ಬೀದರ್‌ | ಅಧಿಕಾರ ದುರ್ಬಳಕೆ ಆರೋಪ; ಮೋರಖಂಡಿ ಗ್ರಾಮ ಪಂಚಾಯತಿ ವಿಸರ್ಜನೆಗೆ ಆಗ್ರಹ

Date:

ಬಸವಕಲ್ಯಾಣ ತಾಲೂಕಿನ ಮೋರಖಂಡಿ ಗ್ರಾಮ ಪಂಚಾಯತಿಯಲ್ಲಿನ ಸದಸ್ಯರು ಮತ್ತು ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ಕರ್ತವ್ಯ ನಿರ್ವಹಿಸವಲ್ಲಿ ಪಂಚಾಯತಿ ಅಸಮರ್ಥವಾಗಿದೆ. ಕೂಡಲೇ ಪರಿಶೀಲಿಸಿ ಪಂಚಾಯತ್‌ ರಾಜ್‌ ಅಧಿನಿಯಮ ಅನ್ವಯ ಸದರಿ ಗ್ರಾಮ ಪಂಚಾಯತಿಯನ್ನು ವಿಸರ್ಜನೆ ಮಾಡಬೇಕೆಂದು ಪ್ರಜಾ ಪ್ರಭುತ್ವ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಸಂಬಂಧ ಸಮಿತಿಯ ಪ್ರಮುಖರು ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕು ಪಂಚಾಯತ್‌ ಕಾರ್ಯನಿವಾರ್ಹಕ ಅಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಆಡಳಿತದಲ್ಲಿ ಪಾರದರ್ಶಕತೆ ತರಲು ಪಂಚಾಯತ್ ರಾಜ್ಯ ವ್ಯವಸ್ಥೆಯಲ್ಲಿ ನೇರವಾಗಿ ಜನರ ಸಹಭಾಗಿತ್ವದಲ್ಲಿ ಪರಿಶೀಲನೆಗಾಗಿ ಸರಕಾರ ಜಮಾಬಂದಿ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಸದರಿ ಗ್ರಾಮ ಪಂಚಾಯಿತಿಯಲ್ಲಿ 2021ರಿಂದ ಇಲ್ಲಿಯವರೆಗೆ ಜಮಾಬಂದಿ ಕಾರ್ಯಕ್ರಮ ಆಯೋಜಿಸದೇ ವಿಫಲವಾಗಿದೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗೆ ತೆರಳಿದರೆ ಅಧಿಕಾರಿಗಳು ಗೈರಾಗಿದ್ದರು, ನಂತರ ತಾಲೂಕು ಪಂಚಾಯಿತಿ ಮುಖಾಂತರ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಮಾಹಿತಿ ನೀಡಲು ವಿಳಂಬ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮ ಪಂಚಾಯಿತಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರಿಗೆ ಮೀಸಲಿರಿಸಿದ ಅನುದಾನ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಬಳಕೆ ಮಾಡಬೇಕಾದ ಅನುದಾನವನ್ನು ಸಮಪರ್ಕವಾಗಿ ಅನುಷ್ಠಾನಕ್ಕೆ ತರುವಲ್ಲಿ ವಿಫಲವಾಗಿ ಅಧಿಕಾರಿಗಳು ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ” ಎಂದು ದೂರಿದರು.

ಮೋರಖಂಡಿ ಗ್ರಾಮ ಪಂಚಾಯಿತಿನಲ್ಲಿ ಸಾರ್ವಜನಿಕರ ಕುಂದು ಕೊರತೆ ಪರಿಹಾರ, ಜವಾಬ್ದಾರಿ ಜಾರಿ, ಮತ್ತು ಸ್ಪಂದನಾಶೀಲ ಆಡಳಿತವನ್ನು ಪ್ರೋತ್ಸಾಹಿಸುವ ಉದ್ದೇಶಕ್ಕಾಗಿ ಯಾವುದೇ ಕರ್ತವ್ಯಗಳು ಕ್ರಮಕೈಗೊಂಡಿಲ್ಲ. ಸುಮಾರು 2 ವರ್ಷ 11 ತಿಂಗಳುಗಳಿಂದ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತನ್ನ ಕರ್ತವ್ಯ ನಿರ್ವಹಿಸಲು ವಿಫಲವಾಗಿರುವುದು ಕಂಡು ಬಂದಿದೆ. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ ಅನ್ವಯ ಸದರಿ ಗ್ರಾಮ ಪಂಚಾಯತ್‌ ಕೂಡಲೇ ವಿಸರ್ಜನೆ ಮಾಡುವಂತೆ” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಈ ಸಂದರ್ಭದಲ್ಲಿ ಪ್ರಜಾ ಪ್ರಭುತ್ವ ಸಮಿತಿಯ  ಸಂಸ್ಥಾಪಕ ರಾಜ್ಯಾಧ್ಯಕ್ಷ ಗಗನ ಫುಲೆ, ಪ್ರಧಾನ ಕಾರ್ಯದರ್ಶಿ ಜೈಪ್ರಕಾಶ ಶಿಂಧೆ, ಉಪಾಧ್ಯಕ್ಷ ಶಿವಕುಮಾರ ಜಾಧವ್‌ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...