ಬೀದರ್‌ | ಯುವಜನತೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ : ಮಾಣಿಕ ನೇಳಗಿ

Date:

ʼಯುವಕರು ಕಥೆ, ಕಾದಂಬರಿ, ನಾಟಕ, ಕವಿತೆ ಸೇರಿ ಎಲ್ಲ ಪ್ರಕಾರದ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಿದೆ. ಅಧ್ಯಯನದಿಂದ ಶಬ್ದಸಂಪತ್ತು ಹೆಚ್ಚಿಸಿಕೊಂಡು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಾಹಿತಿ, ತಾಲೂಕು ಖಜಾನೆ ಅಧಿಕಾರಿ ಮಾಣಿಕ ನೇಳಗಿ ಅಭಿಪ್ರಾಯಪಟ್ಟರು.

ಔರಾದ್ ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ ದಸರಾ ಕವಿಗೋಷ್ಠಿ ಹಾಗೂ ಸಾಧಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‌ʼಕವನಗಳು ಜನರ ಮನಸ್ಸಿಗೆ ತಟ್ಟುವ ಜೊತೆಗೆ ಎಚ್ಚರಗೊಳಿಸಿ ಪರಿವರ್ತಿಸುವ ಮಹತ್ಕಾರ್ಯ ಮಾಡುತ್ತವೆʼ ಎಂದು ನುಡಿದರು.

ಕನ್ನಡದ ಆದಿಕವಿ ಪಂಪ, ಪೊನ್ನ, ರನ್ನ ಸೇರಿದಂತೆ ಅನೇಕರು ರಾಜಾಶ್ರಯದಲ್ಲಿದ್ದ ಕವಿಗಳಾದರೂ ಸಹ ಕಾವ್ಯಧರ್ಮವನ್ನು ಮರೆತವರಿಲ್ಲ. ಅವರ ವಿಚಾರಗಳು ಇಂದಿಗೂ ಜನರನ್ನು ಆಕರ್ಷಿಸುವಲ್ಲಿ ಮಹತ್ತರ ಸ್ಥಾನ ಪಡೆದಿವೆ. ಬಳಿಕ ವಚನಕಾರರು, ಕೀರ್ತನಕಾರರು, ದಲಿತಕವಿಗಳು, ಬಂಡಾಯ ಸಾಹಿತಿಗಳು ಸ್ವಾತಂತ್ರ್ಯ ವಿಚಾರಗಳು ವ್ಯಕ್ತಪಡಿಸಿದ್ದು ವಿಶಿಷ್ಟವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಹಜವಾಗಿ ಹುಟ್ಟಿದ ಕಾವ್ಯ ಜನರ ಮನಸ್ಸನ್ನು ಶಾಶ್ವತವಾಗಿ ಹಿಡಿದಿಡುವ ಕೆಲಸ ಮಾಡುತ್ತದೆ. ದಸರಾ ಕೇವಲ ನಾಡಿನ ವೈಭವ ಪರಿಚಯಿಸುವ ಹಬ್ಬವಾಗದೇ ನಾಡಿನ ಪ್ರಗತಿಗೆ ಪೂರಕವಾಗಿ ಬಡವರ ಶೋಷಿತರ, ದಮನಿತರ ಸಂಭ್ರಮದ ಹಬ್ಬವಾಗಲಿʼ ಎಂದರು.

ಶಿಕ್ಷಕ ಪ್ರಕಾಶ ದೇಶಮುಖ ಆಶಯ ನುಡಿ ವ್ಯಕ್ತಪಡಿಸಿ, ʼಕವನಗಳು ಸಾಮಾಜಿಕ ಬದ್ದತೆ, ಸಮಾಜಮುಖಿ ಚಿಂತನೆ ಒಳಗೊಂಡಿರಬೇಕು. ಬದುಕಿನ ವಾಸ್ತವಿಕತೆಯ ಪರಿಚಯ ಕವನಗಳ ರೂಪದಲ್ಲಿ ರಚನೆಯಾಗಬೇಕು. ದೀರ್ಘ ಕವನಗಳಿಗೂ ಹನಿಗವನಗಳಿಗೂ ತುಂಬ ವ್ಯತ್ಯಾಸವಿದ್ದು, ನಮ್ಮ ತಾಳ್ಮೆಯ ಪ್ರತಿರೂಪವಾದ ಹನಿಗವನಗಳು ಸಾಹಿತ್ಯದ ರಸದೌತಣ ನೀಡಲು ಸಾಧ್ಯವಿಲ್ಲʼ ಎಂದರು.

WhatsApp Image 2025 10 04 at 4.42.12 PM

ತಾಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ ಮಾತನಾಡಿ, ʼಪ್ರಸ್ತುತ ಜನಮಾನಸದಲ್ಲಿ ಆಂಗ್ಲ ವ್ಯಾಮೋಹ ಹೆಚ್ಚಾಗಿದ್ದು ಮೌಲ್ಯಗಳ ಅಧಃಪತನ ಶುರುವಾಗಿದೆ. ನಾವೆಲ್ಲರೂ ಕನ್ನಡವನ್ನು ಹೆಚ್ಚು ಬಳಸುವುದು ಅಗತ್ಯವಾಗಿದೆ. ಕನ್ನಡವೆಂದರೆ ಕೇವಲ ಭಾಷೆಯಲ್ಲ. ಅದು ಜನರಲ್ಲಿ ಮೌಲ್ಯಗಳು ತುಂಬುವ ಸಂಸ್ಕಾರ ಬಿತ್ತುವ ನಮ್ಮ ಸ್ವಾಭಿಮಾನದ ಕುರುಹುʼ ಎಂದರು.

ಸಮಾರಂಭದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ದತ್ತಾತ್ರಿ ಗಿರಿ, ಮಹಾದೇವ ಭಾಲೇಕರ್, ಸಂಜೀವ ಬಿರಾದಾರ್, ಗುಣವಂತ ಬಿರಾದಾರ್, ಕೈಲಾಸಪತಿ ಕೇದಾರೆ ರಾಜ್ಯ ಮಟ್ಟದ ಶಿಕ್ಷಣರತ್ನ ಪ್ರಶಸ್ತಿ ಪುರಸ್ಕೃತ ರವೀಂದ್ರ ಡಿಗ್ಗಿ, ಪೀರಪ್ಪ ಉಜನೀಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಿವಾನಂದ ಸ್ವಾಮಿ, ಎಂಡಿ ನಯೀಮ್, ರಂಜೀತ ಸಿಂಧೆ, ರಮೇಶ ಪಾಂಚಾಳ, ಸವಿತಾ ಮೀಸೆ, ಶಿಲ್ಪಾ ರಾಜೋಳೆ, ನಾಗೇಂದ್ರ ಚಿಟಗಿರೆ, ಪ್ರಕಾಶ ಬರದಾಪೂರೆ, ವಿರೇಶ ಅಲಮಾಜೆ ಅವರು ಸ್ವರಚಿತ ಕವನ ವಾಚಿಸಿದರು.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಲಿ : ರಾಜಕುಮಾರ್‌ ಅಲ್ಲೂರೆ

ಸಾಹಿತಿ ಸೂರ್ಯಕಾಂತ ರ‍್ಯಾಕಲೆ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಂಡರಿ ಆಡೆ ಹಾಗೂ ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಮುಖರಾದ ಅಮರ ಸ್ವಾಮಿ, ಜಗನ್ನಾಥ ಮೂಲಗೆ, ಸಂದೀಪ ಪಾಟೀಲ್, ಅಂಬಾದಾಸ ನಳಗೆ, ಗೋವಿಂದ ಪಾಟೀಲ್, ಮಹಾದೇವ ಘುಳೆ, ಗಜಾನನ ಮಳ್ಳಾ, ಅಶೋಕ ಅಲಮಾಜೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...