ಬೀದರ್‌ | ವಚನ ಕಂಠಪಾಠ ಸ್ಪರ್ಧೆ : 816 ವಚನ ಹೇಳಿದ ವಿದ್ಯಾರ್ಥಿ ಶಿವರಾಜ ಪ್ರಥಮ ಸ್ಥಾನ

Date:

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಿಮಿತ್ಯ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವಣ್ಣನವರ ವಚನ ಕಂಠಪಾಠ ಸ್ಪರ್ಧೆ ಫಲಿತಾಂಶವನ್ನು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹಾಗೂ ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರ ಸಾನಿಧ್ಯದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಭಾಗವಹಿಸಿದ ಬಾಗಲಕೋಟ ಜಿಲ್ಲೆಯ ಸವದಿ ಗ್ರಾಮದ ಭಾಲ್ಕಿ ಹಿರೇಮಠ ಸಂಸ್ಥಾನದ ಪ್ರಸಾದ ನಿಲಯದ ವಿದ್ಯಾರ್ಥಿ ಶಿವರಾಜ ಪಾಟೀಲ 816 ವಚನಗಳು ಹೇಳುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ಬೀದರ ಜಿಲ್ಲೆಯ ಹುಮನಾಬಾದದ ಡಾ.ಕಲ್ಯಾಣಮ್ಮ ರಾಮೇಶಚಂದ್ರ ಮಟ್ಟಿ 505 ವಚನಗಳು ಹೇಳಿ ಎರಡನೇ ಸ್ಥಾನ ಗಳಿಸಿದ್ದಾರೆ. ಬೀದರನ ಬಸವಗಿರಿಯ ಚೆನ್ನಬಸವಣ್ಣ 433 ವಚನಗಳು ಹೇಳಿ ತೃತೀಯ ಸ್ಥಾನವನ್ನು ಪಡೆದಿಕೊಂಡಿದ್ದಾರೆ.

ಬೆಂಗಳೂರು ಬೆಳಗಾವಿ, ಧಾರವಾಡ, ಬಾಗಲಕೋಟೆ, ರಾಯಚೂರು, ಕಲಬುರಗಿ, ಬೀದರ ಮುಂತಾದ ಜಿಲ್ಲೆಗಳಿಂದ 108 ಸ್ಪರ್ಧಾಳುಗಳು ಆಗಮಿಸಿದ್ದರು. ಇವರಲ್ಲಿ 20 ವಿದ್ಯಾರ್ಥಿಗಳು 200ಕ್ಕಿಂತಲೂ ಹೆಚ್ಚಿನ ವಚನಗಳನ್ನು, 35 ವಿದ್ಯಾರ್ಥಿಗಳು ನೂರಕ್ಕಿಂತಲೂ ಹೆಚ್ಚಿನ ವಚನಗಳನ್ನು ಹೇಳುವ ಮೂಲಕ ಪ್ರೇಕ್ಷಕರಲ್ಲಿ ಬೆರಗು ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ವಚನ ಪುಸ್ತಕ ನೀಡಲಾಯಿತು. ವಿಜೇತರಾದವರಿಗೆ 2024ರ ನ. 23, 24 ರಂದು ಬಸವಕಲ್ಯಾಣದಲ್ಲಿ ನಡೆಯುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಅನುಭವ ಮಂಟಪದ ಕಾರ್ಯದರ್ಶಿ ಡಾ.ಎಸ್.ಬಿ. ದುರ್ಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನ. 22ರಂದು ಜಯ ಕರ್ನಾಟಕ ಜನಪರ ವೇದಿಕೆಯಿಂದ ‘ಕನ್ನಡ ಜಾಗೃತಿ’ ಪ್ರಶಸ್ತಿ ಪ್ರದಾನ

ಪ್ರಥಮ ಬಹುಮಾನ 20 ಸಾವಿರ, ದ್ವಿತೀಯ ಬಹುಮಾನ 15 ಸಾವಿರ, ತೃತೀಯ ಬಹುಮಾನ 10 ಸಾವಿರ ಶರಣೆ ಸುಶೀಲಾದೇವಿ ಬಿ.ವಿ. ಪಟೇಲ್ ಚಾರಿಟೇಬಲ್ ಟ್ರಸ್ಟ್ ಬಸವಲ್ಯಾಣ ಇವರ ದಾಸೋಹತ್ವದಲ್ಲಿ ನೀಡಲಾಗುವುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...