮ್‌ನೊಂದಿಗೆ ಮಾತನಾಡಿದ ಗ್ರಾಮಸ್ಥರು “ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಕೂಡಾ ಆಮೆಗತಿಯಲ್ಲಿ ನಡೆಯುತ್ತಿದ್ದು, ರಸ್ತೆಯ ಮಧ್ಯಭಾಗದಲ್ಲಿ ಅಗೆದಿದ್ದಾರೆ. ಇದರಲ್ಲಿ ಕೊಳಚೆ ನೀರು, ಮಳೆನೀರು ಸಂಗ್ರಹವಾಗಿ ರಸ್ತೆಯ ತುಂಬೆಲ್ಲಾ ಹಾಗೂ ಬಡಾವಣೆಗಳಲ್ಲಿ ದುರ್ವಾಸನೆ ಬೀರುತ್ತಿದೆ. ಗ್ರಾಮದಲ್ಲಿ ಡೆಂಘೀ, ಮಲೇರಿಯಾ, ಚಿಕುಂಗುನ್ಯಾ ಸೇರಿದಂತೆ ನಾನಾ ರೀತಿಯ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು ವಿವಿ 17ನೇ ಘಟಿಕೋತ್ಸವ; 11,988 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

“ಗ್ರಾಮದಲ್ಲಿ ಈಗಾಗಲೇ ಹಲವರು ನಾನಾ ರೋಗಗಳಿಂದ ಬಳಲುತ್ತಿದ್ದಾರೆ. ಆದರೆ ಯಾವೊಬ್ಬ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ. ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಮುಂದಾಗಬೇಕು” ಎಂದು ಸಾವಳಿ ಗ್ರಾಮಸ್ಥರು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...