ಔರಾದ್‌ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಮನೆ-ಮನೆಗೆ ಭೇಟಿ ನೀಡಿದ ಗ್ರಾ.ಪಂ.ಅಧಿಕಾರಿಗಳು

Date:

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಅಧಿಕಾರಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಸುಧಾರಿಸುವ ದಿಸೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಮನೆ-ಮನೆಗೆ ಭೇಟಿ ನೀಡುವ ಮಹತ್ವದ ಕೆಲಸಕ್ಕೆ ಮುಂದಾಗಿದ್ದಾರೆ.

ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಹಾಗೂ ಆಡಳಿತಾಧಿಕಾರಿ ರತಿಕಾಂತ ನೇಳಗೆ ನೇತ್ರತ್ವದಲ್ಲಿ ಭಾನುವಾರ ಶೆಂಬೆಳ್ಳಿ ಗ್ರಾಮದ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸುಧಾರಣೆ ಹಾಗೂ ನಿರಂತರ ಅಧ್ಯಯನಕ್ಕೆ ಕ್ರಿಯಾಯೋಜನೆ ರೂಪಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಶೆಂಬೆಳ್ಳಿ ಗ್ರಾಮದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳ ಮನೆಗೆ ಭೇಟಿ ನೀಡಿ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತೆ, ಕಲಿಕೆಯ ಬಗ್ಗೆ ವಿಚಾರಿಸಿ, ಭಯದಿಂದ ಪರೀಕ್ಷೆ ಬರೆಯದೆ ಆತ್ಮವಿಶ್ವಾಸದಿಂದ ಪರೀಕ್ಷೆಗೆ ಸಜ್ಜಾಗುವಂತೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 02 24 at 9.34.58 AM 1 1
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಪೋಷಕರೊಂದಿಗೆ ಪರೀಕ್ಷೆ ಸಿದ್ಧತೆ ಕುರಿತು ಚರ್ಚಿಸಿದರು.

ಪಿಡಿಒ ನಾಗೇಶ ಮುಕರಂಬೆ ಮಾತನಾಡಿ, ʼಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯ. ಉಳಿದಿರುವ ದಿನಗಳನ್ನು ಸೂಕ್ತ ಕ್ರಿಯಾ ಯೋಜನೆಯಂತೆ ಸಮರ್ಪಕವಾಗಿ ಬಳಸಿಕೊಂಡು ಅಭ್ಯಾಸ ನಡೆಸಬೇಕುʼ ಎಂದು ಸಲಹೆ ನೀಡಿದರು.

ಆಡಳಿತಾಧಿಕಾರಿ ರತಿಕಾಂತ ನೇಳಗೆ ಮಾತನಾಡಿ, ʼವಿದ್ಯಾರ್ಥಿಗಳು ಟಿವಿ ಮತ್ತು ಮೊಬೈಲ್ ಬಳಕೆಯನ್ನು ನಿಯಂತ್ರಿಸಿ, ಸಮಯ ವ್ಯರ್ಥವಾಗದಂತೆ ನಿಗದಿತ ವೇಳಾಪಟ್ಟಿಯಂತೆ ಓದಿಗೆ ಒತ್ತು ನೀಡಬೇಕು. ಮಕ್ಕಳ ಅಧ್ಯಯನ ಹಾಗೂ ಆರೋಗ್ಯದ ಬಗ್ಗೆ ಪೋಷಕರು ವಿಶೇಷ ಕಾಳಜಿವಹಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕೆ ಜಿಲ್ಲಾಡಳಿತ ವಿಶೇಷವಾಗಿ ಶ್ರಮಿಸುತ್ತಿದ್ದು, ಎಲ್ಲರೂ ಜೋಡಿಸಬೇಕುʼ ಎಂದರು.

ಫಲಿತಾಂಶ ಸುಧಾರಿಸಲು ಅಧಿಕಾರಿಗಳಿಗೆ ಹೊಸ ಟಾಸ್ಕ್‌ :

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಬೀದರ್ ಜಿಲ್ಲಾ ಪಂಚಾಯತ್ ವತಿಯಿಂದ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳ ಸಹಯೋಗದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಗುಣಮಟ್ಟ ಹೆಚ್ಚಿಸಲು ಮತ್ತು ಫಲಿತಾಂಶ ಉತ್ತಮಗೊಳಿಸಲು ಮಾರ್ಗದರ್ಶನ ಹಾಗೂ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ : ಬೀದರ್‌ | ಮಾಧ್ಯಮಗಳಲ್ಲಿ ಮಹಿಳೆಯರು ಹೆಚ್ಚು ತೊಡಗಿಕೊಳ್ಳಲಿ : ಬಸವರಾಜ ಹೊರಟ್ಟಿ

ವಿದ್ಯಾರ್ಥಿಗಳ ಅಧ್ಯಯನ ಪ್ರಗತಿಯನ್ನು ಪರಿಶೀಲಿಸಲು, ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲು, ಶಿಕ್ಷಕರೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲು, ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಸಿಇಒ ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...