ಬೀದರ್‌ | ಜಾಗತಿಕ ಮಟ್ಟದಲ್ಲಿ ಕನ್ನಡದ ಅಸ್ಮಿತೆ ದಾಖಲಿಸಿದ ʼಎದೆಯ ಹಣತೆʼ : ಲಕ್ಷ್ಮಿಕಾಂತ ಪಂಚಾಳ

Date:

ಎದೆಯ ಹಣತೆ ಕೃತಿ ಮುಖಾಂತರ ಕನ್ನಡದ ಅಸ್ಮಿತೆಯನ್ನು ಜಾಗತಿಕ ಮಟ್ಟದಲ್ಲಿ ನೆಲೆಯೂರುವಂತೆ ಮಾಡಿದ ಶ್ರೇಯಸ್ಸು ಸಾಹಿತಿ ಬಾನು ಮುಸ್ತಾಕ್ ಅವರಿಗೆ ಸಲ್ಲುತ್ತದೆ ಎಂದು ಪ್ರಾಧ್ಯಾಪಕ ಡಾ.ಲಕ್ಷ್ಮಿಕಾಂತ ಸಿ ಪಂಚಾಳ ಅಭಿಪ್ರಾಯಪಟ್ಟರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಬೀದರ್ ನಗರದ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ ಅಂತರಾಷ್ಟ್ರೀಯ ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರ ʼಎದೆಯ ಹಣತೆʼ ಕೃತಿ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ʼಕನ್ನಡದ ಪ್ರಗತಿಪರ ಚಿಂತಕಿ, ಸಾಹಿತಿ ಬಾನು ಮುಸ್ತಾಕ್ ಅವರ ʼಎದೆಯ ಹಣತೆʼ ಕೃತಿಯಲ್ಲಿ ಒಟ್ಟು ಹನ್ನೆರಡು ಕತೆಗಳಿದ್ದು, ಎಲ್ಲ ಕಥೆಗಳಲ್ಲಿ ಜೀವಪರ, ಮಾನವೀಯ ಮೌಲ್ಯಗಳ ಸತ್ವವಿದೆ. ಇದೇ ಕೃತಿಯನ್ನು ಲೇಖಕಿ ದೀಪ ಭಾಸ್ತಿ ಅವರು ಆಂಗ್ಲ ಭಾಷೆಗೆ ʼಹಾರ್ಟ್ ಲ್ಯಾಂಪ್ʼ ಎಂಬ ಹೆಸರಿನಿಂದ ಅನುವಾದಿಸಿದ್ದಾರೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈ ಕೃತಿಗೆ ಪ್ರಸಕ್ತ ಸಾಲಿನ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಗೌರವಕ್ಕೆ ಪಾತ್ರವಾಗಿದ್ದು, ಇದು ಇಡೀ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಸಂಗತಿ. ಬಾನು ಮುಷ್ತಾಕ್‌ ಅವರು ತಮ್ಮ ಕಥೆಗಳಲ್ಲಿ ಮಹಿಳೆಯರ ಬದುಕು-ಬವಣೆ, ವೈಚಾರಿಕತೆ, ಮಹಿಳಾಪರ ಜಾಗೃತಿ, ಸ್ತ್ರೀ ಸಂವೇದನೆ ಸೇರಿದಂತೆ ಅನೇಕ ಸಂಗತಿಗಳನ್ನು ಅತ್ಯಂತ ಸೂಕ್ಷ್ಮವಾಗಿ ಕಟ್ಟಿಕೊಟ್ಟಿದ್ದಾರೆʼ ಎಂದು ವಿಶ್ಲೇಷಿಸಿದರು.

ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಕನ್ನಡ ಸಾಹಿತ್ಯವು ಶ್ರೇಷ್ಠ ಹಾಗೂ ಅನೇಕ ವರ್ಷಗಳ ಐತಿಹಾಸಿಕ ಪರಂಪರೆಯನ್ನು ಹೊಂದಿದೆ. ಕನ್ನಡದ ಸಣ್ಣ ಕಥೆಗಳಿಗೆ ಹೆಚ್ಚು ಓದುಗರಿದ್ದಾರೆ. ಸಣ್ಣ ಕಥೆಗಳು ಜನರ ಮನಸ್ಸಿಗೆ ಬಹು ಬೇಗ ಮುಟ್ಟುತ್ತವೆ. ಬೀದರನಲ್ಲಿ ಕನ್ನಡ ಮಿಶ್ರಿತ ಭಾಷೆ ಹೆಚ್ಚು ಬಳಕೆಯಲ್ಲಿದ್ದು, ಶುದ್ಧ ಭಾಷೆ ಬಳಕೆಗೆ ತರುವುದು ಅವಶ್ಯಕತೆಯಿದೆʼ ಎಂದು ನುಡಿದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಮಾತನಾಡಿ, ʼಬೀದರ ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ, ಸೂಕ್ತ ವೇದಿಕೆ ದೊರೆತರೆ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯುವ ಸಾಮರ್ಥ್ಯ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಹೊಸ ಬರಹಗಾರ, ಸಾಹಿತಿ, ಕಲಾವಿದರಿಗೆ ಸೂಕ್ತ ವೇದಿಕೆ ಒದಗಿಸುವ ಕಾರ್ಯಕ್ರಮಗಳು ಏರ್ಪಡಿಸಲಾಗುವುದುʼ ಎಂದು ತಿಳಿಸಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕಿ ಡಾ. ಮಕ್ತುಂಬಿ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ʼಕನ್ನಡ ಸಾಹಿತ್ಯಿಕ ಕಾರ್ಯಕ್ರಮ ಯಶಸ್ವಿಗೆ ಕನ್ನಡ ಮನಸ್ಸುಗಳು ಜಾಗೃತರಾಗಬೇಕು. ಗಡಿ ಭಾಗದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಉಪನ್ಯಾಸ ಸೇರಿದಂತೆ ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆʼ ಎಂದು ತಿಳಿಸಿದರು.

ಕಲಾವಿದರಾದ ಶಂಭುಲಿಂಗ ವಾಲ್ದೊಡ್ಡಿ, ಸೃಜನ್ಯ ಅತಿವಾಳೆ, ವೇದಿಕಾ ಚಿಲ್ಲರ್ಗಿ ಗಾಯನ ನಡೆಸಿಕೊಟ್ಟರು.

ಇದನ್ನೂ ಓದಿ : ಬೀದರ್‌ | ಐದು ಕಳವು ಪ್ರಕರಣ : ಐವರ ಬಂಧನ, ₹5.95 ಲಕ್ಷ ಮೌಲ್ಯದ 14 ಬೈಕ್‌ ಜಪ್ತಿ

ಕಾರ್ಯಕ್ರಮದಲ್ಲಿ ಪ್ರಮುಖರಾದ ಸಂತೋಷ ಜೋಳದಾಪಕೆ, ಜಗದೀಶ್ವರ ಬಿರಾದರ್‌, ನಿಜಾಮೋದ್ದೀನ್‌, ಓಂಕಾರ ಪಾಟೀಲ್‌, ಜಗದೇವಿ ಯದಲಾಪುರೆ, ಅವಿನಾಶ ಸೋನೆ, ಬಾಲಾಜಿ ಕುಂಬಾರ, ಅಶ್ವಜೀತ್‌ ದಂಡೀನ್ ಸೇರಿದಂತೆ ಸಾಹಿತಿಗಳು, ಕಲಾವಿದರು ಪಾಲ್ಗೊಂಡಿದ್ದರು. ದೀಲಿಪಕುಮಾರ ಮೊಘ ನಿರೂಪಿಸಿದರು. ಉಮಕಾಂತ ಮೀಸೆ ಸ್ವಾಗತಿಸಿದರು ಬಸವರಾಜ ಮೂಲಗೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...