ಬೀದರ್‌ | ಉಪ ತಹಶೀಲ್ದಾರ್‌ ವರ್ಗಾವಣೆಗೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ

Date:

ಬೀದರ ತಾಲ್ಲೂಕಿನ ಜನವಾಡ ಹೋಬಳಿ ಕೇಂದ್ರದ ನಾಡ ಕಚೇರಿ ಉಪ ತಹಶೀಲ್ದಾರ್ ಅಶೋಕ ರಾಜಗೀರ ಅವರು ಸಾರ್ವಜನಿಕರ ಕೆಲಸಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೂಡಲೇ ಅವರನ್ನು ಅನ್ಯ ಜಿಲ್ಲೆಗೆ ವರ್ಗಾಯಿಸುವಂತೆ ಒತ್ತಾಯಿಸಿ ಬೀದರ್‌ ನಲ್ಲಿ ಅರಬೆತ್ತಲೆ ಪ್ರತಿಭಟನೆ ನಡೆಯಿತು.

ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಹಾಗೂ ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ ಪದಾಧಿಕಾರಿಗಳು ಜಂಟಿಯಾಗಿ ಅರಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸಲ್ಲಿಸಿದರು.

“ಜನವಾಡ ಹೋಬಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಸ್ಥರು ಆದಾಯ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ, ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಅರ್ಜಿ ಸಲ್ಲಿಸಿದರೆ ಏನಾದರೂ ಒಂದು ಕಾರಣ ಹೇಳಿ ಅರ್ಜಿಗಳು ತಿರಸ್ಕರಿಸುತ್ತಿದ್ದಾರೆ. ಬಿಪಿಎಲ್ ಪಡಿತರ ಚೀಟಿ ಇದ್ದವರಿಗೆ ನಿಮ್ಮ ಹತ್ತಿರ ಎಪಿಎಲ್ ಪಡಿತರ ಚೀಟಿಯಿದೆ, ನಿಮ್ಮ ಆದಾಯ ಹೆಚ್ಚು ಇರುತ್ತದೆ ಎಂದು ಅರ್ಜಿ ತಿರಸ್ಕರಿಸಿ ಹಿಂಬರಹ ನೀಡುತ್ತಿದ್ದಾರೆ. ಆದರೆ ಮಧ್ಯವರ್ತಿಗಳ ಮೂಲಕ ಹಣ ಪಡೆದು ತಮಗೆ ಬೇಕಾದವರ ಅರ್ಜಿ ವಿಲೇವಾರಿ ಮಾಡಿಕೊಡುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಗಮನಕ್ಕೆ ತರಲಾಗಿದೆ, ಆದರೆ ನಾಡ ತಹಶೀಲ್ದಾರ್‌ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಸರ್ಕಾರದ ಹಲವು ಯೋಜನೆಗಳ ಪ್ರಮಾಣ ಪತ್ರ ಮತ್ತು ಇನ್ನಿತರ ದಾಖಲೆಗಳನ್ನು ಸೂಕ್ತ ಸರಿಯಾದ ಸಮಯಕ್ಕೆ ತಲುಪಿಸದೇ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಜನವಾಡ ನಾಡ ಕಚೇರಿ ಉಪ ತಹಸೀಲ್ದಾರ್‌ ಅವರನ್ನು ಕೂಡಲೇ ಬೀದರ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ವರ್ಗಾಯಿಸಿ ಸರ್ವಾಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಮತಿಯ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ, ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ: ಸಚಿವ ಎಂ ಬಿ ಪಾಟೀಲ್

ಈ ಸಂದರ್ಭದಲ್ಲಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಶಿಂಧೆ, ಉಪಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ, ಸಂಗಮೇಶ ಭಾವಿದೊಡ್ಡಿ, ವಿನೋದಕುಮಾರ ಶಿಂಧೆ, ಸೂರ್ಯಕಾಂತ ಸಾಧುರೆ, ವಿಜಯಕುಮಾರ ಜಡಗೆ, ಅನೀಲಕುಮಾರ ಮಡೆ, ಬೀರಗೊಂಡ ಘೋಡಂಪಳ್ಳೆ, ಕೈಲಾಸ ವಿಳಾಸಪೂರ, ಧನರಾಜ ಮೇತ್ರೆ, ಗುರು ನೇಮತಾಬಾದ, ವೆಂಕಟ ವಡ್ಡಿಯರ, ಅನೀಲಕುಮಾರ ಮಡೆ, ವಿಶಾಲ ದೊಡ್ಡಿ, ಜೇಮ್ಸ್ ಮಮದಾಪೂರೆ, ಸಂದೀಪ ಕಾಂಟೆ, ರಾಜಕುಮಾರ ಗುಮ್ಮೆ, ವಿಜಯಕುಮಾರ ಜಡಗೆ, ಸೂರ್ಯಕಾಂತ ಸಾಧುರೆ, ಸೇರ ಅಲಿ,ವಿಜಯಕುಮಾರ ಜಡಗೆ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...