ಬೀದರ್‌ | ವಿಶ್ವ ಮಲೇರಿಯಾ ದಿನ ಆಚರಣೆ : ಜನಜಾಗೃತಿ ಜಾಥಾಕ್ಕೆ ಚಾಲನೆ

Date:

ಜಿಲ್ಲೆಯಲ್ಲಿ ಅಲಲ್ಲಿ ಮಳೆಯಾಗುತ್ತಿರುವುದರಿಂದ ಹಾಗೂ ನಿಂತ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿರುತ್ತದೆ, ನಾಗರೀಕರು ಮಲೇರಿಯಾ ರೋಗವನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಧ್ಯಾನೇಶ್ವರ ನಿರಗುಡೆ ಮನವಿ ಮಾಡಿದರು.

ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಜನಜಾಗೃತಿ ರ‍್ಯಾಲಿಗೆ ಬಾವುಟ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಜಾಗೃತಿ ಜಾಥಾವು ಬೀದರ್ ನಗರದ ಡಾ.ಅಂಬೇಡ್ಕರ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ಹಳೆ ಬಸ್ ನಿಲ್ದಾಣ ಮಾರ್ಗದ ಮುಖಾಂತರ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರ ಆವರಣದಲ್ಲಿ ಕೊನೆಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಜಿಲ್ಲೆಯಲ್ಲಿ ಮಲೇರಿಯಾ ರೋಗವು ಇಳಿಮುಖವಾಗಿದ್ದು, ಕಳೆದ 2024ನೇ ಸಾಲಿನಲ್ಲಿ ಕೇವಲ 4 ಮಲೇರಿಯಾ ಪ್ರಕರಣಗಳು ಪತ್ತೆಯಾಗಿದ್ದು, ಅವು ಹೊರರಾಜ್ಯಗಳಿಂದ 4 ಜನ ವಲಸಿಗರಿಗೆ ಮಲೇರಿಯಾ ಧೃಡಪಟ್ಟಿದ್ದು, ಎಲ್ಲ ಮಲೇರಿಯಾ ಪ್ರಕರಣಗಳಿಗೆ ತೀವ್ರ ಚಿಕಿತ್ಸೆ ನೀಡುವುದರ ಮೂಲಕ ಗುಣಪಡಿಸಲಾಗಿದೆ. ಜಿಲ್ಲೆಯಲ್ಲಿ ಮಲೇರಿಯಾದಿಂದ ಇಲ್ಲಿಯವರೆಗೆ ಯಾವುದೇ ತರಹದ ಸಾವು ಸಂಭವಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಿದಲ್ಲಿ ಸೊಳ್ಳೆಗಳ ಬೆಳವಣಿಗೆ ನಿಯಂತ್ರಿಸಿ ಮಲೇರಿಯಾ ಹಾಗೂ ಇತರ ಸೊಳ್ಳೆ ಜನಿತ ರೋಗಗಳನ್ನು ನಿಯಂತ್ರಿಸಬಹುದಾಗಿದೆʼ ಎಂದು ತಿಳಿಸಿದರು.

ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ರಾಜಶೇಖರ್ ಪಾಟೀಲ ಮಾತನಾಡಿ, ʼಜಿಲ್ಲೆಯಾದ್ಯಂತ ತಾಲ್ಲೂಕು ಮಟ್ಟದಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಉಪಕೇಂದ್ರ ಹಾಗೂ ಗ್ರಾಮ ಪಂಚಾಯತ, ಶಾಲಾ-ಕಾಲೇಜುಗಳಲ್ಲಿ ʼಮರು ಹೂಡಿಕೆ ಮಾಡಿ, ಮರು ಚಿಂತಿಸಿ, ಮರು ಚೇತನಗೊಳಿಸಿʼ ಎಂಬ ಘೋಷಣೆಯೊಂದಿಗೆ ವಿಶ್ವ ಮಲೇರಿಯ ದಿನ ಜನಜಾಗೃತಿಗಾಗಿ ಜಾಥಾ ಮತ್ತು ಸಭೆಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಜಿಲ್ಲೆಯಲ್ಲಿ ಮಲೇರಿಯಾ ಹರಡದಂತೆ ಜ್ವರ ಸಮೀಕ್ಷೆ ಹಾಗೂ ಸೊಳ್ಳೆ ತಾಣಗಳ ಸಮೀಕ್ಷೆ ಕಾರ್ಯವನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆʼ ಎಂದರು.

ʼಸತತವಾಗಿ ಒಂದು ವಾರಗಳವರೆಗೆ ನಿಂತ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆಯಿಟ್ಟು ತನ್ನ ಸಂತಾನವನ್ನು ಅಭಿವೃದ್ಧಿಪಡಿಸಿ ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಹರಡಲು ಕಾರಣವಾಗುತ್ತದೆ. ಸಾರ್ವಜನಿಕರು ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು. ಮಲೇರಿಯಾ ಹಾಗೂ ಸೊಳ್ಳೆಗಳಿಂದ ಹರಡುವ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕ್ಕನಗುನ್ಯಾ, ಆನೆಕಾಲು ರೋಗಗಳನ್ನು ಹರಡಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಂಡು ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ವಾವಲಂಬಿ ಬದುಕಿಗೆ ಮನರೇಗಾ ಬಲ: ಬ್ಯಾಂಕ್ ಮ್ಯಾನೇಜರ್ ಹುದ್ದೆ ತೊರೆದು ಕುರಿ ಸಾಕಾಣಿಕೆಯತ್ತ ಪದವೀಧರ

ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ರಾಜಶೇಖರ್ ಪಾಟೀಲ್, ಡಾ.ಕಿರಣ ಪಾಟೀಲ್, ಡಾ.ಅನೀಲಕುಮಾರ ಚಿಂತಾಮಣಿ, ಡಾ.ದಿಲೀಪ ಡೊಂಗ್ರೆ, ಡಾ.ಸಂಗಾರೆಡ್ಡಿ, ಡಾ.ಶಿವಶಂಕರ್‌, ತಾಲ್ಲೂಕು ಆರೋಗ್ಯಾಧಿಕಾರಿಗಳು, ಸರ್ಕಾರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಾದ ಮೌನದಾಸ, ಸಂಗಪ್ಪಾ ಕಾಂಬ್ಳೆ, ಅನೀತಾ, ಸತೀಷಕುಮಾರ ಪಾಂಡೆ, ವೀರಶಟ್ಟಿ , ಚನ್ನಶೆಟ್ಟಿ, ಅಬುಬಕರ್, ಬಾಬು ಪ್ರೀಯಾ, ಹಾದಿ ತಬ್ರೇಜ್, ದೇವಿದಾಸ, ಮುಹ್ಮದ್ ರಫೀಯುದ್ದಿನ್, ಗೋರಖನಾಥ್, ಜಾವೇದ್ ಕಲ್ಯಾಣಕರ್, ದೇವಿದಾಸ, ಬಸವರಾಜ, ಜೇತುಲಾಲ್‌ ಪವಾರ್ ಸೇರಿದಂತೆ ಎಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮತ್ತು ಜಿಲ್ಲಾ ಮಲೇರಿಯಾ ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...