ಬೀದರ್‌ | ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

Date:

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಸರ್ಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿತ್ತು. ಆದರೆ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿನ ನೀರಿನ ಘಟಕಗಳು ನಿಷ್ಪ್ರಯೋಜಕವಾಗಿವೆ.

ಹುಮನಾಬಾದ್ ತಾಲೂಕಿನ ಮದರಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಮಲ್ಕಾಪುರ ವಾಡಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಒಂದು ವರ್ಷದಿಂದ ಸೂಕ್ತ ನಿರ್ವಹಣೆಯಿಲ್ಲದೆ ಕೆಟ್ಟು ನಿಂತಿದ್ದು, ದುರಸ್ತಿ ಇಲ್ಲದ ಕಾರಣ ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ.

ಹಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಉದ್ಘಾಟನೆಗೊಂಡ ಕೆಲ ತಿಂಗಳು ಮಾತ್ರ ಬಳಕೆಗೆ ಬಂದಿವೆ. ಲಕ್ಷಾಂತರ ರೂಪಾಯಿ ವೆಚ್ಚದಿಂದ ನಿರ್ಮಿಸಿದ ಶುದ್ಧ ನೀರಿನ ಘಟಕಗಳು ಇದ್ದೂ ಇಲ್ಲದಂತಾಗಿವೆ. ಕೆಲವು ಕಡೆ ಸೂಕ್ತ ನಿರ್ವಹಣೆಯಿಂದ ಸರಿಯಾಗಿ ನಡೆಯುತ್ತಿವೆ. ಹಲವು ಹಳ್ಳಿಗಳಲ್ಲಿ ನೀರಿನ ಘಟಕಗಳು ಪಾಳು ಬಿದ್ದು ಧೂಳು ತಿನ್ನುತ್ತಿವೆ, ಕೆಲವೆಡೆ ಘಟಕದಲ್ಲಿ ಅಳವಡಿಸಿದ ಯಂತ್ರಗಳು ಕೆಟ್ಟು ಹೋಗಿದ್ದು ದುರಸ್ತಿ ಭಾಗ್ಯ ಇಲ್ಲದೆ ವರ್ಷಗಳೇ ಕಳೆದರೂ ಯಾರೊಬ್ಬರೂ ಕಾಳಜಿವಹಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಕಾಪುರ ವಾಡಿ ಗ್ರಾಮದ ಯುವಕ ಶರಣು ಈದಿನ.ಕಾಮ್‌ ಜೊತೆ ಮಾತನಾಡಿ, “ಗ್ರಾಮದಲ್ಲಿ ಸುಮಾರು 200ಕ್ಕೂ ಅಧಿಕ ಮನೆಗಳಿವೆ. ಇಲ್ಲಿ ನಿರ್ಮಿಸಲಾದ ನೀರಿನ ಘಟಕ ಒಂದೆರಡು ತಿಂಗಳು ಮಾತ್ರ ಬಳಕೆ ಮಾಡಲಾಗಿದೆ. ನಂತರ ಕೆಟ್ಟು ನಿಂತಿದೆ. ಈ ಬಗ್ಗೆ ಗ್ರಾಮ ಪಂಚಾಯತ್‌ ಸದಸ್ಯರಿಗೆ, ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ. ನೀರಿನ ಘಟಕ ಇದ್ದರೂ ಹಾಳಾದ ಪರಿಣಾಮ ಗ್ರಾಮಸ್ಥರು ಶುದ್ಧ ಕುಡಿಯುವ ನೀರು ಸಿಗದಂತಾಗಿದೆ. ಈಗಲಾದರೂ ಪಂಚಾಯತ್‌ ಅಧಿಕಾರಿಗಳು ಸರಿಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಾಲಕಿಯರ ಹಾಸ್ಟೆಲ್‌ ಸ್ನಾನಗೃಹದಲ್ಲಿ ಕ್ಯಾಮೆರಾ ಅಳವಡಿಸಿದ್ದ ಆರೋಪಿ ಬಂಧನ

 ಈ ಬಗ್ಗೆ ಮದರಗಾಂವ ಗ್ರಾಮ ಪಂಚಾಯಿತಿ ಪಿಡಿಒ ಈದಿನ.ಕಾಮ್‌ ದೊಂದಿಗೆ ಮಾತನಾಡಿ, “ಎರಡು ತಿಂಗಳ ಹಿಂದಷ್ಟೇ ವರ್ಗಾವಣೆಯಾಗಿ ಬಂದಿದ್ದೇನೆ. ಮಲ್ಕಾಪುರ ವಾಡಿ ಗ್ರಾಮಕ್ಕೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕ ಸಮಸ್ಯೆ ಪರಿಶೀಲಿಸಿ, ಶೀಘ್ರದಲ್ಲೇ ಸರಿಪಡಿಸುವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...