ಬೀದರ್‌ | ಪಾಪನಾಶ ಕೆರೆಗೆ ಕಲುಷಿತ ನೀರು : ಮೀನುಗಳ ಸಾವು‌

Date:

ಬೀದರ್‌ ನಗರದ ಹೃದಯ ಭಾಗದಲ್ಲಿರುವ ಪಾಪನಾಶಿನಿ ಶಿವಲಿಂಗ ದೇವಸ್ಥಾನದ ಬಳಿಯ ಪಾಪನಾಶ ಕೆರೆಗೆ ಕಲುಷಿತ ನೀರು ಹರಿದು ಅಪಾರ ಸಂಖ್ಯೆಯ ಮೀನುಗಳು ಸಾವನ್ನಪ್ಪಿವೆ.

‘ಕೆರೆಯಲ್ಲಿ ಮೀನುಗಳ ಮಾರಣ ಹೋಮಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ. ಕೆರೆ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಗಾಗಿ ಕೈಗೊಂಡಿದ್ದ ಕಾಮಗಾರಿ ವಿಫಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ರೋಹನ್‌ ಕುಮಾರ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ʼವಿಷಕಾರಿ ನೀರು ಕೆರೆಗೆ ಹರಿದು ಮೀನುಗಳು ಸತ್ತಿವೆ. ಇದರಿಂದ ಕೆರೆ ಸುತ್ತಲೂ ದುರ್ವಾವಾಸನೆ ಬರುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕೆರೆ ಸಂರಕ್ಷಣೆಗೆ ಮುಂದಾಗಬೇಕುʼ ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 19 at 12.15.10 PM
ಕೆರೆ ದಡದಲ್ಲಿ ಸತ್ತು ಬಿದ್ದಿರುವ ಮೀನುಗಳು

ʼಐತಿಹಾಸಿಕ ಪಾಪನಾಶ ಕೆರೆಗೆ ಸುತ್ತಮುತ್ತಲಿನ ಚರಂಡಿ ನೀರು ಸೇರಿದಂತೆ ಪೂಜೆಗೆ ಬಳಸಿದ ಹೂ, ಹಣ್ಣು, ಬಾಳೆದಿಂಡು, ಕಬ್ಬು ಹಾಗೂ ಅಲಂಕಾರಿಕ ವಸ್ತುಗಳನ್ನು ಕೆರೆಯಂಗಳದಲ್ಲಿ ಚೆಲ್ಲಲಾಗಿದೆ. ಕೆರೆ ತುಂಬೆಲ್ಲಾ ತ್ಯಾಜ್ಯದ ರಾಶಿ ಹರಡಿಕೊಂಡು ಎಲ್ಲೆಡೆ ದುರ್ಗಂಧಕ್ಕೆ ಕಾರಣವಾಗಿ ಕೆರೆಯಲ್ಲಿನ ಮೀನುಗಳು ಸಾಯುತ್ತಿವೆ. ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ನಿರ್ದೇಶನ ಪಾಲನೆಯಾಗುತ್ತಿಲ್ಲʼ ಎಂದು ರೋಹನ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕೆಲ ತಿಂಗಳ ಹಿಂದೆ ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಿಂದ ₹2 ಕೋಟಿ ಅನುದಾನದಲ್ಲಿ ಕೆರೆ ಅಭಿವೃದ್ಧಿಪಡಿಸಲಾಗಿದೆ. ಕೆರೆಯಂಚಿನಲ್ಲಿ ಗ್ರಿಲ್‌, ವಿದ್ಯುತ್‌ ದೀಪ ಅಳವಡಿಸಿದ್ದಾರೆ. ಆದರೆ ಸೂಕ್ತ ನಿರ್ವಹಣೆ ಕೊರತೆಯಿಂದ ಜನರು ಘನ ತ್ಯಾಜ್ಯ ಕೆರೆಗೆ ಸುರಿಯುತ್ತಿದ್ದಾರೆ. ಈ ಹಿಂದೆ ಕೆರೆ ಸುತ್ತಲೂ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಗಿಡ, ಮರಗಳು ಒಣಗಿ ನಿಂತಿರುವುದು ಪರಿಸರ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ.

WhatsApp Image 2025 02 19 at 12.14.56 PM
ಪಾಪನಾಶ ಕೆರೆ ದಡಲ್ಲಿರುವ ಗಿಡಗಳು ಒಣಗುತ್ತಿರುವುದು.

ʼಬೀದರ್ ನಗರಕ್ಕೆ ಅತೀ ಮುಖ್ಯ ನೀರಿನ ಮೂಲವಾದ ಪಾಪನಾಶ ಕೆರೆ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಕಲುಷಿತಗೊಂಡಿರುವುದು ನೋವಿನ ಸಂಗತಿ. ಕೆರೆಯ ನೀರು ಖಾಲಿ ಆಗುತ್ತಿರುವ ಬಗ್ಗೆ ತಿಂಗಳ ಹಿಂದೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೂ ಕೆರೆ ನೀರಿನ ಹೊರ ಹರಿವು ನಿಲ್ಲಿಸುವ ಕಾರ್ಯ ಮಾಡಲಿಲ್ಲ. ಇದೀಗ ಕೆರೆಯಲ್ಲಿ ಮೀನುಗಳ ಸಾವು ನಡೆದಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆʼ ಎಂದು ಕರ್ನಾಟಕ ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯ ವಿನಯ್ ಕುಮಾರ್ ಮಾಳಗೆ ತಿಳಿಸಿದ್ದಾರೆ.

ʼಕೂಡಲೇ ಮೀನುಗಳ ಸಾವಿನ ಬಗ್ಗೆ ವಿವರವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ತಕ್ಷಣ ಆದೇಶ ಹೊರಡಿಸಲು ಕೋರುವೆ ಎಂದು ಈದಿನ.ಕಾಮ್‌ ಗೆ ತಿಳಿಸಿದ್ದಾರೆ.

ʼಪಾಪನಾಶ ಕೆರೆಯಲ್ಲಿ ವಿಷಪೂರಿತ ನೀರು ಸೇರಿದ ಕಾರಣಕ್ಕೆ ಮೀನುಗಳು ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕೆರೆ ನಿರ್ವಹಣೆ ನಗರಸಭೆ ವ್ಯಾಪ್ತಿಗೆ ಒಳಪಡುತ್ತದೆ. ಈ ಕುರಿತು ನಾನು ಕೆರೆಗೆ ಭೇಟಿ ನೀಡಿ ಪರಿಶೀಲಿಸುತ್ತೇನೆʼ ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಆಯುಕ್ತ ಜಯಗೋಪಾಲ್ ಈದಿನ.ಕಾಮ್ ಗೆ ತಿಳಿಸಿದ್ದಾರೆ.

WhatsApp Image 2025 02 19 at 12.21.30 PM
ಪಾಪನಾಶ ಕೆರೆಯ ಹೊಟ್ಟೆಗೆ ಸೇರುತ್ತಿರುವ ತ್ಯಾಜ್ಯನೀರು

ಈ ಸಂಬಂಧ ಬೀದರ್ ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ್‌ ಅವರನ್ನು ʼಈದಿನ.ಕಾಮ್ʼ ಸಂಪರ್ಕಿಸಿದಾಗ, ಅವರು ಕರೆ ಸ್ವೀಕರಿಸಲಿಲ್ಲ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...