ಬೀದರ್ | ವಾಹನ ಕಳ್ಳ ಬಂಧನ; ₹8.75 ಲಕ್ಷ ಮೌಲ್ಯದ ವಾಹನಗಳು ಜಪ್ತಿ

Date:

ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ನಗದು ಸೇರಿ 8.75 ಲಕ್ಷ ರೂ ಮೊತ್ತದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಬೀದರ್‌ ಜಿಲ್ಲಾ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಹೇಳಿದರು.

ಜಿಲ್ಲೆಯ ಭಾಲ್ಕಿ ಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. “ಜುಲೈ 6 ಮತ್ತು 7ರ ಮಧ್ಯದಲ್ಲಿ ಟ್ರ‍್ಯಾಕ್ಟರ್ ಕಳವಾಗಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತಂಡ ರಚಿಸಿ ಆರೋಪಿಯನ್ನು ಬಂಧಿಸಿ ಕೂಲಕುಂಶವಾಗಿ ವಿಚಾರಣೆ ನಡೆಸಿದಾಗ ಆರೋಪಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ 2 ಮತ್ತು ಧನ್ನೂರು ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿರುವುದು ಕಂಡುಬಂದಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿಯಿಂದ ಅಂದಾಜು 4 ಲಕ್ಷ ರೂ ಮೊತ್ತದ ಗೂಡ್ಸ್ ವಾಹನ, 2 ಲಕ್ಷ ರೂ ಮೊತ್ತದ ಟ್ರ‍್ಯಾಕ್ಟರ್ ಮತ್ತು ₹2.75 ಲಕ್ಷ ನಗದು ಸೇರಿದಂತೆ ಒಟ್ಟು ₹8.75 ಲಕ್ಷ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡವನ್ನು ಅಭಿನಂದಿಸಲಾಗುವುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿವೈಎಸ್‌ಪಿ ಪೃಥ್ವಿ ಶಂಕರ್, ಪಿಎಸ್‌ಐ ತಿಮ್ಮಯ್ಯ, ವಿಶ್ವರಾಧ್ಯ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...