ಬೀದರ್‌ | ಅಸಂಘಟಿತ ಕಾರ್ಮಿಕರು ರಾಜ್ಯದ ದೊಡ್ಡ ಆಸ್ತಿ : ಸಚಿವ ಸಂತೋಷ ಲಾಡ್

Date:

ರಾಜ್ಯದ ದುಡಿಯುವ ಜನರಲ್ಲಿ ಶೇ 85ರಷ್ಟು ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವ ಅಸಂಘಟಿತ ವಲಯದ ಕಾರ್ಮಿಕರು ರಾಜ್ಯದ ದೊಡ್ಡ ಆಸ್ತಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.

ಮಂಗಳವಾರ ನಗರದ ಘಾಳೆ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಸಾರಿಗೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಬೀದರ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼರಾಜ್ಯದ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ ಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 35 ಲಕ್ಷ ಕಾರ್ಮಿಕರು ಒಳಗೊಂಡಿದ್ದಾರೆ. ಅವರಿಗೆ ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೀದರ ಜಿಲ್ಲೆಯಲ್ಲಿ 59,493 ಕಾರ್ಮಿಕರು ನೋಂದಾಯಿಸಿಲಾಗಿದ್ದು ಅವರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದ್ದು, ಅಪಘಾತ ಸಂಭವಿಸಿದಲ್ಲಿ 1 ಲಕ್ಷ ಪರಿಹಾರ ನೀಡಲಾಗುವುದು. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 4 ಲಕ್ಷದವರೆಗೆ ವಿಮಾ ಸೌಲಭ್ಯ ನೀಡಲಾಗುವುದು. ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಉದ್ಯೋಗ ನೀಡಿದಲ್ಲಿ‌ ಶೇ 50ರಷ್ಟು ವೇತನ ಕಾರ್ಮಿಕ ಇಲಾಖೆ ಕಡೆಯಿಂದ ನೀಡಲಾಗುವುದುʼ ಎಂದರು.

ಮೋಟಾರು ಸಾರಿಗೆ ಹಾಗೂ ಸಂಬಂಧಿತ ಕಾರ್ಮಿಕರಿಗೆ ಮತ್ತು ಸಿನಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸೌಲಭ್ಯಗಳನ್ನು ಒದಗಿಸಲಾಗಿದೆ. ಬೀದರ ಜಿಲ್ಲೆಯಲ್ಲಿ ಯಾವ ರೀತಿ ಸಂಸ್ಥೆ ಮೂಲಕ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಮಿಕರನ್ನು ನೇಮಿಸಲಾಗುತ್ತದಯೋ ಅದೇ ರೀತಿಯಲ್ಲಿ ಇಡೀ ಕರ್ನಾಟಕದಲ್ಲಿ ಆಗುವ ಹಾಗೆ ಮಾಡುವುದಾಗಿ ಹಾಗೂ ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ) ಅಧಿನಿಯಮ ರೂಪಿಸುವ ಪ್ರಕ್ರಿಯೆ ಜಾರಿಯಲ್ಲಿದೆʼ ಎಂದು ತಿಳಿಸಿದರು.

WhatsApp Image 2025 10 14 at 7.57.57 PM

ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಮಾತನಾಡಿ, ʼಸಂತೋಷ ಲಾಡ್ ಅವರು ಕಾರ್ಮಿಕ ಸಚಿವರಾದ ಮೇಲೆ ಶ್ರಮಿಕರಿಗಾಗಿ ಅನೇಕ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾರ್ಮಿಕರ ಬಾಳಿಗೆ ಬೆಳಕಾಗಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ ನಿರ್ಮಾಣ ಮಾಡುವ ಕಾರ್ಯ ಮಾಡುತ್ತಿದ್ದಾರೆ. ಈಗಾಗಲೇ ವಸತಿ ಶಾಲೆಗೆ ಖಾನಾಪೂರದಲ್ಲಿ ಸ್ಥಳ ಸೂಚಿಸಲಾಗಿದೆʼ ಎಂದರು.

ಪೌರಾಡಳಿತ ಮತ್ತು ಹಜ್ ಸಚಿಚ ರಹೀಂ ಖಾನ್ ಮಾತನಾಡಿ, ʼಸಂತೋಷ ಲಾಡ್ ಅವರು ಬಡವರ, ದಲಿತರ, ಕಾರ್ಮಿಕರ ಬಗ್ಗೆ ಅಪಾರವಾದ ಪ್ರೀತಿ ಉಳ್ಳವರು. ಸಾಮಾಜಿಕ ನ್ಯಾಯ, ಸಮ ಸಮಾಜದ ನಿರ್ಮಾಣ ಮಾಡಲು ಹಾಗೂ ಕಾರ್ಮಿಕರ ಕಲ್ಯಾಣಕ್ಕಾಗಿ ಸದಾ ಶ್ರಮಿಸುತ್ತಿದ್ದಾರೆʼ ಎಂದರು.

ಇದೇ ಸಮಯದಲ್ಲಿ ಆಶಾದೀಪ ಯೋಜನೆಯಡಿ ವೇತನ ಮರುಪಾವತಿ ಚೆಕ್ ವಿತರಣೆ, ಖಾಸಗಿ ವಾಹನ ಚಾಲಕರ ಅಪಘಾತ ಮರಣ ಪರಿಹಾರ ಧನ ಸಹಾಯ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.

ಇದನ್ನೂ ಓದಿ : ನಿಮ್ಮ ಮಕ್ಕಳು ಆರ್‌ಎಸ್‌ಎಸ್‌ಗೆ ಹೋಗ್ತಾರಾ? ಎಚ್ಚರ, ಈ ಕೃತಿಗಳು ಹೇಳುವ ಸತ್ಯಗಳೇ ಬೇರೆ!

ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಅಧ್ಯಕ್ಷ ಬಾಬು ಹೊನ್ನನಾಯ್ಕ, ಮಹಾನಗರ ಪಾಲಿಕೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬಾಬು ಜಗಜೀವನರಾಂ ನಿಗಮದ ಅಧ್ಯಕ್ಷ ನಾಗರಾಜ ಮುಂಡರಗಿ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮೊಹಮದ್ ಮೋಸಿನ್, ಕಾರ್ಮಿಕ ಆಯುಕ್ತ ಹಾಗೂ ರಾಜ್ಯ ವಿಮಾ ಯೋಜನಾ ವೈದ್ಯಕೀಯ ಆಯುಕ್ತರು ಎಚ್.ಎನ್.ಗೋಪಾಲಕೃಷ್ಣ, ಸಾರಿಗೆ ಇಲಾಖೆಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ್ ಎಂ, ಜಂಟಿ ಕಾರ್ಮಿಕ ಆಯುಕ್ತ ಹಾಗೂ ಜಂಟಿ ಕಾರ್ಯದರ್ಶಿ ಎಸ್.ಬಿ.ರವಿಕುಮಾರ, ಕಲಬುರಗಿ ಪ್ರಾದೇಶಿಕ ಸಹಾಯಕ ಆಯುಕ್ತ ಮಹಮ್ಮದ್ ಬಶೀರ ಅನ್ಸಾರಿ ಸೇರಿದಂತೆ ಇತರೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...