ಔರಾದ್‌ | ಜನವಸತಿ ಪ್ರದೇಶದಲ್ಲಿ ಸ್ಮಶಾನ ಭೂಮಿ ಮಂಜೂರು : ಸ್ಥಳೀಯರ ಆರೋಪ

Date:

ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಂಬಂಧಿಸಿದ ಗೊಂದಲ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಸರ್ವೇ ನಂ.29/3ರಲ್ಲಿ ಹಲವು ವರ್ಷಗಳಿಂದ ಜನವಸತಿ ಇರುವುದಾಗಿ ಸ್ಥಳೀಯರು ಹೇಳುತ್ತಿದ್ದರೆ, ಆದರೆ, ಇದೇ ಜಾಗವನ್ನು 2022-23ರ ಪಹಣಿ ಮರುಸೃಜನ ಪ್ರಕ್ರಿಯೆಯಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ 20 ಗುಂಟೆ ಭೂಮಿಯನ್ನು ಕಾಯ್ದಿರಿಸಿರುವುದು ವಿಚಾರ ದಾಖಲೆಗಳಿಂದ ತಿಳಿದು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮತ್ತು ಗೊಂದಲ ಹೆಚ್ಚಾಗಿದೆ.

ದೀರ್ಘಕಾಲದಿಂದ ಜನರು ವಾಸಿಸುತ್ತಿರುವ ಜಾಗವನ್ನು ಸ್ಮಶಾನಕ್ಕೆ ಮೀಸಲಿಡುವುದು ಸರಿಯಲ್ಲ. ಸರ್ಕಾರದ ದಾಖಲೆಗಳಲ್ಲಿ ಇಂತಹ ವ್ಯತ್ಯಾಸ ಕಾಣಿಸಿಕೊಳ್ಳುತ್ತಿರುವುದು ಆಡಳಿತಾತ್ಮಕ ದೋಷವೇ ಅಥವಾ ನಿರ್ಲಕ್ಷ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಸ್ಮಶಾನ ಭೂಮಿಯ ನಿಖರ ಗುರುತನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಸ್ಥಳೀಯ ನಿವಾಸಿ ಶಿವಕುಮಾರ್ ಸಾದುರೆ ಮಾತನಾಡಿ, ʼಜನವಸತಿ ಇರುವ ಜಾಗವನ್ನು ಸ್ಮಶಾನಕ್ಕೆ ಮೀಸಲಿಡುವುದು ನ್ಯಾಯಸಮ್ಮತವಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಸ್ಪಷ್ಟನೆ ನೀಡಬೇಕುʼ. ಸ್ಮಶಾನಕ್ಕಾಗಿ ತತ್‌ಕ್ಷಣ ಜಮೀನು ಗುರುತಿಸಬೇಕುʼ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ʼಜಲ ಜೀವನʼಕ್ಕೆ ಗ್ರಹಣ, ಹನಿ ನೀರಿಗೂ ತತ್ವಾರ; ಬೇಕಿದೆ ದೂರಗಾಮಿ ಪರಿಹಾರ-ಭಾಗ-1

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...

ಔರಾದ್‌ | ರಸ್ತೆ ದುರಸ್ತಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

ಔರಾದ್‌ ತಾಲೂಕಿನ ಮಮದಾಪುರ ಗ್ರಾಮದಿಂದ ಅಲ್ಲಾಪುರ ಗ್ರಾಮದ ಮಾರ್ಗವಾಗಿ ಮಹಾರಾಷ್ಟ್ರದ ಕುನಮಾರಪಳ್ಳಿ...