ಬೀದರ್ | ವಿಸ್ಡಮ್ ಕಾಲೇಜು ₹1 ಕೋಟಿ ವಿದ್ಯಾರ್ಥಿ ವೇತನ ಘೋಷಣೆ

Date:

ಬೀದರ್ ನಗರದ ವಿಸ್ಡಮ್ ಪದವಿಪೂರ್ವ ವಿಜ್ಞಾನ ಕಾಲೇಜು ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹1 ಕೋಟಿ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಕಾಲೇಜು ಅಧ್ಯಕ್ಷ ಮಹಮ್ಮದ್ ಆಸಿಫೊದ್ದೀನ್ ಪ್ರಕಟಿಸಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿಸ್ಡಮ್ ಹಾಗೂ ಇತರ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ನಗರದ ಉರ್ದು ಹಾಲ್‍ನಲ್ಲಿ ಈಚೆಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ಕಾಲೇಜಿನಲ್ಲಿ ಪ್ರವೇಶ ಪಡೆಯುವ 400 ವಿದ್ಯಾರ್ಥಿಗಳಿಗೆ ಶುಲ್ಕ ರಿಯಾಯಿತಿ ರೂಪದಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು’ ಎಂದು ತಿಳಿಸಿದರು.

ಶೇ 95 ಕ್ಕೂ ಅಧಿಕ ಅಂಕ ಗಳಿಸಿದ 100 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ 75, ಹಾಸ್ಟೆಲ್ ಶುಲ್ಕದಲ್ಲಿ ಶೇ 50, ಶೇ 85ಕ್ಕೂ ಹೆಚ್ಚು ಅಂಕ ಪಡೆದ 100 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ 35, ಹಾಸ್ಟೆಲ್ ಶುಲ್ಕದಲ್ಲಿ ಶೇ 25 ಹಾಗೂ ಶೇ 75ಕ್ಕೂ ಅಧಿಕ ಅಂಕ ಗಳಿಸಿದ 200 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ 25 ಹಾಗೂ ಹಾಸ್ಟೆಲ್ ಶುಲ್ಕದಲ್ಲಿ ಶೇ 10 ರಷ್ಟು ರಿಯಾಯಿತಿ ಕಲ್ಪಿಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಸ್ಡಮ್ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತ ಬಂದಿದೆ. ಜಿಲ್ಲೆಯ ಫಲಿತಾಂಶ ಸುಧಾರಣೆಗೂ ಕೊಡುಗೆ ನೀಡುತ್ತಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ 2 ಬರೆಯುವ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಉಚಿತ ತರಬೇತಿ ಆರಂಭಿಸಿದ್ದು, ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿಸ್ಡಮ್ ಆಂಗ್ಲಮಾಧ್ಯಮ ಪ್ರೌಢಶಾಲೆ, ಅಸ್ರಾ ಪ್ರೌಢಶಾಲೆ, ಎಂಬೆಸಿ ಪ್ರೌಢಶಾಲೆ, ರೋಜಾ ಮಿಷನ್ ಪ್ರೌಢಶಾಲೆ, ಒಯಿಸ್ಟಿರ್ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ ಸತ್ಕರಿಸಲಾಯಿತು.

ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಸದಸ್ಯೆ ಚೇತನಾ ಮೋಹನ್, ವಿಸ್ಡಮ್ ಕಾಲೇಜು ಕಾರ್ಯದರ್ಶಿ ಮಹಮ್ಮದ್ ಸಲಾವುದ್ದೀನ್, ಪ್ರಾಚಾರ್ಯ ಶೇಕ್ ಮದಾರ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...