ಬೀದರ್‌ | ಮಹಿಳಾ ಸಬಲೀಕರಣಕ್ಕೆ ಆರ್ಥಿಕ ಸ್ವಾವಲಂಬನೆ ಅತ್ಯಗತ್ಯ : ವಾನತಿ ಎಂ.

Date:

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಮರ್ಥರಾದರೆ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ. ಅದರಲ್ಲೂ ಆರ್ಥಿಕ ಸ್ವಾವಲಂಬನೆ ಮಹತ್ವದ್ದಾಗಿದೆ ಎಂದು ಬೀದರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ. ನುಡಿದರು.

ಬೀದರ್ ವಿಶ್ವವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದಾರೆ. ಅನೇಕ ಆಯ್ಕೆಗಳು ಇಂದು ಮಹಿಳೆಯರ ಮುಂದಿವೆ. ವಿದ್ಯಾರ್ಥಿನಿಯರು ನಿಖರವಾದ ಗುರಿ, ಕಠಿಣ ಪರಿಶ್ರಮದಿಂದ ಏನಾದರೂ ಸಾಧಿಸಬಹುದಾಗಿದೆʼ ಎಂದರು.

ʼಸಮಾಜದಲ್ಲಿ ಉನ್ನತ ಶಿಕ್ಷಣ ಮುಗಿದ ತಕ್ಷಣ ಮದುವೆಯಾಗಲು ಒತ್ತಾಯಿಸಲಾಗುತ್ತದೆ. ಅನಾವಶ್ಯಕ ವಿಷಯಗಳನ್ನು ಕಿವಿಗೆ ಹಾಕಿಕೊಳ್ಳದೆ, ಏಕಾಗ್ರತೆಯಿಂದ ಪ್ರಯತ್ನದ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕುʼ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಹಕಾರ ಇಲಾಖೆಯ ಉಪ ನಿಬಂಧಕಿ ಮಂಜುಳಾ ಅವರು ಮಾತನಾಡಿ, ʼಮಹಿಳೆಯರು ಮೊದಲು ತಮ್ಮನ್ನು ತಾವು ಗೌರವಿಸಿಕೊಳ್ಳಿ ಆಮೇಲೆ ಇತರರು ತಾವೇ ನಿಮ್ಮನ್ನು ಗೌರವಿಸುವ ಕಾಲ ಬರುತ್ತದೆ. ಜೀವನದಲ್ಲಿ ಉತ್ತಮ ಗುರಿಯೊಂದಿಗೆ ಸಾಧನೆ ಮುಖ್ಯ. ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಬಲರಾಗಬೇಕಾದ ಅನಿವಾರ್ಯತೆಯಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಜಯಶ್ರೀ ಪ್ರಭಾ ಮಾತನಾಡಿ, ʼಯಾವ ದೇಶದಲ್ಲಿ ಮಹಿಳೆಯರಿಗೆ ಗೌರವದಿಂದ ಕಾಣುತ್ತಾರೆಯೋ ಆ ದೇಶ ತುಂಬಾ ಅಭಿವೃದ್ಧಿ ಹೊಂದುತ್ತದೆ. ಮಹಿಳೆಯರಿಗೆ ಪೆನ್ನಿನ ಶಕ್ತಿಯ ಅವಶ್ಯಕತೆಯಿದೆ ಎಂದರು.

WhatsApp Image 2025 03 21 at 4.52.24 PM

ಸಿಂಡಿಕೇಟ್ ಸದಸ್ಯ ವಿಠ್ಠಲ್‌ದಾಸ ಪ್ಯಾಗೆ ಮಾತನಾಡಿ, ʼಮಹಿಳೆಯರ ಸಬಲೀಕರಣವೆಂದರೆ ಮನೆಯಲ್ಲಿ ಕೆಲಸ ಮಾಡುವ ಹೆಣ್ಣುಮಗಳ ಶ್ರಮಕ್ಕೂ ಸಹ ಅಷ್ಟೇ ಬೆಲೆ ಕೊಡಬೇಕು. ಆಗ ಮಾತ್ರ ನಿಜವಾದ ಮಹಿಳಾ ಸಬಲೀಕರಣವಾಗುತ್ತದೆ. ಸಾವಿತ್ರಿಬಾಯಿ ಜ್ಯೋತಿಬಾ ಫುಲೆ ಅವರ ಕೊಡುಗೆ ಮಹತ್ತರವಾದದ್ದು. ಬಡತನ, ಅನಕ್ಷರತೆ, ಶಕ್ತಿ, ಮುಕ್ತಿಗಾಗಿ ಸಂವಿಧಾನ ಬಂದ ಮೇಲೆ ಮಹಿಳಾ ವಿದ್ಯಾಭ್ಯಾಸದ ಅನುಕೂಲತೆಗಳು ಒದಗಿವೆ. ಇಂದು ಮಹಿಳೆಯರಿಗೆ ವಿಚಾರ ಮಾಡುವ ಸ್ವಾತಂತ್ರ್ಯ ಅವಶ್ಯಕತೆಯಿದೆʼ ಎಂದರು.

ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ ಟಿ. ಅವರು ಮಾತನಾಡಿ, ʼಮಹಿಳೆಯ ದೊಡ್ಡ ಸಾಧನೆಯೆಂದರೆ ಜನ್ಮ ನೀಡುವ ಶಕ್ತಿಯಿರುವುದು ಕೇವಲ ಮಹಿಳೆಯರಿಗೆ ಮಾತ್ರವೆನ್ನಬಹದು. ಹೆಣ್ಣು ಮಕ್ಕಳ ಕಣ್ಣಲ್ಲಿ ನೀರು ಬರದಂತೆ ನೋಡಿಕೊಳ್ಳಬೇಕಾದ ಅವಶ್ಯಕತೆಯಿದೆʼ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೀದರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಮಾತನಾಡಿ, ʼಮಹಿಳೆಗೆ ಆರ್ಥಿಕ ಸ್ವಾವಲಂಬನೆ, ಧೈರ್ಯ ಇದ್ದಲ್ಲಿ ಮಾತ್ರ ಮಹಿಳೆಯರು ಸಾಧನೆ ಮಾಡಲು ಸಾಧ್ಯ. ಮಹಿಳೆಯರಿಗೆ ಹಿಂಸಿದರೆ ಸಮಾಜ ಉದ್ಧಾರವಾಗುವುದಿಲ್ಲ. ಎಲ್ಲರೂ ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸೋಣʼ ಎಂದು ತಿಳಿಸಿದರು.

ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಸುರೇಖಾ ಕೆ.ಎ.ಎಸ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುವರ್ಣಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸಿಂಧು ಎಚ್‌.ಎಸ್. ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಶಾಂತಲಿಂಗ ಸಾವಳಗಿ, ಶಿವನಾಥ ಪಾಟೀಲ, ಸಚಿನ್ ಶಿವರಾಜ, ಅರ್ಜುನ ಮರೆಪ್ಪ ಕನಕ, ಅಬ್ದುಲ್ ಸತ್ತಾರ್‌, ವೈಷ್ಣವಿ ಪಾಟೀಲ್‌ ಹಾಗೂ ಶೋಭಾ ಪಾಟೀಲ್‌ ಅವರು ಮಹಿಳೆಯರ ಕುರಿತು ಮಾತನಾಡಿದರು.

ಮಹಿಳಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ ಹಾಗೂ ಉಪನ್ಯಾಸಕರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅನ್ನದಾತರ ಸಾವಿಗೆ ಕೊನೆಯಿಲ್ಲ : 5 ವರ್ಷಗಳಲ್ಲಿ 100 ದಾಟಿದ ರೈತರ ಆತ್ಮಹತ್ಯೆ ಸಂಖ್ಯೆ

ಕಾರ್ಯಕ್ರಮದಲ್ಲಿ ಬೀದರ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ರವೀಂದ್ರನಾಥ.ವಿ.ಗಬಾಡಿಯವರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಡಾ.ಮುಸ್ತಾಖೀಮ್‌ ಗಾಯನ ನಡೆಸಿಕೊಟ್ಟರು. ಡಾ.ಸಂತೋಷಿ ಎಂ. ಹಾಗೂ ಡಾ.ಸುಹಾಸಿನಿ ಸಾವಳೆ ಪ್ರಾರ್ಥನಾ ಗೀತೆ ಹಾಡಿದರು. ಡಾ.ಸುನೀತಾ ಮಹೇಶ್ವರಿ ವಂದಿಸಿದರು. ಡಾ.ಸುರೇಖಾ ಬಿರಾದಾರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...